ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ
Team Udayavani, May 28, 2020, 1:28 PM IST
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ಉತ್ತರ ಪ್ರದೇಶದ ಕಾರ್ಮಿಕರ ಲಾರಿಯೊಂದು ಆಘಾತ ನೀಡಿದೆ. ಹೌದು ಜಿಲ್ಲೆಯಲ್ಲಿ ಇಂದು ಹೊಸ ಆರು ಕೋವಿಡ್-19 ಪ್ರಕರಣಗಳು ದೃಢವಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶ ಮೂಲದ ಕಾರ್ಮಿಕರಾಗಿದ್ದಾರೆ.
ಈ ಕಾರ್ಮಿಕರು ಚೆನ್ನೈನಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದರು. ಒಂದೇ ಲಾರಿಯಲ್ಲಿ 59 ಜನರು ಹೊರಟಿದ್ದರು. ಕಳೆದ ಮೇ 15ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಡೆದು ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಲಾಗಿತ್ತು. ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು ಮೇ. 22 ರಂದು ಒಬ್ಬರಿಗೆ, ಮೇ. 26 ರಂದು 20 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ ಓರ್ವ ಬಾಲಕ, ಐವರು ಯುವಕರಿಗೆ ಸೋಂಕು ತಾಗಿರುವುದು ಖಚಿತವಾಗಿದೆ.
ಇಂದಿನ ಆರು ಸೋಂಕು ಪ್ರಕರಣಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 37 ಕ್ಕೇರಿದೆ.
ರಾಜ್ಯದಲ್ಲಿಂದು ಒಟ್ಟು 75 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 809 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 47 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ