ಸಾರಿಗೆ ಸಂಚಾರಕ್ಕೆ ಮುಕ್ತವಾದ್ರೂ ಪ್ರಯಾಣಿಕರ ಬರ


Team Udayavani, Jun 3, 2020, 6:59 AM IST

ckl saarige

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್‌ ಸಡಿಲಿಸಿ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿ ಎರಡು ವಾರ ಕಳೆದರೂ ಜಿಲ್ಲೆಯಲ್ಲಿ ಬಸ್‌ ಸಂಚಾರಕ್ಕೆ ಪ್ರಯಾಣಿಕರು ಹಿಂದೇಟು  ಕುವಂತಾಗಿದ್ದು,  ಕಳೆದ ಎರಡು ವಾರದಲ್ಲಿ ಬರೋಬ್ಬರಿ 46,773 ಪ್ರಯಾಣಿಕರು ಮಾತ್ರ ಸಂಚರಿಸಿದ್ದಾರೆ.

ದೊರೆಯದ ಸ್ಪಂದನೆ: ಕೇಂದ್ರ, ರಾಜ್ಯ ಸರ್ಕಾರ 5ನೇ ಹಂತದ ಲಾಕ್‌ಡೌನ್‌ ಘೋಷಿಸಿ ಹಲವು ಸೇವೆಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ. ಆದರೆ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಆರ್ಭಟ, ಜಿಲ್ಲೆಯಲ್ಲಿ 150ರ ಅಂಚಿಗೆ ಸೋಂಕಿತರ  ಸಂಖ್ಯೆ ಮುಟ್ಟಿರುವುದರಿಂದ ಬಸ್‌ ಪ್ರಯಾಣಕ್ಕೆ ನಾಗರಿಕರು ಹಿಂದೇಟು ಹಾಕಿದ್ದು, ಸಾರಿಗೆ ಸೇವೆಗೆ ಈಗ ಪ್ರಯಾಣಿಕರಿಂದ ನಿರೀಕ್ಷಿತ ಸ್ಪಂದನೆ ದೊರೆಯದಿರುವುದು ಎದ್ದು ಕಾಣುತ್ತಿದೆ.

ಪ್ರಯಾಣಿಕರ ಬರ: ಲಾಕ್‌ಡೌನ್‌ ಸಡಿಲಿಕೆ ಬಳಿಕ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ತನ್ನ ಸೇವೆ ಆರಂಭಿಸಿದ ನಂತರ ಎರಡು ವಾರದಲ್ಲಿ ಇದುವರೆಗೂ 791 ಬಸ್‌ಗಳು ಕಾರ್ಯಾಚರಣೆ ಮಾಡಿವೆ. ಒಟ್ಟು 1,725 ಟ್ರಿಪ್‌ಗ್ಳಲ್ಲಿ ಬಸ್‌ಗಳು 1.19 ಲಕ್ಷ  ಕಿ.ಮೀ. ಸಂಚರಿಸಿದ್ದು, ಎರಡು ವಾರದಲ್ಲಿ 46,773 ಮಂದಿ ಪ್ರಯಾಣಿಕರು ಜಿಲ್ಲೆಯಿಂದ ವಿವಿಧ ಭಾಗಗಳಿಗೆ ಸಂಚರಿಸಿದ್ದಾರೆ. ಆದರೆ ಬಹುಪಾಲು ಚಿಕ್ಕಬಳ್ಳಾಪುರದಿಂದ ರಾಜಧಾನಿ ಬೆಂಗಳೂರಿಗೆ ಪ್ರಯಾಣಿಸಿದವರೇ ಹೆಚ್ಚು.

ಆದರೆ  ಇದುವ ರೆಗೂ ಚಿಕ್ಕಬಳ್ಳಾಪುರದಿಂದ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬಸ್‌ ಸೌಕರ್ಯ ಇದ್ದರೂ ಪ್ರಯಾಣಿಕರಿಗೆ ಬರ ಎದುರಾಗಿದೆ. ಒಂದು ಬಸ್‌ನಲ್ಲಿ 30 ಪ್ರಯಾಣಿಕರು: ಪ್ರತಿ ಟ್ರಿಪ್‌ ಮುಗಿದ ಬಳಿಕ ಬಸ್‌ನ್ನು ಕ್ರಿಮಿನಾಶಕ ಸಿಂಪಡಿಸಿ  ಸ್ವತ್ಛಗೊಳಿಸಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ಎಲ್ಲ ರೀತಿಯ ಮನ್ನೆಚ್ಚರಿಕೆ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಪ್ರಯಾಣಿಕ ರಿಗೆ ಉಷ್ಣಾಂಶ ಪರೀಕ್ಷಿಸಿ 30 ಪ್ರಯಾಣಿಕರಿಗೆ ಬಸ್‌ನಲ್ಲಿ ಅವಕಾಶ ಕಲ್ಪಿಸಿ ಸಾಮಾಜಿಕ  ಅಂತರ ಕಾಯ್ದುಕೊಳ್ಳಲಾಗಿದೆ.

10 ವರ್ಷ ಕೆಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಪ್ರಯಾಣಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಕೆಎಸ್‌ ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್‌  ಉದಯವಾಣಿಗೆ ತಿಳಿಸಿದರು. ಜೂನ್‌ 8 ರ ನಂತರ ದೇವಾ ಲಯ, ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳುವುದರಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಬರಬಹುದು ಎಂದರು.

ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಮೇ 19ರಿಂದಲೇ ಮುಕ್ತವಾಗಿದ್ದರೂ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇದೆ. ಎರಡು ವಾರದಲ್ಲಿ ಒಟ್ಟು 791 ಬಸ್‌ಗಳು ಕಾರ್ಯಾಚರಣೆ ನಡೆಸಿವೆ. ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಿಂದ ತಾಲೂಕು ಕೇಂದ್ರಗಳಿಗೆ ಪ್ರಯಾಣಿಸಲು ಯಾರು ಮುಂದೆ ಬರುತ್ತಿಲ್ಲ. ಎರಡು ವಾರದಲ್ಲಿ ನಿಗಮಕ್ಕೆ ಒಟ್ಟು 30.31 ಲಕ್ಷ ರೂ. ಹಣ ಸಂಗ್ರಹವಾಗಿದೆ. 
-ಮಂಜುನಾಥ, ಡಿಟಿಒ, ಕೆಎಸ್‌ಆರ್‌ಟಿಸಿ, ಚಿಕ್ಕಬಳ್ಳಾಪುರ

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.