ಹೊಸ ಮರಳು ನೀತಿ ಜಾರಿಗೆ ಜಿಲ್ಲಾಡಳಿತ ಸಿದ್ಧತೆ

ಟಾಸ್ಕ್ ಫೋರ್ಸ್‌-ಉಸ್ತುವಾರಿ ಸಮಿತಿಗಳ ಸಭೆ

Team Udayavani, May 31, 2020, 9:23 AM IST

ಹೊಸ ಮರಳು ನೀತಿ ಜಾರಿಗೆ ಜಿಲ್ಲಾಡಳಿತ ಸಿದ್ಧತೆ

ಧಾರವಾಡ: ಅಕ್ರಮ ಮರಳುಗಾರಿಕೆ ತಡೆಗಟ್ಟಲು ರಾಜ್ಯ ಸರಕಾರ ನೂತನವಾಗಿ ರೂಪಿಸಿರುವ ಹೊಸ ಮರಳು ನೀತಿಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದ್ದಾರೆ.

ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ (ಸುರಕ್ಷಾ ವಲಯ ಹಾಗೂ ಗಣಿ) ಮತ್ತು ಜಿಲ್ಲಾ-ತಾಲೂಕು ಮರಳು ಉಸ್ತುವಾರಿ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮರಳು ನಿಕ್ಷೇಪ ಗುರುತಿಸುವಿಕೆ, ಮೇಲ್ವಿಚಾರಣೆ-ಅನುಮೋದನೆ, ಗುತ್ತಿಗೆ ಅಥವಾ ಪರವಾನಗಿ ಅವಧಿ, ಮರಳು ವಿಲೇವಾರಿ, ಮರಳು ಸಾಗಾಣಿಕೆ ವ್ಯವಸ್ಥೆ, ಆನ್‌ ಲೈನ್‌ ಬುಕಿಂಗ್‌ ಮಾರಾಟ, ಅಕ್ರಮವಾಗಿ ಮರಳು ಸಂಗ್ರಹ-ಸಾಗಾಣಿಕೆಗೆ ದಂಡ ಮತ್ತು ಶಿಕ್ಷೆ ವಿಧಿಸುವ ಕುರಿತು ಹೊಸ ನೀತಿಯಲ್ಲಿ ಸವಿವರವಾಗಿ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಮರಳು ಬಳಕೆಗೆ ಸಾರ್ವಜನಿಕರಿಗೆ ಅನುಕೂಲವಾಗಲು ಜಿಲ್ಲಾ ಮತ್ತು ತಾಲೂಕು ಮರಳು ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ಸದಸ್ಯರು, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ-ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಹೊಸ ಮರಳು ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಕಾರ್ಯೊನ್ಮುಖರಾಗಬೇಕೆಂದರು. ಒಂದು ವಾರದಲ್ಲಿ ಪಿಡಿಒಗಳು ಆಯಾ ಗ್ರಾಪಂ ವ್ಯಾಪ್ತಿಯ ಹಳ್ಳ, ತೊರೆ, ಕೆರೆಗಳನ್ನು ಪರಿಶೀಲಿಸಿ, ಮರಳು ದೊರೆಯುವ ಸ್ಥಳಗಳ ಪಟ್ಟಿಯನ್ನು ತಾಲೂಕು ಮರಳು ಉಸ್ತುವಾರಿ ಸಮಿತಿಗೆ ಸಲ್ಲಿಸಿ ಅದನ್ನು ಜಿಲ್ಲಾ ಸಮಿತಿಗೆ ನೀಡಬೇಕು. ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯು ತಾಲೂಕು ಸಮಿತಿ ಸದಸ್ಯರಿಗೆ ಹಾಗೂ ಎಲ್ಲ ಪಿಡಿಒಗಳಿಗೆ ರಾಜ್ಯ ಮರಳು ನೀತಿ-2020ರ ಕುರಿತು ಅಗತ್ಯ ತರಬೇತಿ ನೀಡಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೆ. ಚಂದ್ರಶೇಖರ್‌ ಮರಳು ನೀತಿ ಬಗ್ಗೆ ವಿವರಿಸಿದರು. ಉಪಪೊಲೀಸ್‌ ಅಧೀಕ್ಷಕ ರವಿ ನಾಯಕ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ ಇನ್ನಿತರರಿದ್ದರು.

ಜಿಲ್ಲೆಯಲ್ಲಿ ನದಿಗಳಿಲ್ಲ. ಬೆಣ್ಣೆಹಳ್ಳ, ತುಪ್ಪರಿಹಳ್ಳ, ಬೇಡ್ತಿಹಳ್ಳ ಹಾಗೂ ಇವುಗಳನ್ನು ಸೇರುವ ಅನೇಕ ಸಣ್ಣ ಹಳ್ಳಗಳು, ತೊರೆಗಳು ಇವೆ. ಪರಿಸರಕ್ಕೆ ಹಾನಿ ಆಗದಂತೆ ಮರಳನ್ನು ಯಾವ ಯಾವ ಸ್ಥಳಗಳಿಂದ ತೆಗೆಯಬಹುದು ಎಂಬುದನ್ನು ಅಧಿಕಾರಿಗಳು ಪಟ್ಟಿ ಮಾಡಲಿ. ಆಯಾ ತಾಲೂಕಿನ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರು ಮರಳು ಗುಣಮಟ್ಟದ ಬಗ್ಗೆ ಪ್ರಮಾಣ ಪತ್ರ ನೀಡಬೇಕು.– ಡಾ| ಬಿ.ಸಿ. ಸತೀಶ, ಜಿಪಂ ಸಿಇಒ

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

hubli

Hubli:ಬಸ್‌ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಅಮಾನತು ಶಿಕ್ಷೆ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.