ಉತ್ತಮ ರಸ್ತೆ ನಿರ್ಮಾಣಕ್ಕೆ ಒತ್ತು


Team Udayavani, May 16, 2020, 7:45 AM IST

ಉತ್ತಮ ರಸ್ತೆ ನಿರ್ಮಾಣಕ್ಕೆ ಒತ್ತು

ಹೊಳಲ್ಕೆರೆ: ಪಟ್ಟಣದ ಒಂದನೇ ವಾರ್ಡ್‌ ಅಭಿವೃದ್ಧಿಗೆ 3.25 ಕೋಟಿ ರೂ., ಬಯಲು ಗಣಪತಿ ದೇವಸ್ಥಾನದ ರಸ್ತೆ ಅಭಿವೃದ್ಧಿಗೆ 200 ಲಕ್ಷ ರೂ., ಚರಂಡಿ ಕಾಮಗಾರಿಗೆ 75 ಲಕ್ಷ ರೂ., ಸಿಸಿ ರಸ್ತೆ ನಿರ್ಮಾಣಕ್ಕೆ 50 ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಬಯಲು ಗಣಪತಿ ದೇವಸ್ಥಾನದ ಬಳಿ ರಸ್ತೆ ಆಗಲೀಕರಣ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಐತಿಹಾಸಿಕ ದೇವಸ್ಥಾನಕ್ಕೆ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಪ್ರವಾಸಿ ಕ್ಷೇತ್ರವಾಗಿರುವ ಇಲ್ಲಿಗೆ ಬಂದು ಹೋಗುವ ಭಕ್ತರಿಗೆ ರಸ್ತೆ ಸೌಲಭ್ಯ ಕಲ್ಪಿಸಲು ರಸ್ತೆ ಆಗಲಿಕರಣದ ಜತೆ ಏಕಮುಖ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಗಣಪತಿ ದೇವಸ್ಥಾನದಿಂದ ಪಿಎಲ್‌ಡಿ ಬ್ಯಾಂಕ್‌ ಹತ್ತಿರದಲ್ಲಿರುವ ಶಿವಮೊಗ್ಗ ರಸ್ತೆಗೆ ಲಿಂಕ್‌ ಮಾಡಲು ದೇವಸ್ಥಾನದ ಹಿಂಬದಿಯಲ್ಲಿ ರಸ್ತೆಯನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ಕೋಟೆ ಜನವಸತಿ ಪ್ರದೇಶದಿಂದ ಕೊಳಚೆ ನೀರು ಹರಿಯಲು ಉತ್ತಮ ಚರಂಡಿ ಸೌಲಭ್ಯವಿಲ್ಲದೆ ಕೊಳಚೆ ನೀರು ಗುಂಡಿಗಳಲ್ಲಿ ತುಂಬಿಕೊಂಡು ಜನಜೀವನಕ್ಕೆ ತೊಂದರೆಯಾಗಿದೆ. ಕೊಳಚೆ ನಿಂತು ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳಬಹುದು. ಹಾಗಾಗಿ ಕೊಳಚೆ ಗುಂಡಿಗಳನ್ನು ಮುಚ್ಚಿ ವ್ಯವಸ್ಥಿತವಾದ ಚರಂಡಿ ನಿರ್ಮಿಸಿಕೊಡಬೇಕೆಂದು ವಾರ್ಡ್‌ ಸದಸ್ಯೆ ಎಚ್‌.ಆರ್‌. ನಾಗರತ್ನ ವೇದಮೂರ್ತಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಏಕಮುಖ ಸಿಸಿ ರಸ್ತೆ, ಒಳಚರಂಡಿ, ರಸ್ತೆಯ ಎರಡು ಬದಿ ವಿದ್ಯುತ್‌ ದೀಪದ ಕಂಬಗಳನ್ನು ಅಳವಡಿಸುತ್ತಿರುವುದಾಗಿ ತಿಳಿಸಿದರು.

ಒಂದನೇ ವಾರ್ಡ್‌ನಲ್ಲಿರುವ ಬಡವರಿಗೆ 65 ಮನೆಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಡಲಾಗಿದೆ. ತಲಾ 5 ಲಕ್ಷ ರೂ.ಅನುದಾನ ನೀಡಿದ್ದು, ಆರ್‌ಸಿಸಿ ಮನೆಯನ್ನು ನಿರ್ಮಿಸಿಕೊಡಲಾಗುತ್ತಿದೆ. ವಾರ್ಡ್ ನಲ್ಲಿರುವ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ಮಾಡಲಾಗುತ್ತದೆ. ಗಣಪತಿ ದೇವಸ್ಥಾನದ ಮುಂದಿನ ಕಲ್ಯಾಣಮಂಟಪ ರಸ್ತೆಯ ಮಟ್ಟದಿಂದ 5 ಅಡಿ ತಗ್ಗಿನಲ್ಲಿದೆ. ಮಳೆಗಾಲದಲ್ಲಿ ನೀರು ಕಲ್ಯಾಣಮಂಟಪಕ್ಕೆ ನುಗ್ಗುತ್ತವೆ. ತಗ್ಗನ್ನು ಭರ್ತಿ ಮಾಡಿ ಕಲ್ಯಾಣಮಂಟಪದ ಸುತ್ತಲಿನ ಆವರಣಕ್ಕೆ ಕಾಂಕ್ರಿಟ್‌ ಹಾಕಲಾಗುತ್ತದೆ ಎಂದರು.

ಗುತ್ತಿಗೆದಾರ ರಾಜಣ್ಣ, ಪಪಂ ಸದಸ್ಯರಾದ ಮಲ್ಲಿಕಾರ್ಜುನ್‌, ಸುಧಾ ಬಸವರಾಜ್‌, ಮುರುಗೇಶ್‌, ಎಪಿಎಂಸಿ ನಿರ್ದೇಶಕ ಮರುಳಸಿದ್ದೇಶ್ವರ, ಬಸವರಾಜ್‌, ದೇವಸ್ಥಾನದ ಸಮಿತಿ ಸದಸ್ಯರಾದ ರಾಘವೇಂದ್ರ, ನಟರಾಜ್‌ ಆಚಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.