ನರೇಗಾ ಯೋಜನೆ ಕಾರ್ಮಿಕರ ಅಭಿವೃದ್ಧಿಗೆ ಪೂರಕ

Team Udayavani, May 16, 2020, 4:22 PM IST

ನರೇಗಾ ಯೋಜನೆ ಕಾರ್ಮಿಕರ ಅಭಿವೃದ್ಧಿಗೆ ಪೂರಕ

ನರೇಗಲ್ಲ: ಗ್ರಾಮೀಣ ಪ್ರದೇಶಗಳ ಕೂಲಿ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಬಗ್ಗೆ ಪ್ರತಿ ಗ್ರಾಪಂ ಪಿಡಿಒ ಮತ್ತು ಕಾರ್ಯದರ್ಶಿಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ನರೇಗಾ ಅಡಿ ಕೂಲಿ ಪಡೆಯುವುದು ಕಾರ್ಮಿಕರ ಹಕ್ಕಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಸಮೀಪದ ನಿಡಗುಂದಿ ಗ್ರಾಮದಲ್ಲಿ ಗ್ರಾಪಂ ಹಾಗೂ ಕೃಷಿ ಇಲಾಖೆ ವತಿಯಿಂದ ಎಂಜಿಎನ್‌ಆರ್‌ಇಜಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಬದು ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚಿಸಿದರು.

ನರೇಗಾ ಯೋಜನೆ ಜಾರಿಗೆ ಬಂದು 15 ವರ್ಷಗಳೇ ಕಳೆದರೂ ಪ್ರಚಾರ ಮತ್ತು ಅರಿವಿನ ಕೊರತೆಯಿಂದ ಯೋಜನೆ ಲಾಭ ಜನರಿಗೆ ತಲುಪುತ್ತಿಲ್ಲ. ಅನಕ್ಷರಸ್ಥ ಕೂಲಿ ಕಾರ್ಮಿಕರಿಗೆ ಸಾಮಾಜಿಕ ಜಾಲತಾಣದ ಸಂದೇಶಗಳು ಅರ್ಥವಾಗುವುದಿಲ್ಲ. ಹಾಗಾಗಿ ಪಿಡಿಒಗಳು, ಸಹಾಯಕ ಕಾರ್ಯದರ್ಶಿಗಳು ಸೇರಿದಂತೆ ಪಂಚಾಯಿತಿ ಸಿಬ್ಬಂದಿ ನರೇಗಾ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು. ಸಾಮಾನ್ಯ ಕೂಲಿಕಾರನಿಗೆ ಕೆಲಸ ನೀಡುವುದು ಕಚೇರಿಯಲ್ಲಿ ಕುಳಿತು ಕೆಲಸ ಮಾಡಿದರೆ ಸಾಧವಿಲ್ಲ. ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿ ಉದ್ಯೋಗ ಚೀಟಿ ನೀಡಬೇಕು. ತಂಡಗಳನ್ನು ರಚಿಸಿ ಕೊಂಡು ಗ್ರಾಮಗಳಲ್ಲಿರುವ ಜನಸಂಖ್ಯೆ ಕುಟುಂಬ ಹಾಗೂ ವಲಸೆ ಕಾರ್ಮಿಕರ ಪೂರ್ಣ ಮಾಹಿತಿಯನ್ನು ಕಲೆ ಹಾಕಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂದರು.

ಜಿಪಂ ಉಪಾಧ್ಯಕ್ಷೆ ಮಲ್ಲಮ್ಮ ಬಿಚ್ಚಾರ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದುನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷೆ ಬಸವಣ್ಣೆವ್ವ ಮಡಿವಾಳರ, ಉಪಾಧ್ಯಕ್ಷೆ ಗೀತಾ ಮಾದರ, ಈರಪ್ಪ ಬಿಚ್ಚಾರ, ಫಕೀರಪ್ಪ ಕುಕನೂರ, ಸುರೇಶ ಗಂಗರಗೊಂಡ, ಹುಚ್ಚಿರಪ್ಪ ಗಡಾದ, ಎಸ್‌.ಕೆ. ಚಂದಾಲವರ, ತಾಪಂ ಇಒ ಸಂತೋಷಕುಮಾರ ಪಾಟೀಲ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವೀಂದ್ರಗೌಡ ಪಾಟೀಲ, ಪಿಡಿಒ ಬಿ.ಪಿ. ಓಲೇಕಾರ ಸೇರಿದಂತೆ 519 ಕೂಲಿ ಕಾರ್ಮಿಕರು ಇದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.