ಹಾಸನ: ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆ


Team Udayavani, Jun 2, 2020, 7:05 AM IST

hasan-174-arike

ಹಾಸನ: ಜಿಲ್ಲೆಗೆ ಮುಂಬೈನಿಂದ ಬಂದವರಿಂದ ಕೋವಿಡ್‌ 19 ಕಂಟಕ ಕಾಡುತ್ತಲೇ ಇದೆ. ಸೋಮವಾರ ಮತ್ತೆ 15 ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 172ಕ್ಕೇರಿದೆ  ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ವರದಿಯಾದ 15 ಪ್ರಕರಣಗಳ ಪೈಕಿ ಎಲ್ಲರೂ ಚನ್ನರಾಯಪಟ್ಟಣ ತಾಲೂಕು ಮೂಲದವರು.

ಆ ಪೈಕಿ ಒಬ್ಬ ಪೊಲೀಸ್‌ ಪೇದೆಗೂ ಕೋವಿಡ್‌ 19 ಸೋಂಕು  ಕಾಣಿಸಿಕೊಂಡಿದೆ. ಪೊಲೀಸ್‌ ಪೇದೆಗೆ ಕೋವಿಡ್‌ 19 ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕವಿಲ್ಲ ಹಾಗೂ ಹೊರ ರಾಜ್ಯಗಳ ಪ್ರಯಾಣದ ಹಿನ್ನೆಲೆಯೂ ಇಲ್ಲ. ಆದರೂ  ಕೋವಿಡ್‌ 19 ಪಾಸಿಟಿವ್‌ ಕಾಣಿಸಿ ಕೊಂಡಿದೆ. ಜಿಲ್ಲೆಯ ಎಲ್ಲ ಪೊಲೀಸರಿಗೂ ಕೋವಿಡ್‌ 19 ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಪೊಲೀಸ್‌ ಪೇದೆಗೆ ಕೋವಿಡ್‌ 19 ಸೋಂಕಿರು ವುದು ದೃಢಪಟ್ಟಿದೆ ಎಂದರು.

ಒಂದೇ ಕುಟುಂಬದ ಮೂವರಿಗೆ  ಸೋಂಕು: 15 ಹೊಸ ಪಾಸಿಟಿವ್‌ ಪ್ರಕರಣಗಳಲ್ಲಿ 6 ಮಂದಿ ಹೊಸಬರು, 9 ಮಂದಿಗೆ 2ನೇ ಪರೀಕ್ಷೆ ಯಲ್ಲಿ ಸೋಂಕು ಪತ್ತೆಯಾಗಿದೆ. ಮುಂಬೈ ನಿಂದ ಬಂದು ನೇರವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ 6  ಮಂದಿಗೆ ಮೊದಲ ಪರೀಕ್ಷೆ ಯಲ್ಲಿಯೇ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಒಂದೇ ಕುಟುಂಬದ 49 ವರ್ಷದ ಪುರುಷ, 43 ವರ್ಷದ ಮಹಿಳೆ ಹಾಗೂ 32 ವರ್ಷದ ಮಹಿಳೆಯಲ್ಲಿ ಸೋಂಕು ಕಂಡು ಬಂದಿದೆ ಎಂದು ಡೀಸಿ ವಿವರಿಸಿದರು.

ಕಾರಿನಲ್ಲಿ ಬಂದವರಿಗೆ ಸೋಂಕು: ಒಂದೇ ಕಾರಿನಲ್ಲಿ ಮುಂಬೈನಿಂದ ಮೇ 21 ರಂದು ಬಂದಿದ್ದ ಮೂವರ ಪೈಕಿ 31 ವರ್ಷದ ಮಹಿಳೆ ಹಾಗೂ 5 ವರ್ಷದ ಮಗುವಿನಲ್ಲೂ ಸೋಂಕು ಪತ್ತೆಯಾಗಿದೆ. ಒಬ್ಬ ಪೊಲೀಸ್‌ ಪೇದೆ ಸೇರಿ 6 ಮಂದಿ  ಹೊಸಬರಲ್ಲಿ ಸೋಮವಾರ ಸೋಂಕು ಕಂಡು ಬಂದಿದೆ. 9 ಮಂದಿಗೆ ಕ್ವಾರಂಟೈನ್‌ನಿಂದ ಬಿಡುಗಡೆಯಾಗುವ ಮೊದಲು ನಡೆದ 2ನೇ ಪರೀಕ್ಷೆಯಲ್ಲಿ ಕೋವಿಡ್‌ 19 ಸೋಂಕು ಪತ್ತೆ ಯಾಗಿದೆ. ಎಲ್ಲರನ್ನೂ ಹಾಸನದ ಕೋವಿಡ್‌ 19 ಆಸ್ಪತ್ರೆಗೆ  ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ  ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಒಟ್ಟು 45 ಮಂದಿ ಗುಣಮುಖ: ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 45 ಜನರನ್ನು ಈವರೆಗೆ ಬಿಡುಗಡೆ ಮಾಡಲಾಗಿದೆ. ಮೊದಲ ಹಂತ ದಲ್ಲಿ 29 ಮಂದಿ ಬಿಡುಗಡೆಯಾಗಿದ್ದರೆ, ಭಾನುವಾರ ನಾಲ್ವರು  ಹಾಗೂ ಸೋಮವಾರ 7 ಜನರು ಸೋಂಕು ಮುಕ್ತರಾಗಿ ಬಿಡುಗಡೆ ಯಾಗಿದ್ದಾರೆ ಎಂದು ತಿಳಿಸಿದರು.

11 ಪ್ರದೇಶ ಸೀಲ್‌ಡೌನ್‌: ಜಿಲ್ಲೆಗೆ ಈವರೆಗೆ ಹೊರ ರಾಜ್ಯಗಳಿಂದ 2,424 ಮಂದಿ ಬಂದಿದ್ದು, ಆ ಪೈಕಿ 1,524 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 900 ಮಂದಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಇನ್ನು 200 ಜನರ ಪರಿಕ್ಷಾ ವರದಿ  ಬರಬೇಕಾಗಿದೆ. ಜಿಲ್ಲೆಯಲ್ಲಿ  ರಡು ಪೊಲೀಸ್‌ ಠಾಣೆಗಳೂ ಸೇರಿ ಒಟ್ಟು 11 ಪ್ರದೇಶಗಳನ್ನು ಕಂಟೈನ್‌ಮೆಂಟ್‌ ಝೋನ್‌ ಎಂದು ಘೋಷಿಸಿ ಸೀಲ್‌ಡೌನ್‌ ಮಾಡಲಾ ಗಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು. ಅಂತಾರಾಜ್ಯಗಳ ನಡುವೆ  ಸಂಚಾರಕ್ಕೆ ಈಗ ಪಾಸ್‌ ಪಡೆಯುವ ಅಗತ್ಯವಿಲ್ಲ. ಸೇವಾ ಸಿಂಧುವಿನಲ್ಲಿ ನೋಂದಣಿ ಮಾಡಿದರೆ ಸಾಕು.

ನೋಂದಣಿ ಮಾಡಿಕೊಂಡು ಜಿಲ್ಲೆಗೆ ಬರುವ ವರನ್ನು ಗಡಿ ಭಾಗದ ಚೆಕ್‌ಪೋಸ್ಟ್‌ನಲ್ಲಿ ಪರೀಕ್ಷೆಗೊಳಪಡಿಸಿ  ಮಹಾರಾಷ್ಟ್ರದವರನ್ನು ಹೊರತುಪಡಿಸಿ 14 ದಿನಗಳ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗುವುದು. ಮಹಾರಾಷ್ಟ್ರದಿಂದ ಬರುವವರನ್ನು 7 ದಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿಟ್ಟು ಆನಂತರ 7 ದಿನಗಳ ಹೋಂ ಕ್ವಾರಂಟೈನ್‌ ಮಾಡಲಾಗುವುದು ಎಂದರು. ಎಸ್ಪಿ  ಶ್ರೀನಿವಾಸಗೌಡ, ಡಿಎಚ್‌ಒ ಡಾ.ಸತೀಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.