ಮಾತೃ ಇಲಾಖೆಗೆ ಸಿಬ್ಬಂದಿ ವಾಪಸ್ ಕರೆಸಲು ಸಹಕಾರಿ ಸಚಿವರ ಪತ್ರ
Team Udayavani, May 25, 2020, 11:13 AM IST
ಬೆಂಗಳೂರು: ಸಹಕಾರ ಇಲಾಖೆಗೆ ನೇಮಕಗೊಂಡು ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತೃ
ಇಲಾಖೆಗೆ ವಾಪಸ್ ಕರೆಸುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಹಕಾರಿ ಸಚಿವ ಎಸ್. ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಹಿನ್ನೆಲೆಯಲ್ಲಿ “ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯನ್ನು ಮರಳಿ ಮಾತೃ ಸಂಸ್ಥೆಗೆ’ ಎಂಬ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದಾರೆ.
ಸಹಕಾರ ಇಲಾಖೆಯಲ್ಲಿ ಸಾಕಷ್ಟು ಕೆಲಸ ಬಾಕಿ ಉಳಿಯುತ್ತಿದ್ದು, ಬ್ಯಾಂಕ್ಗಳಲ್ಲಿ ಸಾಲ ವಸೂಲಾತಿಯ ಸಮಸ್ಯೆಯಾಗುತ್ತಿದೆ. ಜತೆಗೆ ಸಮಯಕ್ಕೆ ಸರಿಯಾಗಿ ಕೆಲಸವನ್ನು ಪೂರ್ತಿಗೊಳಿಸಲು ಆಗುತ್ತಿಲ್ಲ. ಹೀಗಾಗಿ ಹಾಕಿಕೊಂಡ ಗುರಿ ಮುಟ್ಟಲೂ ಸಮಸ್ಯೆಯಾಗುತ್ತಿರುವುದರಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದವರ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸೋಮಶೇಖರ್, ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆಯಲ್ಲಿ ಸಿಬ್ಬಂದಿ ನಿಯೋಜನೆ ಮೇಲೆ ಬೇರೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿರುವುದರಿಂದ ಅವರನ್ನೆಲ್ಲ ವಾಪಸ್ ಕರೆಸಿಕೊಳ್ಳಲು ಪತ್ರ ಬರೆದಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡು ಇಲಾಖೆಯನ್ನು ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!
Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ