ಶೀಘ್ರ ಶ್ರೀರಂಗ ಏತನೀರಾವರಿ ಪೂರ್ಣ

Team Udayavani, Jun 6, 2020, 6:36 AM IST

shigra-sriranga

ರಾಮನಗರ: ಕುಂಟುತ್ತ, ತೆವಳುತ್ತ ಸಾಗಿದ್ದ ಶ್ರೀರಂಗ ಯೋಜನೆಗೆ ಚರುಕು ನೀಡಲು ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮನಸ್ಸು ಮಾಡಿದ್ದಾರೆ. ಶ್ರೀರಂಗ ಏತ ನೀರಾವರಿ ಯೋಜನೆ ಪ್ರಗತಿ ಕುರಿತಂತೆ ಬೆಂಗಳೂರಿನಲ್ಲಿ ಶುಕ್ರವಾರ  ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸಭೆ ನಡೆಸಿದ್ದಾರೆ. ವರ್ಷದಲ್ಲಿ ಕಾಮಗಾರಿ ಪೂರ್ಣ ಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀರಂಗ ಯೋಜನೆಯ 324.67 ಕೋಟಿ ರೂ.  ಪರಿಷ್ಕೃತ ಅಂದಾಜಿಗೆ ಮುಂದಿನ ಸಚಿವ ಸಂಪುಟ ಸಭೆ ಯಲ್ಲಿ ಒಪ್ಪಿಗೆ ಪಡೆಯುವುದಾಗಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ 277 ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ ಯೋಜನೆಗೆ 2017ರಲ್ಲಿ  ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಶ್ರೀರಂಗ ಏತ ನೀರಾವರಿ ಯೋಜನೆಯ ಪ್ರಗತಿ ಕುರಿತಂತೆ ಬೆಂಗಳೂರಿನಲ್ಲಿ ಶುಕ್ರವಾರ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಸಿ.ಎನ್‌.ಅಶ್ವತ್ಥನಾರಾ ಯಣ, 2014ರಿಂದ ಕುಂಟುತ್ತಾ ಸಾಗಿರುವ ಈ ಕಾಮಗಾರಿ ಚುರುಕುಗೊಳಿಸಬೇಕು ಎಂದು ಕಟ್ಟಾಜ್ಞೆ ಮಾಡಿದ್ದಾರೆ.

ಮಾಗಡಿ ತಾಲೂಕಿನ 211 ಹಳ್ಳಿಗಳು, ಕುಣಿಗಲ್‌ ತಾಲೂಕಿನ 66 ಹಳ್ಳಿಗಳಿಗೆ ಕುಡಿ ಯುವ ನೀರು ಒದಗಿಸಲಾಗುತ್ತದೆ. ಇದರಿಂ ದಾಗಿ ಮಾಗಡಿಯ 66 ಕೆರೆಗಳು, ಕುಣಿಗಲ್‌ನ 17 ಕೆರೆಗಳನ್ನು ತುಂಬಿಸಲು ಹೇಮಾವತಿ ನದಿಯಿಂದ ಏತ ನೀರಾವರಿ ಮೂಲಕ ಹರಿಸುವ 277.5 ಕೋಟಿ ರೂ. ವೆಚ್ಚದ ಯೋಜನೆಯನ್ನು  2014ರಲ್ಲಿ ಆರಂಭಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಕಾಮ ಗಾರಿ ಅರ್ಧಕ್ಕೆ ನಿಂತಿತ್ತು. ತದ ನಂತರ 2017ರಲ್ಲಿ ಈ ಯೋಜನೆಗೆ ಮತ್ತೆ ಚಾಲನೆ ದೊರಕಿತ್ತು. ಇಲ್ಲಿಯವರೆಗೆ ಸುಮಾರು 163.38 ಕೋಟಿ ರೂ. ವೆಚ್ಚದ ಕಾಮಗಾರಿ  ಆಗಿದೆ.

ಯೋಜನಾ ವೆಚ್ಚದಲ್ಲಿ ಏರಿಕೆ ಏಕೆ?: ಭೂಸ್ವಾಧೀನ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗುವುದನ್ನು ತಪ್ಪಿಸಲು 277 ಕಿ. ಮೀ. ಉದ್ದದ ರಸ್ತೆ ಬದಿ ಗ್ರಾವಿಟಿ ಮೈನ್‌ ಪೈಪ್‌ ಅಳವಡಿಸಲು ನಿರ್ಧರಿಸಿದ್ದರಿಂದ ಯೋಜನೆಗೆ 53.42  ಕೋಟಿ ರೂ. ಹೆಚ್ಚುವರಿ ಅನುದಾನ ಬೇಕಾಗಿದ್ದು, ಯೋಜನಾ ವೆಚ್ಚ 324.67 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಚಿವರು, ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಭೂಸ್ವಾಧೀನ ತ್ವರಿತಗೊಳಿಸಲು ಸೂಚನೆ: ಯೋಜನೆಗೆ ಜಿಲ್ಲೆಯಲ್ಲಿ 57 ಎಕರೆ  ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, 14 ಎಕರೆ, 24 ಗುಂಟೆ ಜಮೀನನ್ನು ನೇರ ಖರೀದಿ ಮೂಲಕ ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ.ಅಶ್ವತ್ಥ ನಾರಾಯಣ, ರಾಮನಗರ ಮತ್ತು ತುಮ ಕೂರು ಜಿಲ್ಲೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ.

ಇದಕ್ಕೆ ಇರುವ ತೊಡಕುಗಳನ್ನು ತಕ್ಷಣವೇ ಬಗೆಹರಿಸಿ ಅಗತ್ಯ  ಭೂಮಿ ಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಮಾಗಡಿ ಶಾಸಕ ಮಂಜುನಾಥ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್‌ ಸಿಂಗ್‌,  ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್‌ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.