Kundapura, Byndoor ತಾಲೂಕಿನಲ್ಲಿ 400 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಸಜ್ಜು
Team Udayavani, Jun 2, 2020, 6:07 PM IST
ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಅವರು ಮಂಗಳವಾರ ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ಶಾಸಕರು, ಅಧಿಕಾರಿಗಳು, ವೈದ್ಯರ ಜತೆ ಸಮಾಲೋಚನೆ ನಡೆಸಿ ಮಾಧ್ಯಮದ ಜತೆ ಮಾತನಾಡಿದರು. ಕುಂದಾಪುರದಲ್ಲಿ ಈಗಾಗಲೇ 120 ಹಾಸಿಗೆಗಳ ಸಾಮರ್ಥ್ಯದ ಹೆರಿಗೆ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇದು ಸಾಲುತ್ತಿಲ್ಲವಾದ ಕಾರಣ ಹಳೆ ಸರಕಾರಿ ಆಸ್ಪತ್ರೆಯ 100 ಹಾಸಿಗೆಗಳನ್ನೂ ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗುವುದು. ಹಳೆ ಆದರ್ಶ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ಗಳಿದ್ದು ಅದನ್ನೂ ಕೋವಿಡ್ ಆಸ್ಪತ್ರೆಯನ್ನಾಗಿಸಲಾಗುವುದು. ಕೊಲ್ಲೂರಿನ ಲಲಿತಾಂಬಿಕಾ ವಸತಿಗೃಹವನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್