3 ತಿಂಗಳ ಮಗುವಿಗೂ ಸೋಂಕು

Team Udayavani, May 24, 2020, 4:20 AM IST

3bab

ಬೆಂಗಳೂರು: ನಗರಕ್ಕೆ ಹೊರರಾಜ್ಯದಿಂದ ಬಂದ ಮೂವರಲ್ಲಿ ಹಾಗೂ ಚಾಮರಾಜಪೇಟೆಯ ಪೊಲೀಸ್‌ ಪೇದೆಯೊಬ್ಬರಲ್ಲಿ ಸೋಂಕು ದೃಢಪಟ್ಟಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 265ಕ್ಕೆ ಏರಿಕೆಯಾದಂತಾಗಿದೆ. ನವದೆಹಲಿಯಿಂದ  ಬಂದ ದಂಪತಿಯ ಮೂರು ತಿಂಗಳ ಮಗು (1,793), ತಮಿಳುನಾಡಿನಿಂದ ಹಿಂದಿರುಗಿದ 57 ವರ್ಷದ ವ್ಯಕ್ತಿ (1930) ಹಾಗೂ ಮಹಾರಾಷ್ಟ್ರದಿಂದ ಹಿಂದಿರುಗಿದವರೊಬ್ಬರಲ್ಲಿ (1939) ಕೋವಿಡ್‌ 19 ಸೋಂಕು ದೃಢಪಟ್ಟಿದೆ.

ಕ್ವಾರಂಟೈನ್‌ ನಿಯಮ ಉಲ್ಲಂಘನೆ?: ನವದೆಹಲಿಯಿಂದ ಬಂದ ದಂಪತಿಯ ಮೂರು ತಿಂಗಳ ಮಗುವಲ್ಲಿ ಸೋಂಕು ದೃಢಪಟ್ಟಿದ್ದು, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ಬಿಬಿಎಂಪಿ ಕ್ವಾರಂಟೈನ್‌  ನಿಯಮ ಉಲ್ಲಂಘನೆ ಮಾಡಿದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ರೈಲಿನ ಮೂಲಕ ದೆಹಲಿಯಿಂದ ಬೆಂಗಳೂರಿಗೆ ಬಂದ ದಂಪತಿಯ ಮಗುವಿಗೆ ಕೋವಿಡ್‌ 19 ದೃಢಪಟ್ಟಿದೆ.

ಕ್ವಾರಂಟೈನ್‌ನ ನಿಯಮಾನುಸಾರ 10  ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರು ಹಾಗೂ ಅನಾರೋಗ್ಯ ಸಮಸ್ಯೆ ಇರುವವರು ಹೊರ ರಾಜ್ಯದಿಂದ ಬಂದರೆ ಅವರನ್ನು ಎರಡು ದಿನಗಳ ಒಳಗೆ ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಿ, ವರದಿ ನೆಗೆಟಿವ್‌ ಬಂದರೆ ಮಾತ್ರ ಅವರನ್ನು  ಅವರ ಮನೆಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್‌ ಷರತ್ತಿನ ಮೇಲೆ ಕಳುಹಿಸಬೇಕು. ಅಲ್ಲದೆ, ಈ ರೀತಿ ಕ್ವಾರಂಟೈನ್‌ ಆದ 10ರಿಂದ 12ನೇ ದಿನದ ಒಳಗೆ ಅವರು ಮತ್ತೂಮ್ಮೆ ಸೋಂಕು ಪರೀಕ್ಷೆ ಮಾಡಿಸಿ ಕೊಳ್ಳಬೇಕು. ಇಷ್ಟೇಲ್ಲಾ  ನಿಯಮವಿದ್ದರೂ, ವರದಿ ಬರುವ ಮುನ್ನವೇ ದೆಹಲಿ ಯಿಂದ ಬಂದವರನ್ನು ಹೋಂ ಕ್ವಾರಂಟೈನ್‌ಗೆ ಯಾವ ಆಧಾರದ ಮೇಲೆ ಕಳುಹಿಸಲಾಯಿತು ಎಂಬ ನಿಯಮ ಉಲ್ಲಂಘನೆ ಗೊಂದಲ ಸೃಷ್ಟಿಯಾಗಿದೆ.

ನಿಯಮ ಉಲ್ಲಂಘನೆ ಮಾಡಿಲ್ಲ: ಪ್ರಕರಣ ಸಂಬಂಧ ಉದಯವಾಣಿಯೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅವರು, ದೆಹಲಿಯಿಂದ ಬಂದ  ದಂಪತಿಯ ಮಗುವಿಗೆ ಕೇವಲ ಮೂರು ತಿಂಗಳು ಇದ್ದ  ಹಿನ್ನೆಲೆಯಲ್ಲಿ ಮಗು ಹಾಗೂ ದಂಪತಿಯ ಗಂಟಲು ದ್ರವ ಸಂಗ್ರಹಣೆ ಮಾಡಿ ಕಡ್ಡಾಯ ಕ್ವಾರಂಟೈನ್‌ ಮಾಡಲಾಗಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘನೆ ಮಾಡಿಲ್ಲ.

ಮಗುವಿನ ತಂದೆ ಹಾಗೂ ತಾಯಿಗೆ ಕೋವಿಡ್‌ 19 ವರದಿ ನೆಗೆಟಿವ್‌  ಬಂದಿದೆ. ಮಗುವಿಗೆ ಮಾತ್ರ ಪಾಸಿಟಿವ್‌ ತೋರಿಸುತ್ತಿದ್ದು, ಈ ವರದಿಯ ಬಗ್ಗೆ ಗೊಂದಲವಿದೆ. ಹೀಗಾಗಿ, ಮಗುವಿನ ಗಂಟಲು ದ್ರವವನ್ನು ಮತ್ತೂಮ್ಮೆ ಲ್ಯಾಬ್‌ಗ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.  ಅಲ್ಲಿಯವರೆಗೆ ದಂಪತಿಯನ್ನು ಕಡ್ಡಾಯ ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.