ಅನಿರ್ಬಂಧಿತ ಔಷಧ ಪೂರೈಸಲು ಕ್ರಮಕ್ಕೆ ಸಲಹೆ
Team Udayavani, May 20, 2020, 5:24 AM IST
ಬೆಂಗಳೂರು: ಔಷಧಗಳ ಅನಿರ್ಬಂಧಿತ ಪೂರೈಕೆಗೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಆರೋಗ್ಯ ಇಲಾಖೆಗೆ ಹೈಕೋರ್ಟ್ ಸೂಚಿಸಿದೆ. ಹೈಡ್ರಾಕ್ಸಿಕ್ಲೋರೋಕ್ವಿನ್ (ಎಚ್ಸಿಕ್ಯೂಎಸ್), ಅಲ್ಟ್ರಾಸೆಟ್ ಮತ್ತು ಪ್ಯಾನ್ ಮಾತ್ರೆಗಳು ಔಷಧ ಅಂಗಡಿಗಳು ಹಾಗೂ ಫಾರ್ಮಾಸ್ಯೂಟಿಕಲ್ ಸೆಂಟರ್ಗಳಲ್ಲಿ ಸಿಗುತ್ತಿಲ್ಲ ಎಂದು ಆಕ್ಷೇಪಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ವಿ. ಶ್ರೀಶಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.
ತಮ್ಮ ತಾಯಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ (ಎಚ್ಸಿಕ್ಯೂಎಸ್), ಅಲ್ಟ್ರಾಸೆಟ್ ಮತ್ತು ಪ್ಯಾನ್ ಮಾತ್ರೆಗಳು ಬೇಕು. ಆದರೆ, ಎಲ್ಲಿಯೂ ಈ ಮೂರು ಮಾತ್ರೆಗಳ ಸಿಗುತ್ತಿಲ್ಲ. ಹಾಗಾಗಿ, ಈ ವಿಚಾರವಾಗಿ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಈಗಾಗಲೇ ಕೋವಿಡ್-19 ಸಂಬಂಧಿಸಿದ ಅರ್ಜಿಗಳ ವಿಚಾರಣೆಯಲ್ಲಿ ರಾಜ್ಯದಲ್ಲಿ ಔಷಧಗಳ ಲಭ್ಯತೆ ಮತ್ತು ಪೂರೈಕೆ ವಿಚಾರವನ್ನು ನ್ಯಾಯಾಲಯ ಗಮನಿಸುತ್ತಿದೆ. ಅದರೆ, ಇದು ಅರ್ಜಿದಾರರ ವೈಯುಕ್ತಿಕ ವಿಚಾರವಾಗಿದ್ದು, ಒಂದೊಮ್ಮೆ ಅರ್ಜಿದಾರರು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದರೆ ಇಲಾಖೆ ಅದನ್ನು ಪರಿಗಣಿಸಬೇಕು. ಆರೋಗ್ಯ ಇಲಾಖೆ ಸೂಕ್ತ ನಿರ್ದೇಶನ ನೀಡಲಿದೆ ಎಂದು ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ