ಮೇ.20ರೊಳಗೆ ಎಸ್ ಸಿ‌ಪಿ- ಟಿಎಸ್ ಪಿ ಕ್ರಿಯಾ ಯೋಜನೆ ಸಲ್ಲಿಸಲು ಗೋವಿಂದ ಕಾರಜೋಳ ಸೂಚನೆ


Team Udayavani, May 12, 2020, 6:06 PM IST

ಮೇ.20ರೊಳಗೆ ಎಸ್ ಸಿ‌ಪಿ- ಟಿಎಸ್ ಪಿ ಕ್ರಿಯಾ ಯೋಜನೆ ಸಲ್ಲಿಸಲು ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು; 2020-21 ನೇ ಸಾಲಿನ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಉಪ ಯೋಜನೆಯಡಿ ಎಲ್ಲಾ ಇಲಾಖೆಗಳು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ  ಮೇ  20ರೊಳಗೆ ಸಿದ್ದಪಡಿಸಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಸೂಚಿದ್ದಾರೆ.

ವಿಕಾಸಸೌಧದಲ್ಲಿಂದು 2020-21 ನೇ ಸಾಲಿನ ಎಸ್‍ಸಿಪಿ ಮತ್ತು ಎಸ್‍ಟಿಪಿ ಕ್ರಿಯಾ   ಯೋಜನೆಯ ಕುರಿತು ನೊಡೆಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗ  ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು,   ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪರಿಶಿಷ್ಟ ಜಾತಿ, ಪಂಗಡ ,ಗಿರಿಜನ ಉಪಯೋಜನೆ ಕುರಿತ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾಯೋಜನೆಯನ್ನು ಮಂಡಿಸಿ, ಅನುಮೋದನೆ ಪಡೆಯಬೇಕಿದೆ.

ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯುಶ್ಮಾನ್ ಭಾರತ ಯೋಜನೆಯಡಿ 200ಕೋಟಿ ರೂ ಖರ್ಚು ಮಾಡುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ವರ್ಗದ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎನ್ನುವುದನ್ನು   ಪರಿಶೀಲಿಸಿ ತಲುಪುವಂತೆ ಮಾಡಬೇಕು. ಈ ಯೋಜನೆಯಡಿ ನಿರ್ಮಿಸಲಿರುವ ಆಸ್ಪತ್ರೆ ಕಟ್ಟಡಗಳು ಪರಿಶಿಷ್ಟ ಜಾತಿ ಮತ್ತು ವರ್ಗ ಸಮುದಾಯವು ಹೆಚ್ವಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ನಿರ್ಮಿಸಬೇಕು. ಶುಚಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಈ ಅನುದಾನವನ್ನು ಅದೇ ಸಮುದಾಯದ ಏಳಿಗೆಗೆ ಉಪಯೋಗಿಸಬೇಕು.

ಕಳೆದ ವರ್ಷ ಅಪೂರ್ಣಗೊಂಡ ಮನೆಗಳನ್ನು ಪೂರ್ಣಗೊಳಿಸಬೇಕು.  ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ  ಗ್ರಾಮಗಳಲ್ಲಿದ್ದಾರೆ ಅವರೆಲ್ಲರಿಗೂ ಉದ್ಯೋಗ ಖಾತರಿ ಯೋಜನೆಯಡಿ  ಪರಿಶಿಷ್ಟ ಜಾತಿ ಮತ್ತು ಪಂಗಡದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡುಗಳನ್ನು ನೀಡಬೇಕು.  ಕೃಷಿ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ರೈತರ ಕುರಿತು ಮಾಹಿತಿ ಸಂಗ್ರಹಿಸಿ, ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು. ಗಂಗಾ ಕಲ್ಯಾಣ ಯೋಜನೆಯು ಅತ್ತುತ್ತಮವಾದ ಯೋಜನೆಯಾಗಿದ್ದು, ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಕ್ರಮಕೈಗೊಳ್ಳಬೇಕು. ಈ ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ವಸತಿ ಶಾಲೆಗಳ ಆವರಣದಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಬೇಕು. ಅಂತರ ಜಲ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳ ಆವರಣದಲ್ಲಿ ಸಸಿ ನೆಟ್ಟು ವನಸಿರಿಗೂ ಆದ್ಯತೆ ನೀಡಬೇಕು.‌ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಯ ಮಾಹಿತಿಯನ್ನು ಸಂಗ್ರಹಿಸಬೇಕು. ಯೋಜನೆವಾರು ಫಲಾನುಭವಿಗಳ ವಿವರವನ್ನು ಆಪ್ ನಲ್ಲಿ ಅಪ್ ಲೋಡ್ ಮಾಡಬೇಕು. ಬಡತನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಸಮುದಾಯದ ಕಲ್ಯಾಣಕ್ಕಾಗಿ ಸ್ವಯಂ ಪ್ರೇರಣೆಯಿಂದ ಅನುಷ್ಟಾನಗೊಳಿಸಿ, ಸಮುದಾಯದ ಏಳಿಗಾಗಿ ಶ್ರಮಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ ನಾಯಕ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರರಾದ ಶ್ರೀ ಇ. ವೆಂಕಟಯ್ಯ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ಶ್ರೀ ವಿ. ಶ್ರೀನಿವಾಸ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.