130 ಕಾರ್ಮಿಕರು ಸ್ವಸ್ಥಳಗಳಿಗೆ

Team Udayavani, May 21, 2020, 7:26 AM IST

130 ಕಾರ್ಮಿಕರು ಸ್ವಸ್ಥಳಗಳಿಗೆ

ಹುಬ್ಬಳ್ಳಿ: ಎರಡು ಕಂಟೇನರ್‌ ಲಾರಿಗಳಲ್ಲಿ ತಮ್ಮ ರಾಜ್ಯಗಳಿಗೆ ತೆರಳುವಾಗ ಸಿಲುಕಿ ಕೊಂಡಿದ್ದ 130 ವಲಸೆ ಕಾರ್ಮಿಕರನ್ನು ಶ್ರಮಿಕ್‌ ರೈಲಿನ ಮೂಲಕ ಉತ್ತರ ಪ್ರದೇಶ-ಬಿಹಾರ ರಾಜ್ಯಕ್ಕೆ ಕಳುಹಿಸುವ ಕಾರ್ಯ ಜಿಲ್ಲಾಡಳಿತದಿಂದ ನಡೆಯಿತು.

ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಉತ್ತರ ಪ್ರದೇಶ- ಬಿಹಾರ ರಾಜ್ಯಗಳಿಗೆ ಕಂಟೇನರ್‌ ಲಾರಿಗಳಲ್ಲಿ ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿ ಅನಧಿಕೃತ ಪ್ರಯಾಣಿಸುತ್ತಿರುವ ಆರೋಪದಲ್ಲಿ ವಶಕ್ಕೆ ಪಡೆದಿದ್ದರು. ನಂತರ 130 ಕಾರ್ಮಿಕರನ್ನು ಜಿಲ್ಲಾಡಳಿತ ಇಲ್ಲಿನ ಸ್ಟಾರ್‌ ಹಾಲ್‌ನಲ್ಲಿ ವ್ಯವಸ್ಥೆ ಕಲ್ಪಿಸಿ ಉಪಹಾರ, ಊಟ ನೀಡಲಾಗಿತ್ತು. ಬುಧವಾರ ಅವರ ರಾಜ್ಯಗಳಿಗೆ ತೆರಳು ರೈಲಿನ ವ್ಯವಸ್ಥೆಯಿದ್ದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಲಾಯಿತು.

ಟಿಕೆಟ್ಗೆ ದಾನಿಗಳ ನೆರವು: ಲಾರಿಗಳ ಮೂಲಕ ತಮ್ಮ ರಾಜ್ಯಗಳಿಗೆ ತೆರಳಲು ಲಾರಿ ಚಾಲಕರಿಗೆ ಹಣ ನೀಡಿದ್ದರು. ಹೀಗಾಗಿ ಕಾರ್ಮಿಕರಲ್ಲಿ ರೈಲು ಟಿಕೆಟ್‌ ಪಡೆಯಲು ಹಣ ಇರಲಿಲ್ಲ. ಎಲ್ಲಾ ಕಾರ್ಮಿಕರಿಗೆ ಟಿಕೆಟ್‌ಗಾಗಿ 1.52 ಲಕ್ಷ ರೂ. ಬೇಕಿತ್ತು. ತಮ್ಮಲ್ಲಿ ಯಾವುದೇ ಹಣವಿಲ್ಲ ಇರುವ ಹಣವನ್ನೆಲ್ಲಾ ಲಾರಿ ಚಾಲಕರಿಗೆ ನೀಡಿದ್ದೇವೆ. ಹೇಗಾದರೂ ಮಾಡಿ ತಮ್ಮೂರಿಗೆ ಕಳುಹಿಸಿಕೊಡುವಂತೆ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಹಾಗೂ ಪ್ರಕಾಶ ನಾಶಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಲಾರಿ ಚಾಲಕರನ್ನು ವಿಚಾರಿಸಿ ಆಯಾ ಕಾರ್ಮಿಕರಿಗೆ ಒಂದಿಷ್ಟು ಹಣ ಕೊಡಿಸಿದ್ದರು. ಆದರೂ ಎಲ್ಲಾ ಕಾರ್ಮಿಕರಿಗೆ ಟಿಕೆಟ್‌ ಪಡೆಯಲು ಹಣ ಸಾಲದಿದ್ದಾಗ ದಾನಿಗಳ ನೆರವು ಪಡೆದು 130 ಕಾರ್ಮಿಕರಿಗೂ ಟಿಕೆಟ್‌ ವ್ಯವಸ್ಥೆ ಮಾಡಿದ್ದರು. ನಾಲ್ಕು ಸಾರಿಗೆ ಸಂಸ್ಥೆಗಳ ಬಸ್‌ಗಳ ವ್ಯವಸ್ಥೆ ಮಾಡಿ ಪ್ರತಿಯೊಬ್ಬ ಕಾರ್ಮಿಕರ ಸಂಪೂರ್ಣ ಮಾಹಿತಿ ಪಡೆದು ರೈಲ್ವೆ ಟಿಕೆಟ್‌ ನೀಡಲಾಯಿತು. ಪ್ರತಿಯೊಬ್ಬರಿಗೆ ಮಾಸ್ಕ್, ಊಟದ ಪೊಟ್ಟಣ, ನೀರಿನ ಬಾಟಲ್‌ ನೀಡಲಾಯಿತು. ಕಳೆದ ಎರಡು ದಿನಗಳಿಂದ ಹೊಟ್ಟೆ ತುಂಬಾ ಉಪಹಾರ, ಊಟ, ವಸತಿ ವ್ಯವಸ್ಥೆ ಮಾಡಿದ ತಹಶೀಲ್ದಾರ್‌ಗೆ ಕಾರ್ಮಿಕರು ಕೃತಜ್ಞತೆ ಸಲ್ಲಿಸಿದರು.

ಪೊಲೀಸರು ನಮ್ಮನ್ನು ಹಿಡಿದಾಗ ಸಾಕಷ್ಟು ಹೆದರಿಕೆಯಾಯಿತು. ಮಧ್ಯಾಹ್ನದವರೆಗೂ ಹೊಟ್ಟೆಗೇನೂ ತಿಂದಿರಲಿಲ್ಲ. ನಮ್ಮನ್ನು ಎಲ್ಲಿಯೂ ಬಿಡದೆ ಒಂದೆಡೆ ಕೂಡಿಸಿದ್ದರು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿ ಅಧಿಕಾರಿಗಳು ಇಲ್ಲಿಗೆ ಕರೆದುಕೊಂಡು ಬಂದು ಬಿಟ್ಟರೆಂದು ಹೇಳುವಾಗ ಕಾರ್ಮಿಕ ಜಿತೇಂದ್ರಕುಮಾರ ಕಣ್ಣುಗಳು ಒದ್ದೆಯಾದವು. ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಮಾತನಾಡಿ, ಕಳೆದ ಎರಡು ದಿನಗಳಿಂದ ದಾನಿಗಳ ನೆರವಿನಿಂದ ಬೆಳಗಿನ ಉಪಹಾರ, ಊಟದ ವ್ಯವಸ್ಥೆ ಮಾಡಲಾಗಿದೆ. ಈ ಹಾಲ್‌ನ ಮಾಲಿಕರು ಕಾರ್ಮಿಕರಿಗೆ ವಸತಿ ಸೌಲಭ್ಯದೊಂದಿಗೆ ಎಲ್ಲಾ ಸೌಲಭ್ಯ ಕಲ್ಪಿಸಿದ್ದಾರೆ. ಟಿಕೆಟ್‌ಗೆ ಹಣದ ಕೊರತೆಯಾದಾಗ ದಾನಿಗಳ ನೆರವು ಪಡೆದು ಟಿಕೆಟ್‌ ಖರೀದಿಸಿ ಅವರನ್ನು ತಮ್ಮ ರಾಜ್ಯಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಎಲ್ಲರನ್ನೂ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು.

ಗ್ರಾಮಾಂತರ ತಹಶೀಲ್ದಾರ್‌ ಪ್ರಕಾಶ ನಾಶಿ ಹಾಗೂ ತಾಲೂಕು ಆಡಳಿತದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.