ವಿದೇಶಿ ಬಂಡವಾಳ ಆಕರ್ಷಿಸಲು ಕ್ರಮಕ್ಕೆ ಸೂಚನೆ


Team Udayavani, May 22, 2020, 5:37 AM IST

videshi-vala

ಬೆಂಗಳೂರು: ಚೀನಾದಲ್ಲಿ ಹೂಡಿಕೆ ಮಾಡಿರುವ ಕೈಗಾರಿಕೋದ್ಯಮಿಗಳು ಕೊರೊನಾ ಕಾರಣಕ್ಕೆ ಬೇರೆ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿದ್ದಾರೆ. ಅಂತಹವರಿಂದ ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ರಚಿಸಲಾಗಿರುವ ವಿಶೇಷ  ಟಾಸ್ಕ್ ಫೋರ್ಸ್‌ನ ಕಾರ್ಯಚಟುವಟಿಕೆಗಳನ್ನು ಪ್ರತೀ ವಾರ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದೇಶಿಸಿದ್ದಾರೆ.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ  ವಾಣಿಜ್ಯ ಮತ್ತು ಕೈಗಾರಿಕೆ ರಾಜ್ಯದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶೇಷ ಟಾಸ್ಕ್ಫೋರ್ಸ್‌ ರಚಿಸಲಾಗಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹ ಯೋಜನೆಯನ್ನು  ರೂಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕಾರ್ಖಾನೆಗಳಲ್ಲಿ ಪ್ರಸ್ತುತ ಶೇ. 70 ರಷ್ಟು ಕೈಗಾರಿಕೆಗಳು  ಪುನರಾರಂಭಗೊಂಡಿವೆ.

ಈ ನಿಟ್ಟಿನಲ್ಲಿ ಕೈಗಾರಿಕಾ  ವಲಯದ ಪರಿಣಿತರೊಂದಿಗೆ, ಅಂತಾರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳೊಂದಿಗೆ ಸರ್ಕಾರ ಸಮಾಲೋಚನೆ ನಡೆಸುತ್ತಿದೆ. ಇದಲ್ಲದೆ ಭೂ ಸುಧಾರಣಾ ಕಾಯ್ದೆಗೆ  ತಿದ್ದುಪಡಿ ತಂದಿ ರುವು  ದರಿಂದ ಕೈಗಾರಿಕೋದ್ಯಮಿಗಳು ಜಮೀನು ಖರೀದಿ  ಸುವ ಪ್ರಕ್ರಿಯೆ ಸರಳಗೊಂಡಿದ್ದು, ಇದರಿಂದ ಹೂಡಿಕೆ  ದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಜಿಲ್ಲಾ ಮಟ್ಟದಲ್ಲಿಯೂ ಕೈಗಾರಿಕೆ ಸ್ಥಾಪಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಹೊರ ದೇಶದಿಂದ ಆಮದಾಗುತ್ತಿದ್ದ ಪಿಪಿಇ ಕಿಟ್‌  ಗಳನ್ನು ದೇಶದಲ್ಲಿಯೇ ತಯಾರಿಸಲು ಉತ್ತೇಜನ ನೀಡಲಾಗಿದ್ದು, ರಾಜ್ಯದಲ್ಲಿ 22 ಘಟಕಗಳು ಪಿಪಿಇ ಕಿಟ್‌ಗಳನ್ನು ಉತ್ಪಾದಿಸುತ್ತಿವೆ. 4 ಸಂಸ್ಥೆಗಳು ವೆಂಟಿಲೇಟರ್‌ ತಯಾರಿಕೆ ಮಾಡುತ್ತಿವೆ. ಸ್ಯಾನಿಟೈಸರ್‌ ಕೊರತೆ ನೀಗಿಸಲು 40ಕ್ಕೂ ಹೆಚ್ಚು  ಡಿಸ್ಟಿಲರಿಗಳಿಗೆ ಪರವಾನಗಿ ನೀಡಿ, ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎಲ್ಲಾ ಕೈಗಾರಿಕಾ ಚಟುವಟಿಕೆ ಪ್ರಾರಂಭವಾಗಿದ್ದು ಮೈಸೂರು ಜಿಲ್ಲೆಯ ನಂಜನಗೂಡು  ತಾಲೂಕಿನ ಕೋವಿಡ್‌ -19 ನಿಂದಾಗಿ ಮುಚ್ಚಲಾಗಿದ್ದ ಜುಬಿಲಿಯಂಟ್‌ ಕಾರ್ಖಾನೆ ತೆರೆಯಲು ಅನುಮತಿ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಈ ವರೆಗೆ 12.40 ಲಕ್ಷ ಕಟ್ಟಡ ನಿರ್ಮಾಣ  ಕಾರ್ಮಿಕರಿಗೆ 5 ಸಾವಿರ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌, ಹಿರಿಯ ಅಧಿಕಾರಿಗಳು ಇದ್ದರು.

ಕಾರ್ಮಿಕರಿಗೆ ಭದ್ರತೆ: ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ  ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.