ಗೂಂಡಾ ಕಾಯ್ದೆಯಡಿ ಬಂಧನ: ಎಸ್ಪಿ

Team Udayavani, May 31, 2020, 7:08 AM IST

bhandana

ಆನೇಕಲ್‌: ಐದು ಪ್ರಕರಣಗಳಿಗಿಂತ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಅವರನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸ ಬೇಕಾ ಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ  ಜಿಲ್ಲಾ ಪೊಲೀಸ್‌ ವರಿಷ್ಠಾದಿಕಾರಿ ರವಿ ಡಿ.ಚೆನ್ನಣ್ಣನವರ್‌ ಎಚ್ಚರಿಕೆ ನೀಡಿದ್ದಾರೆ.

ಆನೇಕಲ್‌ ಪಟ್ಟಣದಲ್ಲಿ ರೌಡಿಗಳ ಪರೇಡ್‌ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು, ಕಳೆದ ಮೂರು ತಿಂಗಳಿಂದ ಕೋವಿಡ್‌-19 ಕೆಲಸದಲ್ಲಿ  ಬ್ಯುಸಿಯಾಗಿದ್ದೆವು. ಹಿರಿಯ ಅಧಿ  ಕಾರಿಗಳ ಸೂಚನೆ ಮೇರೆಗೆ ರೌಡಿಗಳನ್ನು ಕರೆದು ರೌಡಿಶೀಟ್‌ ರೆಕಾರ್ಡ್‌ಗಳನ್ನು ಅಪ್‌ಡೇಟ್‌ ಮಾಡುವ ಕೆಲಸ ಮಾಡಲಾಗಿದೆ. ಇದರ ನಡುವೆ ಆನೇಕಲ್‌ ವೃತ್ತ ವ್ಯಾಪ್ತಿಯಲ್ಲಿನ ಆನೇಕಲ್‌,  ಬನ್ನೇರುಘಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯ 33 ರೌಡಿಶೀಟ್‌ ಗಳನ್ನು ಕ್ಲೋಸ್‌ ಮಾಡಲಾಗಿದೆ.

ಉಳಿದ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸಲಹೆ, ಸೂಚನೆ ನೀಡಿ ಉತ್ತಮ ಬದುಕು ಸಾಗಿಸಲು ಅವಕಾಶ ಕಲ್ಪಿಸಿ ಕೊಡುತ್ತೇವೆ ಅವರು ಹೇಳಿದರು. ಗಾಂಜಾ  ಮಾರಾಟ ಮಾಡುವ ದಂಧೆಯಲ್ಲಿ ತೊಡಗಿ ಕೊಂಡಿದ್ದವರನ್ನು ಕರೆದು ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ಮಹಿಳೆಯರು ಇದ್ದರು. ಅವರಿಗೆ ಈ ದಂಧೆಯನ್ನು ಬಿಟ್ಟು ಸುಂದರ ಬದುಕು ಕಟ್ಟಿಕೊಳ್ಳಿ ಎಂದು ತಿಳಿಸಲಾಗಿದೆ ಎಂದು ಹೇಳಿದರು.

ಕ್ಷುಲ್ಲಕ ಕಾರಣಕ್ಕೆ ಗುಂಪುಗಾರಿಕೆ ಒಡೆದಾಟ ಮಾಡುವುದು, ಯಾರದೋ ಬೆಂಬಲ ಇದೆ ಎಂದು ರೌಡಿ ಚಟುವಟಿಕೆಗಳನ್ನು ನಡೆಸಿದರೆ ಅಂತಹವರನ್ನು ಮಟ್ಟ ಹಾಕ ವುದು ಹೇಗೆ ಎಂದು ನಮಗೆ ತಿಳಿದಿದೆ ಎಂದು ಎಚ್ಚರಿಕೆ ನೀಡಲಾಗಿದೆ  ಎಂದು ತಿಳಿಸಿದರು.124 ರೌಡಿಗಳಲ್ಲಿ 10 ರೌಡಿಗಳು ಜೈಲಿನಲ್ಲಿದ್ದಾರೆ. 26 ಓವಿಯಲ್ಲಿದ್ದಾರೆ. 10 ಜನ ಪ್ರಮುಖ ವಾಗಿ ಗೈರು ಹಾಜರಿ ಆಗಿದ್ದಾರೆ.

ಒಂದು ವಾರದೊಳಗಾಗಿ ಅವರ ಪತ್ತೆ ಮಾಡಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್‌ ಮುಂದೆ  ಹಾಜರಿ ಪಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಇದೇ ಮೊದಲ ಬಾರಿ ರೌಡಿ ಪೆರೆಡ್‌ ನಲ್ಲಿ 28 ಜನರನ್ನು ರೌಡಿ ಶೀಟ್‌ ಗಳಿಂದ ಮುಕ್ತಿಗೊಳಿಸಿ , ಮುಂದೆ ಕಾನೂನು ಬಾರ ಚಟುವಟಿಕೆಗಳಿಂದ ದೂರ ಇರಿ ಎಂದು ಅವರು ಸೂಚನೆ  ನೀಡಿದರು.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.