ವಲಸಿಗರು ಶ್ರಮಿಕ ರೈಲಿನಲ್ಲಿ ಯುಪಿಗೆ


Team Udayavani, May 18, 2020, 8:39 AM IST

valasigaaru

ಬಳ್ಳಾರಿ: ಜಿಲ್ಲೆಯ ಜಿಂದಾಲ್‌ ಕಾರ್ಖಾನೆ ಸೇರಿದಂತೆ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಒಟ್ಟು 2904 ವಲಸೆ ಕಾರ್ಮಿಕರು ಬಳ್ಳಾರಿ ಮತ್ತು ಹೊಸಪೇಟೆ ರೈಲು ನಿಲ್ದಾಣಗಳಿಂದ ಪ್ರತ್ಯೇಕ ಎರಡು ವಿಶೇಷ  ಶ್ರಮಿಕ ರೈಲುಗಳಲ್ಲಿ ಭಾನುವಾರ ಪ್ರಯಾಣ ಬೆಳೆಸಿದರು. ಬಳ್ಳಾರಿಯಿಂದ 1452 ಮತ್ತು ಹೊಸಪೇಟೆಯಿಂದ 1452 ಯುಪಿ ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದರು.

ಬಳ್ಳಾರಿ ನಿಲ್ದಾಣದಲ್ಲಿ ಡಿಸಿ ಎಸ್‌.ಎಸ್‌. ನಕುಲ್‌, ಎಸ್ಪಿ ಸಿ.ಕೆ. ಬಾಬಾ, ಜಿಪಂ ಸಿಇಒ ಕೆ.ನಿತೀಶ್‌, ಹೆಚ್ಚುವರಿ ಎಸ್‌ಪಿ ಲಾವಣ್ಯ, ಪ್ರಭಾರಿ ಐಎಎಸ್‌ ಈಶ್ವರ್‌ ಕಾಂಡೂ, ಸಹಾಯಕ ಆಯುಕ್ತ ರಮೇಶ್‌ ಕೋನರೆಡ್ಡಿ, ಹೊಸಪೇಟೆ ರೈಲು ನಿಲ್ದಾಣದಲ್ಲಿ ಸಹಾಯಕ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌, ತಹಶ್ರೀಲ್ದಾರ್‌ ವಿಶ್ವನಾಥ್‌, ಆಹಾರದ ಬ್ಯಾಗ್‌ಗಳನ್ನು ವಿತರಿಸಿ ಕಾರ್ಮಿಕರನ್ನು ಬೀಳ್ಕೊಟ್ಟರು.

ಈ ವಲಸೆ ಕಾರ್ಮಿಕರನ್ನು ಬಳ್ಳಾರಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು  ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ, ಅಲ್ಲಿಯೇ 835 ರೂ.ಗಳ ಟಿಕೆಟ್‌ನ್ನು ನೀಡಲಾಗಿತ್ತು. ಅವರಿಗೆ ನೀಡಲಾದ ಟಿಕೆಟ್‌ ಹಿಂಬದಿಯಲ್ಲಿ ಬರೆಯಲಾದ ಸೀಟ್‌ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್‌ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ಬೆಳಗ್ಗೆ 7ರಿಂದಲೇ ತಿಳಿಸುತ್ತಿದ್ದರು.

ಕಾರ್ಮಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬಿಸ್ಕತ್‌  ಪ್ಯಾಕೇಟ್‌, ಎರಡು ಬ್ರೆಡ್‌ ಪ್ಯಾಕ್‌, ಮೂರು ಲೀಟರ್‌ ನೀರು, ಎರಡು ಪ್ಯಾಕೇಟ್‌ ಆಹಾರ ಪೊಟ್ಟಣ, ಮಿರ್ಚಿ ಬಜ್ಜಿ ಹಾಗೂ ಇನ್ನಿತರ ಆಹಾರ ಸಾಮಗ್ರಿಗಳುಳ್ಳ ಕಿಟ್‌ಗಳನ್ನು ಪ್ರತಿಯೊಬ್ಬ  ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು. ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ಪ್ರಯಾಣಿಕರಿಗೆ ಸ್ಯಾನಿಟೈಸರ್‌ ಕೈಗೆ ಸಿಂಪಡಿಸಲಾಯಿತು.

ರೆಡ್‌ಕ್ರಾಸ್‌ ಸಂಸ್ಥೆಯವರು ಇದೇ ಸಂದರ್ಭದಲ್ಲಿ ಮಾಸ್ಕ್ಗಳನ್ನು  ವಿತರಿಸಿದರು. ಉತ್ತರಪ್ರದೇಶದ ಆಗ್ರಾ, ಅಲಿಘರ್‌, ಅಜಂಘರ್‌, ಲಕ್ನೋ, ಅಲಹಾಬಾದ್‌, ಅಮೇಥಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು. ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌, ಎಸ್ಪಿ ಸಿ.ಕೆ. ಬಾಬಾ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ ಅವರು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದತೆಗಳನ್ನು ಪರಿಶೀಲಿಸಿದರು.

ಹೊಸಪೇಟೆಯಲ್ಲಿ ಸಹಾಯಕ ಆಯುಕ್ತ ಶೇಖ್‌ ತನ್ವೀರ್‌ ಅಸೀಫ್‌ ಹಾಗೂ ತಹಶೀಲ್ದಾರ್‌ ವಿಶ್ವನಾಥ ಅವರು ಬೆಳಗ್ಗೆಯಿಂದಲೇ ಖುದ್ದು ಸ್ಥಳದಲ್ಲಿ ಉಪಸ್ಥಿತರಿದ್ದು ವಲಸಿಗರನ್ನು ಅತ್ಯಂತ  ಸುರಕ್ಷಿತವಾಗಿ ಕಳುಹಿಸಿಕೊಟ್ಟರು. ಉತ್ತರ ಪ್ರದೇಶಕ್ಕೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣವಾಗಲಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್‌ ಸೇರಿದಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.