ದಿನಕ್ಕೆ ಒಂದು ಲಕ್ಷಕ್ಕೇರಿದ ಕೋವಿಡ್ ಪರೀಕ್ಷಾ ಪ್ರಮಾಣ: ICMR

20ರವರೆಗೆ 25.12 ಲಕ್ಷ ಸ್ಯಾಂಪಲ್‌ಗ‌ಳ ಪರೀಕ್ಷೆ ; ಹಲವು ಸಂಸ್ಥೆಗಳು ಕೈಜೋಡಿಸಿದ್ದರಿಂದ ಈ ಸಾಧನೆ

Team Udayavani, May 22, 2020, 6:10 AM IST

ದಿನಕ್ಕೆ ಒಂದು ಲಕ್ಷಕ್ಕೇರಿದ ಕೋವಿಡ್ ಪರೀಕ್ಷಾ ಪ್ರಮಾಣ: ICMR

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕಳೆದ ಎರಡು ತಿಂಗಳ ದೇಶಾದ್ಯಂತ ಪ್ರತಿದಿನ ನಡೆಸುವ ಕೋವಿಡ್ ಪರೀಕ್ಷೆಯ ಪ್ರಮಾಣ ಒಂದು ಸಾವಿರ ಪಟ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಹೇಳಿದೆ.

ಪ್ರತಿ ಕೋವಿಡ್ ಪಾಸಿಟಿವ್‌ ಪರೀಕ್ಷೆಗೆ 20ಕ್ಕೂ ಹೆಚ್ಚು ನೆಗೆಟಿವ್‌ ಪರೀಕ್ಷೆಗಳು ನಡೆದಿವೆ. ಒಟ್ಟಿನಲ್ಲಿ ಪರೀಕ್ಷಾ ಪ್ರಮಾಣವು ಗಣನೀಯವಾಗಿ ಏರಿಕೆಯಾಗಿದೆ ಎಂದು ಐಸಿಎಂಆರ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೇ 20ರವರೆಗೆ ದೇಶಾದ್ಯಂತ ಒಟ್ಟಾರೆ 25,12,388 ಸ್ಯಾಂಪಲ್‌ ಗಳನ್ನು ಪರೀಕ್ಷಿಸಲಾಗಿದ್ದು, ಪರೀಕ್ಷಾ ಸಾಮರ್ಥ್ಯವು ದಿನಕ್ಕೆ 1 ಲಕ್ಷಕ್ಕೇರಿದೆ ಎಂದೂ ಅವರು ಹೇಳಿದ್ದಾರೆ.

2 ತಿಂಗಳ ಹಿಂದೆ ದಿನಕ್ಕೆ 100ಕ್ಕಿಂತಲೂ ಕಡಿಮೆ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. 60 ದಿನಗಳ ಅವಧಿಯಲ್ಲಿ ಇದು ಸಾವಿರ ಪಟ್ಟು ಅಧಿಕವಾಗಿದೆ. ಸಂಶೋಧನಾ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು, ಪರೀಕ್ಷಾ ಪ್ರಯೋಗಾಲಯಗಳು, ಸಚಿವಾಲಯಗಳು, ವಿಮಾನಯಾನ ಕಂಪನಿಗಳು ಹಾಗೂ ಅಂಚೆ ಸೇವೆಗಳು ಕೈಜೋಡಿಸಿದ್ದರ ಫ‌ಲವಾಗಿ ಇದನ್ನು ಸಾಧಿಸಲು ಸಾಧ್ಯವಾಯಿತು ಎಂದೂ ಐಸಿಎಂಆರ್‌ ಹೇಳಿದೆ.

ಜನವರಿ ತಿಂಗಳಲ್ಲಿ, ದೇಶದಲ್ಲಿ ಕೇವಲ ಒಂದು ಪ್ರಯೋಗಾಲಯವಿತ್ತು. ಪ್ರಸ್ತುತ 555 ಪ್ರಯೋಗಾಲಯಗಳಿದ್ದು, ಇವುಗಳು ಕೋವಿಡ್ ಪರೀಕ್ಷೆಯಲ್ಲಿ ತೊಡಗಿಕೊಂಡಿವೆ. ಇದು ಭಾರತೀಯ ಆರೋಗ್ಯ ವ್ಯವಸ್ಥೆಯ ಇತಿಹಾಸದಲ್ಲೇ ಅತಿದೊಡ್ಡ ಸಾಧನೆಯಾಗಿದೆ ಎಂದಿದೆ ಐಸಿಎಂಆರ್‌.

ಈಗ ಗುಣಮುಖ ಪ್ರಮಾಣ ಶೇ.40.32: ದೇಶದಲ್ಲಿ ಕೋವಿಡ್ ಸೋಂಕಿನ ಗುಣಮುಖ ಪ್ರಮಾಣ ಈಗ ಶೇ.40.32ಕ್ಕೇರಿದ್ದು, 45,299 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬುಧವಾರದಿಂದ ಗುರುವಾರದವರೆಗಿನ 24 ಗಂಟೆಗಳ ಅವಧಿಯಲ್ಲಿ 132 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ದೇಶಾದ್ಯಂತ ಒಟ್ಟಾರೆ 5,609 ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಅತಿ ಹೆಚ್ಚು ಸಾವು ಅಂದರೆ 65 ಸಾವು ಮಹಾರಾಷ್ಟ್ರವೊಂದರಲ್ಲೇ ಸಂಭವಿಸಿದರೆ, ಗುಜರಾತ್‌ ನಲ್ಲಿ ಒಂದೇ ದಿನ 30, ಮಧ್ಯಪ್ರದೇಶದಲ್ಲಿ 9, ದೆಹಲಿಯಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ ಎಂದೂ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.