ನೈಜೀರಿಯ: ಸೋಂಕಿಗಿಂತ ಹಸಿವಿನ ಭಯ ಹೆಚ್ಚು


Team Udayavani, May 18, 2020, 4:45 PM IST

ನೈಜೀರಿಯ: ಸೋಂಕಿಗಿಂತ ಹಸಿವಿನ ಭಯ ಹೆಚ್ಚು

ಮಣಿಪಾಲ: ಕೋವಿಡ್‌ ಹೋರಾಟದಲ್ಲಿ ಹಿಂದುಳಿದಿರುವ ಆಫ್ರಿಕ ಖಂಡದ ನೈಜಿರೀಯದ ಜನರು ಹೊಟ್ಟೆಗೆ ಹಿಟ್ಟಿಲ್ಲದೆ ಕಂಗಾಲಾಗಿದ್ದಾರೆ.

ಸದಾ ಜನಜಂಗುಳಿಯಿಂದ ಗಿಜುಗುಡುತ್ತಿದ್ದ ನೈಜೀರಿಯದ ಓರಿಲ್‌ ನಗರದಲ್ಲಿ ಸದ್ಯ ನೀರವ ಮೌನ ನೆಲೆಸಿದೆ. ಹೊಟ್ಟೆಪಾಡಿಗಾಗಿ ಕಟ್ಟಿಕೊಂಡ ತಗಡಿನ ಅಂಗಡಿಗಳ ಬಾಗಿಲುಗಳು ತುಕ್ಕು ಹಿಡಿಯುತ್ತಿದ್ದು, ಜನರ ಸುಳಿವು, ಆರ್ಥಿಕ ಚಟುವಟಿಕೆಗಳಿಲ್ಲದೆ ರಸ್ತೆಗಳು ಭಣಗುಡುತ್ತಿವೆ.

ವೈರಸ್‌ನಿಂದ ಭಯಾನಕ ಡಕಾಯಿತರು
ಜೀವನೋಪಾಯಕ್ಕಾಗಿ ನೈರ್ಮಲ್ಯ , ಕೂಲಿನಾಲಿ, ಮನೆಗೆಲಸ ಎಂಬಿತ್ಯಾದಿ ಅಸಂಘಟಿತ ವಲಯವನ್ನು ನಂಬಿಕೊಂಡಿದ್ದ ಇಲ್ಲಿನ ಸಾವಿರಾರು ಕುಟುಂಬಗಳು ಕೋವಿಡ್‌ನಿಂದಾಗಿ ಬೀದಿಗೆ ಬಿದ್ದಿವೆ. ಅಲ್ಲದೆ ಕ್ಷೀರೋತ್ಪನ್ನ ಕಾರ್ಖಾನೆಗಳು ಕೂಡ ಕಾರ್ಯಾಚರಣೆಯನ್ನು ನಿಲ್ಲಿಸಿರುವುದರಿಂದ ಜನರು ಆದಾಯವಿಲ್ಲದೆ ಪರದಾಡುತ್ತಿದ್ದಾರೆ. ಈ ಬಿಕ್ಕಟ್ಟಿನ ನಡುವೆಯೇ ನಗರದಲ್ಲಿ ಗುಂಪು ಘರ್ಷಣೆ, ದರೋಡೆ ಮತ್ತು ಕೊಲೆಗಳಂತಹ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಹಗಲು ಗಳಿಕೆಗಾಗಿ ಏನು ಮಾಡುವುದು ಎಂಬ ಚಿಂತೆಯಾದರೆ, ರಾತ್ರಿ ಕಳ್ಳಕಾಕರಿಂದ ರಕ್ಷಿಸಿಕೊಳ್ಳಲು ಹೆಣಗಾಡುವ ಪರಿಸ್ಥಿತಿ. ಸದ್ಯ ರೋಗದ ವಿರುದ್ಧ ಹೋರಾಡುವುದೋ ಅಥವಾ ಡಕಾಯಿತರಿಂದ ರಕ್ಷಿಸಿಕೊಳ್ಳುವುದೋ ತಿಳಿಯುತ್ತಿಲ್ಲ ಎಂದು ಜನರು ತಮ್ಮ ದುಗುಡವನ್ನು ದಿ ಗಾರ್ಡಿಯನ್‌ ಜತೆ ಹಂಚಿಕೊಂಡಿದ್ದಾರೆ.

ಕರ್ತವ್ಯ ಮರೆತ ಅಧಿಕಾರಿಗಳು
ಸೋಂಕಿನಿಂದ ಆಫ್ರಿಕ ದೇಶಗಳ ಆರೋಗ್ಯ ವ್ಯವಸ್ಥೆ ಮತ್ತಷ್ಟು ದುರ್ಬಲವಾಗಿದ್ದು, ಮುಂಬರುವ ದಿನಗಳಲ್ಲಿ ಏಡ್ಸ್‌, ಟಿಬಿ , ದಡಾರದಂತಹ ಮಾರಣಾಂತಿಕ ಕಾಯಿಲೆಗಳಿಗೆ ತೆರೆದುಕೊಳ್ಳಲಿದೆ ಎಂಬ ಎಚ್ಚರಿಕೆಯನ್ನು ವಿಶ್ವಸಂಸ್ಥೆ ನೀಡಿದೆ. ಆದರೂ ಎಚ್ಚೆತ್ತುಕೊಳ್ಳದ ಸರಕಾರ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ.

ಸೋಂಕಿನಿಂದ ರಕ್ಷಿಸಿಕೊಳ್ಳಲು ಅಗತ್ಯವಿರುವ ಮಾಸ್ಕ್, ಸ್ಯಾನಿಟೈಸರ್‌ ಇತ್ಯಾದಿ ಸಾಧನಗಳಿಲ್ಲದೆ ಜನರು ರೋಗಕ್ಕೆ ತಮ್ಮನ್ನು ಒಡ್ಡಿಕೊಂಡು ಜೀವನ ನಡೆಸುತ್ತಿದ್ದಾರೆ. ಮಾಸ್ಕ್ ಗಳ ಬದಲಾಗಿ ಮುಖಕ್ಕೆ ಪ್ಲಾಸ್ಟಿಕ್‌ ಚೀಲ ಕಟ್ಟಿಕೊಂಡಿದ್ದಾರೆ.

ಲಾಕ್‌ಡೌನ್‌ ಕ್ರಮಗಳು ಬಿಗಿ ಆಗುತ್ತ ಹೋದಂತೆ ಲಾಗೋಸ್‌ ರಾಜ್ಯ ಸರಕಾರ ಬಡ ಪ್ರದೇಶಗಳಿಗೆ ಆಹಾರ ಸೇರಿದಂತೆ ಕೆಲ ಅಗತ್ಯ ಸಾಮಗ್ರಿಗಳನ್ನು ನೀಡುವುದಾಗಿ ಘೋಷಿಸಿತ್ತು. ಆದರೆ ವಾಸ್ತವದಲ್ಲಿ ಆ ನೆರವು ನಾಮಕಾವಸ್ಥೆಯ ಘೋಷಣೆಯಾಗಿದ್ದು, ಎಲ್ಲರಿಗೂ ಸಿಕ್ಕಿಲ್ಲ.

ಜನರು ಸೋಂಕಿನ ಭಯಕ್ಕಿಂತ ಹಸಿವಿನ ಸಂಕಟದಿಂದ ನರಳುತ್ತಿದ್ದಾರೆ. ನಮಗೆ ವೈರಸ್‌ನ ಹೆದರಿಕೆ ಇಲ್ಲ. ಆದರೆ ಅದು ಹುಟ್ಟು ಹಾಕಿದ ಹಸಿವಿನ ಭಯ ಕಾಡುತ್ತಿದೆ. ಮಕ್ಕಳು ಮರಿಗಳ ಹಸಿವಿನ ಆಕ್ರಂದನ ಸಹಿಸಲಾಗುತ್ತಿಲ್ಲ ಎನ್ನುತ್ತಿದ್ದಾರೆ ಇಲ್ಲಿನ ತಾಯಂದಿರು.

ನೈಜೀರಿಯದಲ್ಲಿ ಕಳೆದ 10 ದಿನಗಳಲ್ಲಿ ದೇಶಾದ್ಯಂತ ಹೊಸ ಪ್ರಕರಣಗಳ ಪ್ರಮಾಣ ದುಪ್ಪಟ್ಟಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.