ಜೆ.ಬಿ.ನಗರ ಠಾಣೆ ಸಂಪೂರ್ಣ ಸೀಲ್‌ಡೌನ್‌


Team Udayavani, Jun 6, 2020, 5:27 AM IST

station jbnagar

ಬೆಂಗಳೂರು: ಪೊಲೀಸ್‌ ವಶದಲ್ಲಿದ್ದ ಮೂವರು ಆರೋಪಿಗಳ ಪೈಕಿ ಒಬ್ಬನಿಗೆ ಕೋವಿಡ್‌ 19 ದೃಢಪಟ್ಟ ಹಿನ್ನೆಲೆಯಲ್ಲಿ ಜೀವನ್‌ ಭೀಮಾ ನಗರ(ಜೆ.ಬಿ.ನಗರ) ಠಾಣೆಯನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗಿದ್ದು, ಇಡೀ  ಠಾಣೆಯನ್ನೇ ಇಂದಿರಾನಗರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಡೆಲಿವರಿ ಬಾಯ್‌ ಒಬ್ಬನನ್ನು ಬಂಧಿಸಲಾಗಿತ್ತು.

ಇದರೊಂದಿಗೆ ಇತರೆ ಇಬ್ಬರು  ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಪೊಲೀಸ್‌ ವಶದಲ್ಲಿ ಇಡಲಾಗಿತ್ತು. ಅಲ್ಲದೆ, ಜೂನ್‌ 2 ರಂದು ಮೂವರು ಆರೋಪಿಗಳಿಗೆ ಕೋವಿಡ್‌ 19 ಪರೀಕ್ಷೆ ನಡೆಸಲಾಗಿತ್ತು. ಶುಕ್ರವಾರ ವರದಿ ಬಂದಿದ್ದು,  ಡೆಲಿವರಿ ಬಾಯ್‌ಗೆ ಸೋಂಕು ದೃಢಪಟ್ಟಿದೆ. ಇಬ್ಬರಿಗೆ ನೆಗೆಟಿವ್‌ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಠಾಣೆಯ ಮೂಲಗಳು ತಿಳಿಸಿವೆ.

ಇಂದಿರಾನಗರ ಠಾಣೆಗೆ ಜವಾಬ್ದಾರಿ: ಜೀವನ್‌ ಭೀಮಾ ನಗರ ಪೊಲೀಸ್‌ ಠಾಣೆಯನ್ನು ಸಂಪೂರ್ಣವಾಗಿ  ಸೀಲ್‌ಡೌನ್‌ ಮಾಡಲಾಗಿದ್ದು, ಸ್ಯಾನಿಟೈಸರ್‌ ಸಿಂಪಡಣೆಗೆ ಸೂಚಿಸಲಾಗಿದೆ. ಜತೆಗೆ ಇಡೀ ಪೊಲೀಸ್‌ ಠಾಣೆಯ ಕಾರ್ಯನಿರ್ವಹಣೆಯನ್ನು ಇಂದಿರಾನಗರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು  ಮಾಹಿತಿ ನೀಡಿದರು.

24 ಮಂದಿ ಕ್ವಾರಂಟೈನ್‌: ವರದಿ ಬಂದ ಹಿನ್ನೆಲೆಯಲ್ಲಿ ಜೆ.ಬಿ.ನಗರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಸಬ್‌ ಇನ್‌ಸ್ಪೆಕ್ಟರ್‌ ಸೇರಿ 24 ಮಂದಿಯನ್ನು ಹೋಮ್‌  ಕ್ವಾರಂಟೈನ್‌  ಮಾಡಲಾಗಿದ್ದು, ಚಿಕಿತ್ಸೆಗೂ ಸೂಚಿಸಲಾಗಿದೆ. ಈಅಧಿಕಾರಿ-ಸಿಬ್ಬಂದಿ ಆರೋಪಿಯ ಪ್ರಾಥಮಿಕ ಸಂಪರ್ಕ ದಲ್ಲಿ  ದ್ದರು. ಹೀಗಾಗಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ಪೊಲೀಸರು  ಹೇಳಿದರು.

ನಗರದ ಹತ್ತು ಮಂದಿಗೆ ಕೋವಿಡ್‌ 19 ಸೋಂಕು ದೃಢ: ನಗರದಲ್ಲಿ ಶುಕ್ರವಾರ 10 ಕೋವಿಡ್‌ 19 ವೈರಸ್‌ ಸೋಂಕು ಪ್ರಕರಣ  ಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿಗೊಳಗಾದವರ ಸಂಖ್ಯೆ 434ಕ್ಕೆ ಏರಿಕೆಯಾಗಿದೆ. ಈ ಪೈಕಿ 271 ಮಂದಿ ಸೋಂಕಿತರು ಗುಣಮುಖರಾಗಿ ದ್ದು, 149 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಕಿ 13 ಪ್ರಕರಣಗಳಲ್ಲಿ ಸೋಂಕಿತರು ಚಿಕಿತ್ಸೆ ಫ‌ಲಕಾರಿಯಾಗದೇ, ಒಬ್ಬ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಶುಕ್ರವಾರದ 10  ಸೋಂಕಿತರಲ್ಲಿ ಐದು ಮಂದಿ ಹೊರರಾಜ್ಯದಿಂದ, ಒಬ್ಬರು ಹೊರದೇಶದಿಂದ ಬಂದಿದ್ದಾರೆ.

ನಾಲ್ವರಿಗೆ ಸ್ಥಳೀಯ ಸೋಂಕಿತ ಸಂಪರ್ಕದಿಂದ ಸೋಂಕು ತಗುಲಿದೆ. ಈ ಎಲ್ಲಾ ಸೋಂಕಿತರನ್ನು ಕೋವಿಡ್‌ 19 ನಿಗದಿತ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಪೂರ್ವ, ದಕ್ಷಿಣ, ಪಶ್ಚಿಮ ವಲಯದಲ್ಲಿ ದಿನ ಎಲ್ಲಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಹೊರರಾಜ್ಯದಿಂದ  ಬಂದು ಸೋಂಕಿತರಾದ 5 ಮಂದಿಯಲ್ಲಿ ಮೂವರು  ದೆಹಲಿಯಿಂದ, ತಮಿಳುನಾಡು ಮತ್ತು ಮಹಾರಾಷ್ಟ್ರದಿಂದ ತಲಾ ಒಬ್ಬರು ಆಗಮಿಸಿದ್ದರು. ಇದರಲ್ಲಿ ಮಹಾರಾಷ್ಟ್ರದಿಂದ ಬಂದವರು ಮಾತ್ರ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದು,  ಬೇರೆ ರಾಜ್ಯದಿಂದ ಬಂದವರು ಹೋಂ ಕ್ವಾರಂಟೈನ್‌ನಲ್ಲಿದ್ದರು. ಇಂಡೋನೇಷಿಯಾದಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಒಬ್ಬರಿಗೆ ಸೋಂಕು ತಗುಲಿದೆ.

ಮತ್ತೆರಡು ವಾರ್ಡ್‌ ಕಂಟೈನ್ಮೆಂಟ್‌?: ನಗರದಲ್ಲಿ ಶುಕ್ರವಾರ ಹತ್ತು ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಹೊಸದಾಗಿ ರಾಜಮಹಲ್‌ ಗುಟ್ಟಹಳ್ಳಿ  ಹಾಗೂ ಚಲವಾದಿಪಾಳ್ಯಕ್ಕೂ ಸೋಂಕು ವಿಸ್ತರಣೆಯಾಗಿದೆ. ಈ  ಹಿನ್ನೆಲೆಯಲ್ಲಿ ಆ ಎರಡೂ ವಾರ್ಡ್‌ಗಳು ನಿರ್ಬಂಧಿತ ವಲಯ (ಕಂಟೈನ್ಮೆಂಟ್‌ ಝೋನ್‌) ವ್ಯಾಪ್ತಿಗೆ ಒಳಪಡುವ ಸಾಧ್ಯತೆ ಇದೆ. ಚಲವಾದಿಪಾಳ್ಯದಲ್ಲಿ ಖಾಸಗಿ ಆಸ್ಪತ್ರೆಯ ನರ್ಸ್‌ ಹಾಗೂ ಖಾಸಗಿ ಕಂಪನಿ ಮಹಿಳಾ ಉದ್ಯೋಗಿಯೊಬ್ಬರಿಗೆ  ಸೋಂಕು ದೃಢಪಟ್ಟಿದೆ.

ಅದೇ ರೀತಿ, ರಾಜಮಹಲ್‌ ಗುಟ್ಟಹಳ್ಳಿಯ  ನಿವಾಸಿಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಒಂದುವೇಳೆ ಕಂಟೈನ್ಮೆಂಟ್‌ ವಲಯಗಳಿಗೆ ಇವೆರಡೂ  ಸೇರ್ಪಡೆಗೊಂಡರೆ, ಕಂಟೈನ್ಮೆಂಟ್‌ ವಲಯಗಳ ಸಂಖ್ಯೆ 42ಕ್ಕೆ  ಏರಿಕೆ ಆಗಲಿದೆ. ಇನ್ನು ಉಳಿದಂತೆ ಅಂಜನಪ್ಪ ಗಾರ್ಡನ್‌ ಹಾಗೂ ಅಗ್ರಹಾರ ದಾಸರಹಳ್ಳಿಯಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಈ ಮಧ್ಯೆ 60 ದಿನಗಳ ನಂತರ  ಪಾದರಾಯನಪುರ  11ನೇ ಕ್ರಾಸ್‌ನಲ್ಲಿದ್ದ ಸೀಲ್‌ ಡೌನ್‌ ತೆರವುಗೊಳಿಸಲಾಗಿದೆ.

ಅತಿ ಹೆಚ್ಚು ಸೋಂಕಿತರು ಇದ್ದ ರಸ್ತೆ ಇದಾಗಿತ್ತು. ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಅಲ್ಲದೆ ಈ ರಸ್ತೆಯಲ್ಲಿ ಕಳೆದ 28 ದಿನದಿಂದ ಹೊಸ ಪ್ರಕರಣ ಪತ್ತೆ ಆಗಿಲ್ಲ ಎಂಬ  ಕಾರಣಕ್ಕೆ ಮುಕ್ತಗೊಳಿಸಲಾಗಿದೆ ಎನ್ನಲಾಗಿದೆ. ಆದರೆ, ಇದನ್ನು ಅಧಿಕಾರಿಗಳು ತಳ್ಳಿಹಾಕಿದ್ದು, ಸೀಲ್‌ಡೌನ್‌ ವೇಳೆ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಹಿಂದಕ್ಕೆ ಹಾಕಲಾಗಿದೆ. ಇದರಿಂದ ಎರಡು ರಸ್ತೆಗಳು ತೆರವಾಗಿವೆ ಅಷ್ಟೇ ಹೊರತು, ಇಡೀ ಕ್ರಾಸ್‌  ಮುಕ್ತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.