ಕೋಟ ಹೋಬಳಿಯ ಬಾರಿಕೆರೆ, ವಂಡಾರು ಮಾರ್ವಿಯಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆ; ಸೀಲ್ ಡೌನ್
Team Udayavani, May 30, 2020, 11:07 AM IST
ಕೋಟ: 14 ದಿನಗಳ ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ಕೋಟ ಬಾರಿಕೆರೆಯ ಮಹಿಳೆಗೆ ಇದೀಗ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಂಡಾರು ಗ್ರಾಮದ ಮಾರ್ವಿಯಲ್ಲಿ ಪೂನದಿಂದ ಆಗಮಿಸಿದ ಒಂದೂವರೇ ವರ್ಷದ ಮಗು ಕೂಡಾ ಸೋಂಕಿಗೆ ಒಳಗಾಗಿದೆ. ಇದೀಗ ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಾರಿಕೆರೆಯ 100 ವ್ಯಾಪ್ತಿಯ 12 ಮನೆ ಮತ್ತು ವಂಡಾರು ಮಾರ್ವಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಪೂನಾ ದಿಂದ ಆಗಮಿಸಿದ ಬಾರಿಕೆರೆಯ ಮಹಿಳೆ 14 ದಿನದಿಂದ ಕುಂದಾಪುರದಲ್ಲಿ ಕ್ವಾರಂಟೈನ್ ನಲ್ಲಿದ್ದು ರಿಪೋರ್ಟ್ ಲಭ್ಯವಾಗುವ ಮುನ್ನವೇ ಮೇ 28 ರಂದು ಸಂಜೆ ಮನೆಗೆ ಬಂದಿದ್ದು ಮೇ 29ರಂದು ಪಾಸಿಟಿವ್ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ಗೋರಯ್ಯ, ಕೋಟ ಠಾಣಾಧಿಕಾರಿ ರಾಜಶೇಖರ್ ಮಂದಲ್ಲಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯವರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ