ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

Team Udayavani, May 30, 2020, 3:42 PM IST

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಬಿಎಂಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ನಡೆದ ಸಭೆಯಲ್ಲಿ ಮಾತನಾಡಿದರು.

ನಿನ್ನೆ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ಸಾವೀಗೀಡಾದ ಇಬ್ಬರು ಹೆಣ್ಣು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಕೊಡಲಾಯಿತು. ಅಪಾಯಕಾರಿ ರೆಂಬೆ ಕೊಂಬೆಗಳನ್ನು ಗುರುತಿಸಿ ಕತ್ತರಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದ ಅವರು, ಎರಡು ದಿನಗಳಲ್ಲಿ ನಗರದಲ್ಲಿ ಮಳೆಯಿಂದ ಬಿದ್ದ ಮರಗಳನ್ನು ತೆರವುಗೊಳಿಸಲು  ಅಧಿಕಾರಿಗಳಿಗೆ ಸೂಚಿಸಿದರು.

ನಗರ ಸಂಚಾರಕ್ಕೆ ಬಂದ ಸಂದರ್ಭದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ನಗರದಲ್ಲಿ ಯಾವುದೇ ಸಾವು, ನೋವು ಸಂಭವಿಸದಂತೆ ಅಗತ್ಯವಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಎಸ್ ವೈ ಸೂಚಿಸಿದರು.

ಬಿಬಿಎಂಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಲು ಸೂಚಿಸಿದ ಅವರು, ನಗರದ 8 ವಲಯಗಳಲ್ಲಿ ಮ್ಯಾನ್ ಹೋಲ್‍ಗಳನ್ನು ಮುಚ್ಚಬೇಕು. ಜೆಟ್ಟಿಂಗ್ ಮಶಿನ್‍ಗಳು ಲಭ್ಯವಿರಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಬೆಂಗಳೂರು ನಗರದ ಎಲ್ಲ ಎಂಟು ವಲಯಗಳಲ್ಲಿ ಬಿಬಿಎಂಪಿ, ಬೆಸ್ಕಾಂ, ಒಳಚರಂಡಿ ಮಂಡಳಿ ಹಾಗೂ ಪೋಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳನ್ನು  ಒಳಗೊಂಡ ತಂಡವನ್ನು ರಚಿಸಿ ಮಳೆ ಸಂಬಂಧಿ ದೂರುಗಳು ಬಂದಲ್ಲಿ ತಕ್ಷಣವೇ ಕ್ರಮವಹಿಸಬೇಕು ಎಂದರು.  ಅನಾಹುತಗಳು ಸಂಭವಿಸಿದಲ್ಲಿ ಸಹಾಯಕ ಅಭಿಯಂತರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ಭೈರತಿ ಬಸವರಾಜ್, ಮುಖ್ಯ ಕಾರ್ಯದರ್ಶಿ ಟಿ.ಯೆಂ.ವಿಜಯಭಾಸ್ಕರ್,  ಬಿ.ಬಿ.ಎಂ.ಪಿ.ಆಯುಕ್ತ ಬಿ.ಹೆಚ್ .ಅನಿಲ್ ಕುಮಾರ್,  ಬೆಂಗಳೂರು ನಗರ ಪೋಲೀಸ್ ಆಯುಕ್ತ ಭಾಸ್ಕರ್ ರಾವ್,  ನಗರಾಭಿವೃದ್ಧಿ ಇಲಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.