ಲಾಕ್‌ಡೌನ್‌ ಸಡಿಲಿಕೆ: ಸಾಮಾಜಿಕ ಅಂತರ ಮರೆತ ಜನ‌

Team Udayavani, May 18, 2020, 8:26 AM IST

lock-sadilike

ಕೊಪ್ಪಳ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಲವು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿವರೆಗೂ ಸೋಂಕು ಕಾಣಿಸಿಕೊಂಡಿಲ್ಲದಿರುವುದು ನೆಮ್ಮದಿ ವಿಷಯ. ಆದರೆ ವೈರಸ್‌ ಬಗ್ಗೆ ಆತಂಕವಿದ್ದರೂ ಜನತೆಯಲ್ಲಿ  ಸಾಮಾಜಿಕ ಅಂತರವೇ ಕಾಣುತ್ತಿಲ್ಲ. ಲಾಕ್‌ ಡೌನ್‌ನಿಂದ ವಿನಾಯಿತಿ ಸಿಕ್ಕ ಬಳಿಕವಂತೂ ಅಂತರ ಕಾಯ್ದುಕೊಳ್ಳುವುದನ್ನೇ ಮರೆತು ಬಿಟ್ಟಿದ್ದಾರೆ. ಕೋವಿಡ್‌-19 ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ.

ಮುಂದುವರಿದ ರಾಷ್ಟ್ರಗಳೇ ಕೊರೊನಾ ಭೀತಿಗೆ ತಲ್ಲಣಗೊಂಡಿವೆ. ನಿಯಂತ್ರಣಕ್ಕೆ ಎಷ್ಟೆಲ್ಲ ಪ್ರಯತ್ನ ಮಾಡಿದರೂ ಸಾಧ್ಯವಾಗುತ್ತಿಲ್ಲ. ಆದರೆ ಸೋಂಕು ನಿರ್ಮೂಲನೆಗೆ ಸಾಮಾಜಿಕ ಅಂತರವೊಂದೇ ದಿವ್ಯ ಔಷ ಧ ಎಂದು ವಿಶ್ವ ಆರೋಗ್ಯ ಸಂಸ್ಥೆ ಘಂಟಾ ಘೋಷವಾಗಿ ಹೇಳುತ್ತಿದೆ. ಸಾಮಾಜಿಕ ಅಂತರ ಒಬ್ಬರಿಂದ ಒಬ್ಬರ ನಡುವೆ ಅಂತರ ಕಾಯ್ದುಕೊಳ್ಳುವುದಾಗಿದೆ. ಗಣ್ಯಾತೀತರು, ಅ ಧಿಕಾರಿ ವರ್ಗವು ಲಾಕ್‌ಡೌನ್‌ ವೇಳೆ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ನಿರ್ಮೂಲನೆಗೆ ಕೈ ಜೋಡಿಸಬೇಕೆಂದು ಹೇಳುತ್ತಿದೆ.

ಮನೆ ಬಿಟ್ಟು ಯಾರೂ ಹೊರಗೆ ಬರಬೇಡಿ. ಅಗತ್ಯವಿದ್ದರೆ ಮಾತ್ರ ಬನ್ನಿ, ಗುಂಪು ಸೇರಬೇಡಿ, ಜನದಟ್ಟಣೆ ಇರುವ ಸ್ಥಳಕ್ಕೆ ತೆರಳಬೇಡಿ ಎಂದು ಹೇಳುತ್ತಿದೆ. ಆದರೆ ಜಿಲ್ಲೆಯ ಜನರು ಮಾತ್ರ  ಅದನ್ನು ಸರಿಯಾಗಿ ಪಾಲಿಸುತ್ತಿಲ್ಲ. ಸಂಸದ ಸಂಗಣ್ಣ ಕರಡಿ ಸೇರಿದಂತೆ ಜಿಲ್ಲೆಯ ಐದು ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿ ಸುನೀಲ್‌ ಕುಮಾರ, ಎಸ್‌ಪಿ ಜಿ. ಸಂಗೀತಾ, ನಗರಸಭೆ, ಪಪಂ, ಪುರಸಭೆ ಸೇರಿದಂತೆ ಗ್ರಾಪಂ ಹಂತದಲ್ಲೂ  ನಿತ್ಯ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಅಧಿ ಕಾರಿ ವರ್ಗವಂತೂ ತಮ್ಮ ಜೀವದ ಹಂಗು ತೊರೆದು ಹಗಲು-ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಬಗ್ಗೆ ಭಯ ಬೇಡ, ಆದರೆ ಎಚ್ಚರವಿರಲಿ ಎನ್ನುವ ಸಂದೇಶ  ನೀಡುತ್ತಿದ್ದಾರೆ. ಲಾಕ್‌ಡೌನ್‌ ಬಳಿಕ ಆರಂಭದಲ್ಲಿ ಸಾಮಾಜಿಕ ಅಂತರಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆತಿತ್ತು. ನಂತರ ವಿನಾಯಿತಿಗಳು  ದೊರೆತ ಬಳಿಕವಂತೂ ಜಿಲ್ಲೆಯ ಜನರು ಅಂತರ ಕಾಯ್ದುಕೊಳ್ಳುವುದನ್ನೇ ಮರೆತುಬಿಟ್ಟಿದ್ದಾರೆ. ಜಿಲ್ಲಾ  ಕೇಂದ್ರದಲ್ಲಂತೂ ಗುಂಪು ಗುಂಪಾಗಿ ಸುತ್ತಾಟ, ಎಲ್ಲೆಂದರಲ್ಲಿ ಓಡಾಟ ಹೆಚ್ಚಾಗುತ್ತಿದೆ. ಹಲವು ಅಂಗಡಿಗಳ ಮುಂದೆ ಅಂತರ ಪಾಲನೆ ಆಗುತ್ತಿಲ್ಲ.

ಪೊಲೀಸರು, ನಗರಸಭೆ ಅ ಧಿಕಾರಿಗಳು ನಿತ್ಯವೂ ಲಾಠಿ ಹಿಡಿದು ರಸ್ತೆಯುದ್ದಕ್ಕೂ ಸಂಚಾರ  ನಡೆಸಿ ಜನರಲ್ಲಿ ಎಚ್ಚರ ಮೂಡಿಸುತ್ತಿದ್ದರೂ ಜನ ಜಾಗೃತರಾಗುತ್ತಿಲ್ಲ. ಇದರಿಂದ ಅ ಧಿಕಾರಿ ವರ್ಗ, ಪೊಲೀಸರೇ ಬೇಸತ್ತು ಹೋಗಿದ್ದಾರೆ. ಕೊನೆಗೂ ಅಧಿ ಕಾರಿಗಳು ನಗರದಲ್ಲಿನ ಅಂಗಡಿ-ಮುಂಗಟ್ಟುಗಳ ಮುಂದೆ ಅಂತರ  ಕಾಯ್ದುಕೊಳ್ಳದೇ ಇರುವುದು ಕಂಡುಬಂದರೆ ಅಂತಹ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡುತ್ತಿರುವುದಲ್ಲದೇ, ದಂಡ ಹಾಕಿ ತೆರಳುತ್ತಿದ್ದಾರೆ.

* ದತ್ತು ಕಮ್ಮಾರ

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.