ನಿರುದ್ಯೋಗ ನಿವಾರಣೆಗೆ ಜವಳಿ ಉದ್ದಿಮೆ ಸ್ಥಾಪನೆ

Team Udayavani, Jun 1, 2020, 6:33 AM IST

ನಿರುದ್ಯೋಗ ನಿವಾರಣೆಗೆ ಜವಳಿ ಉದ್ದಿಮೆ ಸ್ಥಾಪನೆ

ಜಗಳೂರು: ಹಿಂದುಳಿದ ಜಗಳೂರು ತಾಲೂಕಿನ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಜವಳಿ ಉದ್ದಿಮೆ ಸ್ಥಾಪಿಸಲು ವ್ಯಾಸಗೊಂಡಹಳ್ಳಿ ಹತ್ತಿರ ಜಮೀನನ್ನು ಗುರುತಿಸಲಾಗಿದೆ ಎಂದು ಶಾಸಕ ಎಸ್‌.ವಿ. ರಾಮಚಂದ್ರ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಅನ್ನಪೂರ್ಣೇಶ್ವರಿ ಫೌಂಡೇಶನ್‌ ವತಿಯಿಂದ ಸಂಸ್ಥೆಯ ಉದ್ಯೋಗಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಮುಖಾಂತರ 500 ರೂ. ರೇಷನ್‌ ಕೂಪನ್‌ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನದಿ ಮೂಲಗಳಿಲ್ಲದೆ ಮಳೆಯನ್ನೇ ಆಶ್ರಯಿಸಿ ಜೀವನ ನಡೆಸುವಂತಹ ಸ್ಥಿತಿ ಇದೆ. ತಾಲೂಕಿನಲ್ಲಿ ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗಿರುವುದರಿಂದ ತಾಲೂಕಿನಲ್ಲಿ ಜವಳಿ ಉದ್ಯಮ ಮಾಡಲು ಉದ್ದೇಶಿಸಲಾಗಿದೆ ಎಂದರು.

ಮಳೆಯಾಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ರೈತರು ಬ್ಯಾಂಕುಗಳಲ್ಲಿ ಸಾಲ ಪಡೆಯಲು ಇಸಿ ಪತ್ರಗಳ ಅವಶ್ಯಕತೆ ಇದ್ದು, ಆನ್‌ ಲೈನ್‌ನಲ್ಲಿ ಈ ವ್ಯವಸ್ಥೆ ಕಲ್ಪಿಲಾಗಿದೆ. ರೈತರು ಸೇರಿದಂತೆ ಇತರರಿಗೆ ತೊಂದರೆಯಾಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ ಹುಲ್ಲುಮನೆ ತಿಮ್ಮಣ್ಣ ಮಾತನಾಡಿ, ಅನ್ನಪೂರ್ಣೇಶ್ವರಿ ಫೌಂಡೇಶನ್‌ ವತಿಯಿಂದ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ 500 ರೂ. ರೇಷನ್‌ ಕೂಪನ್‌ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿನೂತನ ಪ್ರಯೋಗ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಪಂ ಇಒ ಮಲ್ಲ ನಾಯ್ಕ, ಬಿಜೆಪಿ ಮಂಡಲ ಅಧ್ಯಕ್ಷ ಎಚ್‌.ಸಿ. ಮಹೇಶ್‌, ಡಿಸಿಸಿ ಬ್ಯಾಂಕ್‌ ನಾಮನಿರ್ದೇಶಿತ ಸದಸ್ಯ ಸುರಡ್ಡಿಹಳ್ಳಿ ಶರಣಪ್ಪ, ಪಪಂ ಮುಖ್ಯಾ ಧಿಕಾರಿ ರಾಜು ಡಿ. ಬಣಕಾರ, ಅನ್ನಪೂರ್ಣೇಶ್ವರಿ ಫೌಂಡೇಶನ್‌ ಅಧ್ಯಕ್ಷೆ ಲಕ್ಷ್ಮೀದೇವಿ, ಮಲ್ಲಿಕಾರ್ಜುನ್‌, ಮಂಜುನಾಥ್‌, ಶ್ರೀನಿವಾಸ್‌, ಶ್ರುತಿ, ಪ್ರವೀಣ್‌, ನಟರಾಜ್‌, ಬಸವರಾಜ್‌, ಇಂಜಿನಿಯರ್‌ ತಿಪ್ಪೇಸ್ವಾಮಿ, ಪಪಂ ಸದಸ್ಯರಾದ ನವೀನ್‌, ಪಾಪಲಿಂಗಪ್ಪ, ಬಿಜೆಪಿ ಮುಖಂಡರಾದ ಬಿಸ್ತುವಳ್ಳಿ ಬಾಬು, ಶಿವಕುಮಾರ್‌, ವಕೀಲ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.