ಸೂಜಿಗಲ್ಲಿನಂತೆ ಸೆಳೆಯುವ ಗುಲ್‌ಮೊಹರ್‌

10ರಿಂದ 60 ಅಡಿ ಎತ್ತರ ಬೆಳೆಯುವ ಮರ ಬೇಸಿಗೆಯಲ್ಲಿ ಅರಳುವ ಉಷ್ಣವಲಯದ ವೃಕ್ಷ

Team Udayavani, May 28, 2020, 4:08 PM IST

28-May-18

ಸಿರುಗುಪ್ಪ: ಸಿಂಧನೂರು ರಸ್ತೆಯಲ್ಲಿ ಅರಳಿ ನಿಂತಿರುವ ಗುಲ್‌ಮೊಹರ್‌ ಹೂಗಳು.

ಸಿರುಗುಪ್ಪ: ಮೇ ತಿಂಗಳಿನಲ್ಲಿಯೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ನೋಡಿದಲ್ಲೆಲ್ಲಾ ಈಗ ಕೆಂಪು ಪುಷ್ಪಗಳು ಸೂಜಿಗಲ್ಲಿನಂತೆ ಗಮನ ಸೆಳೆಯುತ್ತಿವೆ. ಮೇ ಫ್ಲವರ್‌ ಎಂದೆ ಕರೆಯಲ್ಪಡುವ ಗುಲ್‌ಮೊಹರ್‌ ಸಮಯ ಇದಾಗಿದ್ದು, ನಗರ ಸೇರಿದಂತೆ ಗ್ರಾಮ, ರಸ್ತೆ, ಹೊಲ, ಗದ್ದೆ, ಶಾಲೆಗಳ ಬಳಿ ಗುಲ್‌ಮೊಹರ್‌ ಈಗ ಕಾಣಬಹುದು.

ಉಷ್ಣವಲಯದ ಮರವಾಗಿರುವ ಇದು ಪ್ರಪಂಚದ ಎಲ್ಲೆಡೆ ಬೆಳೆಯುತ್ತದೆ. ಮದುವೆ, ಹಬ್ಬ ಮತ್ತು ಗೃಹ ಪ್ರವೇಶದ ಸಂದರ್ಭದಲ್ಲಿ ಇದರ ಹೂ ಗೊಂಚಲನ್ನು ಕಿತ್ತು, ಚಪ್ಪರಗಳ ನಡುವೆ ಅಲಂಕರಿಸುವ ಪರಂಪರೆ ಗ್ರಾಮೀಣ ಭಾಗಗಳಲ್ಲಿ ಇನ್ನು ಉಳಿದಿದೆ. ಸುಮಾರು 10ರಿಂದ 60 ಅಡಿ ಎತ್ತರ ಬೆಳೆಯುವ ಇದನ್ನು ಪಾರ್ಕ್‌ಗಳಲ್ಲಿ ಮತ್ತು ರಸ್ತೆ ಬದಿಯಲ್ಲಿ ಹೆಚ್ಚು ಬೆಳೆಸಲಾಗುತ್ತದೆ. ಇದು ಕೆಂಪು ಹೂ, ಕಿತ್ತಳೆಗೆಂಪು, ಕೇಸರಿ ಲತೆಗಳು, ಹಸಿರು ವೃಕ್ಷಕ್ಕೆ ಬಾಸಿಂಗ ತೊಡಿಸಿದಂತೆ ಆಕರ್ಷಕವಾಗಿ ಕಾಣುತ್ತದೆ. ಮಳೆಗಾಲದ ಮುಂಜಾವಿನ ರಸ್ತೆಯಲ್ಲಿ ಪುಷ್ಪಗಳು ಉದುರಿದಾಗ ಪುಷ್ಪದ ಚಾದಾರ ಎದ್ದು ಕಾಣುತ್ತದೆ. ಹಳದಿ ಮತ್ತು ಬಿಳಿ ಹೂಗಳ ಸಂತತಿಯನ್ನು ಕಾಣಬಹುದು.

ಇದರ ಪುಷ್ಪ ಪಾತ್ರೆಯನ್ನು ಕಿತ್ತು, ಇದರೊಳಗಿನ ಕೇಸರದ ಕೊಕ್ಕೆಯನ್ನು ತೆಗೆದು ಆಟವಾಡುವ ಸಂಭ್ರಮವನ್ನು ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಕಾಣಬಹುದು. ಅವರೆ ಕಾಯಿಯಂತಹ ಉದ್ದನೆಯ ಕತ್ತಿಯಾಕಾರದ ಕೋಡು, ಸಣ್ಣಗಾತ್ರದ 20-30 ಬೀಜಗಳನ್ನು ಹೊಂದಿರುತ್ತದೆ. 5 ಸೆಂಟಿಮೀಟರ್‌ ಉದ್ದಬೆಳೆಯುವ ಹಸಿರು ಬಣ್ಣದ ಕೋಡು, ಬಲಿತಾಗ ಕಡು ಕಂದುಬಣ್ಣ ಹೊಂದಿದರೆ, ಮರದ ಕಾಂಡ ಬೂದಿ ಮಿಶ್ರಿತ ಕಂದುಬಣ್ಣ ಪಡೆಯುತ್ತದೆ. ಬೀಜ ಮತ್ತು ರೆಂಬೆನೆಟ್ಟು ಹೊಸ ಸಸ್ಯಗಳನ್ನು ಬೆಳೆಸಬಹುದು. ಅಲಂಕಾರಕಕ್ಕೆ ಇಲ್ಲವೆ ನೆರಳಿಗಾಗಿ ಸಾಲು ಮರದಂತೆ ಬೆಳೆಸುತ್ತಾರೆ.

ಮೇ, ಜೂನ್‌, ಜುಲೈಗಳಲ್ಲಿ ಹೂಗಳಿಂದ ಜನರನ್ನು ಆಕರ್ಷಿಸುವ ಈ ಮರ ವರ್ಷಪೂರ್ತಿ ಜನರಿಗೆ ನೆರಳು ನೀಡುತ್ತವೆ. ಬೇಸಿಗೆಯ ದಾಹ ನೀಗಲು ಸಂಜೆ ಮತ್ತು ಬೆಳಿಗ್ಗೆ ವಾಯು ವಿಹಾರಿಗಳು ಅಡ್ಡಾಡುವಾಗ ಮರದ ನೆರಳಿನಲ್ಲಿ ಸ್ವಲ್ಪ ಸಮಯ ಕುಳಿತು ವಿಶ್ರಮಿಸುತ್ತಾರೆ. ನಗರದ ಕೃಷ್ಣ ನಗರದ ಬಡಾವಣೆಯಲ್ಲಿ ಗುಲ್‌ ಮೊಹರ್‌ ಲತೆಗಳು ಹಸಿರು ವೃಕ್ಷಕ್ಕೆ ಕೆಂಪು ಛತ್ರಿ ತೊಟ್ಟಂತೆ ಜನರನ್ನು ಆಕರ್ಷಿಸುತ್ತಿವೆ ಎನ್ನುತ್ತಾರೆ ಪತ್ರಿಕಾ ವಿತರಕ ಶಿವಕುಮಾರಸ್ವಾಮಿ.

ಬೀಜದಿಂದ ಉತ್ಪಾದಿಸುವ ಅಂಟು, ಎಣ್ಣೆಯನ್ನು, ಜವಳಿ, ಚರ್ಮ, ಸಾಬೂನು, ಔಷ ಧ ಮೊದಲಾದ ಉದ್ದಿಮೆಗಳಲ್ಲಿ ಬಳಸಲಾಗುತ್ತದೆ. ಈ ವೃಕ್ಷದ ಮೂಲ ಮಡಗಾಸ್ಕರ್‌. ಸೆಭಾಷಿಯೇ ಕುಟುಂಬದ ಸೀತಂತಿನಿಯೋಯಿಡೆ ಉಪಕುಟುಂಬಕ್ಕೆ ಸೇರಿದೆ. ಇದರ ಸಸ್ಯ ಶಾಸ್ತ್ರಿಯ ಹೆಸರು ಡೆಲೋನಿಕ್ಸ್‌ ರೇಜಿಯಾ, ಕನ್ನಡದಲ್ಲಿ ಕತ್ತಿಕಾಯಿ ಮರ, ಹಿಂದಿಯಲ್ಲಿ ಗುಲ್‌ಮೊಹರ್‌, ಬೆಂಕಿಮರ, ದೊಡ್ಡರತ್ನಗಂದಿ, ಸೀಮೆಸಂಕೇಶ್ವರ, ಕೃಷ್ಣಾಚುರ ರಾಧಾಚುರ ಎಂಬ ಹೆಸರುಗಳಿಂದ ಕರೆಯಲಾಗುತ್ತದೆ.

ಆರ್‌. ಬಸವರೆಡ್ಡಿ, ಕರೂರು

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.