ಹೆಲ್ತ್ ರಿಜಿಸ್ಟರ್ ಯೋಜನೆಗೆ ಸುಧಾಕರ್ ಚಾಲನೆ
Team Udayavani, May 28, 2020, 5:40 AM IST
ಬೆಂಗಳೂರು: “ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಬುಧವಾರ ಚಾಲನೆ ನೀಡಿದರು.
ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಹೆಲ್ತ್ ರಿಜಿಸ್ಟರ್ ಯೋಜನೆ ಸಂಬಂಧ ಆರೋಗ್ಯ ವಲಯದ ತಜ್ಞರ ಜತೆ ಸಚಿವ ಸುಧಾಕರ್ ಮೊದಲ ಸಭೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡರು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ಗಣತಿ ಮಾದರಿಯ ಮನೆ ಮನೆಗೂ ತೆರಳಿ ಮಾಹಿತಿ ಪಡೆಯಬೇಕಿರುವ ಕಾರ್ಯಕ್ರಮ. ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೋಜನೆ ಜಾರಿಗೊಳಿಸಲಾಗು ವುದು ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಡಾ. ಸಚ್ಚಿದಾನಂದ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಗಿರೀಶ್, ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ. ಪ್ರಕಾಶ್, ಬೆಂಗಳೂರು ವಿವಿ ಮಾಜಿ ಕುಲಪತಿ ಡಾ. ಪ್ರಭುದೇವ್, ಸಾರ್ವಜನಿಕ ಆರೋಗ್ಯ ವಿಭಾಗದ ತಜ್ಞರಾದ ಡಾ. ಎಂ.ಕೆ. ಸುದರ್ಶನ್ ತಜ್ಞ ವೈದ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ