ನಗರಕ್ಕೆ ಬಂದಿದ್ದ ಕೋವಿಡ್‌ 19 ಸೋಂಕಿತ ಸಾವು

Team Udayavani, May 21, 2020, 5:31 AM IST

bandidda

ಬೆಂಗಳೂರು: ನಗರಕ್ಕೆ ಹೊರರಾಜ್ಯದಿಂದ ಬಂದಿದ್ದ ಕೋವಿಡ್‌ 19 ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಬುಧವಾರ ನಾಲ್ಕು  ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿಗೊಳಗಾದವರ ಸಂಖ್ಯೆ 250 ತಲುಪಿದೆ.  ಮೃತ ವ್ಯಕ್ತಿಗೆ 43 ವರ್ಷದ ವಯಸ್ಸಾಗಿದ್ದು, ತಮಿಳುನಾಡಿನ ವೆಲ್ಲೂನಿಂದ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು.

ಸೋಮವಾರವಷ್ಟೇ ಸೋಂಕು ದೃಢಪಟ್ಟಿತ್ತು. ರಕ್ತದೊತ್ತಡ, ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬುಧವಾರ ಚಿಕಿತ್ಸೆ ಫ‌ಲಕಾರಿಯಾಗದೆ ಮೃತರಾಗಿದ್ದಾರೆ. ನಗರದಲ್ಲಿ ಬುಧವಾರ ಪತ್ತೆಯಾದ ನಾಲ್ಕು ಸೋಂಕು ಪ್ರಕರಣಗಳಲ್ಲಿ ಮಲ್ಲೇಶ್ವರದಲ್ಲಿ ಇಬ್ಬರು,  ನಾಗವಾರ ಮತ್ತು ಜೆ.ಜೆ.ಆರ್‌ ನಗರ ವಾರ್ಡ್‌ನಲ್ಲಿ ತಲಾ ಒಬ್ಬರು ಸೋಂಕಿತರಾಗಿದ್ದಾರೆ.

ಮಲ್ಲೇಶ್ವರ ವಾರ್ಡ್‌ನಲ್ಲಿ ಯಶವಂತಪುರ ಸಮೀಪದ ಮಂಗಲ್ಸ್ ಆಸ್ಪತ್ರೆಯಲ್ಲಿ ಪಶ್ಚಿಮ ಬಂಗಾಳದ 50 ವರ್ಷದ ಮಹಿಳೆಗೆ ಕೋವಿಡ್‌ 19 ಸೋಂಕು ತಗುಲಿತ್ತು. ಸದ್ಯ ಆ ಮಹಿಳೆಯ ದ್ವಿತೀಯ  ಸಂಪರ್ಕ ಹೊಂದಿದ್ದವರ ಪೈಕಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಒಬ್ಬರು ಮಹಿಳೆಗೆ ಚಿಕಿತ್ಸೆ ನೀಡಿದ್ದ ವೈದ್ಯರ ಸೊಸೆ, ಮತ್ತೂಬ್ಬರು ಕುಟುಂಬ ಸದಸ್ಯ. ಇನ್ನೆರಡು ಪ್ರಕರಣಗಳಲ್ಲಿ  ಸೋಂಕಿತರು ಪೊಲೀಸ್‌ ವಶದಲ್ಲಿದ್ದರು.

ಮಂಗಮ್ಮನಪಾಳ್ಯದಲ್ಲಿ ಪರೀಕ್ಷೆ: ಪಾದರಾಯನಪುರದಲ್ಲಿ ಸಮುದಾಯಿಕ ಕೋವಿಡ್‌ 19 ಸೋಂಕು ಪರೀಕ್ಷೆ ಮಾಡುತ್ತಿರುವ ರೀತಿಯಲ್ಲೇ ಮಂಗಮ್ಮನ ಪಾಳ್ಯದಲ್ಲೂ ಸಮುದಾಯಿಕ ಕೋವಿಡ್‌ 19 ಸೋಂಕು ಪರೀಕ್ಷೆ  ಪ್ರಾರಂಭಿಸಲಾಗುವುದು ಎಂದು ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಪಾದರಾಯನಪುರದಲ್ಲಿ ರ್‍ಯಾಂಡಮ್‌ ಪರೀಕ್ಷೆಯಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟ  ಹಿನ್ನೆಲೆಯಲ್ಲಿ ಪಾದರಾಯನಪುರದಲ್ಲಿ ಸೋಂಕು ದೃಢಪಟ್ಟ ಪ್ರಮುಖ ರಸ್ತೆಗಳಲ್ಲಿನ ನಿವಾಸಿಗಳನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೇ ಮಾದರಿಯಲ್ಲಿ ಮಂಗಮ್ಮನ ಪಾಳ್ಯದಲ್ಲೂ ಕೋವಿಡ್‌ 19 ಪರೀಕ್ಷೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.‌

ಇನ್ನು ಮಂಗಮ್ಮನ ಪಾಳ್ಯದಲ್ಲಿ 9 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇವರಲ್ಲಿ ಬಹುತೇಕರಿಗೆ ಸೋಂಕು ಯಾರಿಂದ ಬಂದಿದೆ ಎನ್ನುವುದು ಪತ್ತೆಯಾಗಿಲ್ಲ. ಅಲ್ಲದೆ, ಹೊಂಗಸಂದ್ರದ  ಮೂಲವಿರುವ ಬಗ್ಗೆಯೂ ಆರೋ ಗ್ಯಾಧಿ ಕಾರಿಗಳು ಸಂಶಯ ವ್ಯಕ್ತಪಡಿಸಿ ದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲೂ ಸಮುದಾಯಿಕ ಸೋಂಕು ಪರೀಕ್ಷೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದುವರಿದ ಪರೀಕ್ಷೆ: ಮೊಬೈಲ್‌ ಕಿಯೋಸ್ಕ್ನ ಮೂಲಕ 20ಜನರಿಗೆ ಹಾಗೂ ಮತ್ತೂಂದು ಕಿಯೋಸ್ಕ್ನ ಮೂಲಕ 19 ಜನರಿಗೆ ಒಟ್ಟು 39ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಸಮುದಾಯಿಕ ಕೋವಿಡ್‌ 19 ಸೋಂಕು ಪರೀಕ್ಷೆ ಮಾಡಿದವರಲ್ಲಿ ಯಾರಿಗೂ ಸೋಂಕು ಇಲ್ಲಿಯವರೆಗೆ ದೃಢಪಟ್ಟಿಲ್ಲ ಎಂದು ಪಶ್ಚಿಮ ವಲಯದ ಮುಖ್ಯ ಆರೋಗ್ಯಾಧಿಕಾರಿ ಮನೋರಂಜನ್‌ ಹೆಗ್ಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.