ಅಮ್ಮೇರಹಳ್ಳಿ ಕೆರೆಗೆ ಕೆ.ಸಿ.ವ್ಯಾಲಿ ನೀರು

Team Udayavani, Jun 2, 2020, 7:26 AM IST

ammerahalli

ಕೋಲಾರ: ನಗರಕ್ಕೆ ಕುಡಿಯುವ ನೀರಿಗೆ ಮೀಸಲಾಗಿದ್ದ ಅಮ್ಮೇರಹಳ್ಳಿ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿದು ಬರುತ್ತಿದ್ದು, ನೇರವಾಗಿ ಕೊಳವೆ ಬಾವಿಗಳ ಮೂಲಕ ಅಂತರ್ಜಲ ಕಲುಷಿತಗೊಳ್ಳುವ ಭೀತಿ ಎದುರಾಗಿದೆ. ಅಮ್ಮೇರಹಳ್ಳಿ ಹಾಗೂ  ಕೊಂಡರಾಜನಹಳ್ಳಿ ಯ ಗ್ರಾಮಸ್ಥರು ಜಿಲ್ಲಾಡಳಿತದ ಮೇಲೆ ಒತ್ತಡ ಹೇರುವ ಮೂಲಕ ಕುಡಿಯುವ ನೀರಿಗೆ ಮೀಸಲಾಗಿದ್ದ ಅಮ್ಮೇರಹಳ್ಳಿ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿದು ಬರುವಂತೆ ಮಾಡುವಲ್ಲಿ ಸಫ‌ಲವಾಗಿದ್ದರು.

ಒಂದು  ವಾರದಿಂದಲೂ ಕೆ.ಸಿ. ವ್ಯಾಲಿ ನೀರು ಅಮ್ಮೇರಹಳ್ಳಿ ಕೆರೆ ನೀರು ಹರಿದು ಬರು ತ್ತಿದ್ದು, ಮಡೇರಹಳ್ಳಿ ಹಾಗೂ ಅಮ್ಮೇರಹಳ್ಳಿ ಕೆರೆ ಅಂಗಳದಲ್ಲಿ ಕೋಲಾರ ನಗರಸಭೆ ನೀರು ಸರಬರಾಜು ಮಾಡಲು 80ಕ್ಕೂ ಹೆಚ್ಚು ಕೊಳವೆಬಾವಿ  ಕೊರೆದಿತ್ತು. ಕೆಲವು ಕೊಳವೆ ಬಾವಿಗಳು ಬತ್ತಿ ಹೋಗಿದ್ದವು, ಕೆಲವು ಬೋರ್‌ಗಳಲ್ಲಿ ನೀರು ಲಭ್ಯವಾಗುತ್ತಿತ್ತು.

ಅಂತರ್ಜಲ ಕಲುಷಿತ: ಇದೀಗ ಈ ಕೆರೆಗಳಿಗೆ ಕೆ.ಸಿ. ವ್ಯಾಲಿ ನೀರು ಹರಿದು ಬರುತ್ತಿದ್ದು, ಬಹುತೇಕ ಕೊಳವೆ ಬಾವಿಗಳಿಗೆ ನಗರಸಭೆ ಮುಚ್ಚಳ ಹಾಕದೇ ಬಿಟ್ಟಿದೆ. ಇದರಿಂದ ಕೆ.ಸಿ. ವ್ಯಾಲಿ ನೀರು ನೇರವಾಗಿ ಈ ಕೊಳವೆ ಬಾವಿಗಳ ಮೂಲಕ  ಸಾವಿರಾರು ಅಡಿ ಆಳದ ಅಂತರ್ಜಲ ಭೂಗರ್ಭಕ್ಕೆ ನೇರವಾಗಿ ತಲುಪಲಿದೆ. ಇದರಿಂದ ಅಂತರ್ಜಲ ಕಲುಷಿತವಾಗುವ ಭೀತಿ ಎದುರಾಗಿದೆ.

ಆರೋಗ್ಯದ ಮೇಲೆ ಪರಿಣಾಮ: ಇತ್ತೀಚಿಗೆ ಜಿಲ್ಲೆಗೆ ಆಗಮಿಸಿದ್ದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಗೂ ನಗರಸಭಾ ಸದಸ್ಯ ಮುರಳೀಗೌಡ ಕೊಳವೆ ಬಾವಿಗಳಿಗೆ ಮುಚ್ಚಳ ಮನವಿ ಸಲ್ಲಿಸಿದ್ದರು. ಆದರೆ, ಈ ಬಗ್ಗೆ ಇದುವರೆಗೂ  ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅಮ್ಮೇರಹಳ್ಳಿ ಹಾಗೂ ಕೊಂಡರಾಜನ ಹಳ್ಳಿ ಮತ್ತು ಈ ನೀರಿನ ಮೇಲೆ ಅವಲಂಬಿತ ವಾಗಿರುವ ನಗರದ ವಿವಿಧ ವಾರ್ಡ್‌ಗಳ ಜನತೆಯ ಆರೋಗ್ಯದ ಮೇಲೆ ಪರಿಣಾಮ ಬೀರುವ ಆತಂಕಕ್ಕೂ  ಕಾರಣವಾಗಿದೆ.

ಆದ್ದರಿಂದ ಕೂಡಲೇ ನಗರಸಭೆ ಮಡೇರಹಳ್ಳಿ ಹಾಗೂ ಅಮ್ಮೇರಹಳ್ಳಿ ಮತ್ತು ಮುಂದಿನ ದಿನಗಳಲ್ಲಿ ಕೆಸಿ ವ್ಯಾಲಿ ನೀರು ಹರಿಯಲಿರುವ ಕೋಲಾರಮ್ಮ ಕೆರೆ ಅಂಗಳದ ಕೊಳವೆ ಬಾವಿಗಳಿಗೆ ಮುಚ್ಚಳ ಹಾಕುವ ಮೂಲಕ ಅಂತರ್ಜಲ ಕಲುಷಿತವಾಗದಂತೆ ಎಚ್ಚರವಹಿಸಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ.

ಮಡೇರಹಳ್ಳಿ, ಅಮ್ಮೇರಹಳ್ಳಿ ಕೆರೆ ಅಂಗಳದಲ್ಲಿ ನಗರಸಭೆಯಿಂದ 80ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಯಲಾಗಿದೆ. ಎಲ್ಲದಕ್ಕೂ ಮುಚ್ಚಳ ಹಾಕಲು 50 ಲಕ್ಷ ರೂ. ಅಗತ್ಯವಿದೆ. ಟೆಂಡರ್‌ ಕರೆಯಲು ಸೂಕ್ತ ಕ್ರಮ ವಹಿಸಲಾಗುತ್ತಿದೆ.
-ಶ್ರೀಕಾಂತ್‌, ಪೌರಾಯುಕ್ತ, ನಗರಸಭೆ

ಅಮ್ಮೇರಹಳ್ಳಿ ಕೆರೆಗೆ ಶೇ.20 ಕೆ.ಸಿ. ವ್ಯಾಲಿ ನೀರು ಹರಿದು ಬಂದಿದೆ. ಕೆಲವೇ ದಿನಗಳಲ್ಲಿ ಕೆರೆ ತುಂಬಲಿದೆ. ನೀರು ನೇರವಾಗಿ ಕೊಳವೆ ಬಾವಿ ಮೂಲಕ ಅಂತರ್ಜಲ ಸೇರುವ ಅಪಾಯವಿದೆ. 
-ರೈತ ಚಲಪತಿ, ಅಮ್ಮೇರಹಳ್ಳಿ

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.