ಕೋವಿಡ್ ಟೆಸ್ಟಿಂಗ್ ‌ಲ್ಯಾಬ್‌ಗೆ ಚಾಲನೆ

1.48 ಕೋಟಿ ರೂ. ವೆಚ್ಚದಲ್ಲಿ ಲ್ಯಾಬ್‌ ನಿರ್ಮಾಣ |ನಿರ್ಮಿತಿ ಕೇಂದ್ರಕ್ಕೆ ಗುತ್ತಿಗೆ

Team Udayavani, Jun 6, 2020, 12:54 PM IST

06-June-10

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಕೋವಿಡ್ ಟೆಸ್ಟಿಂಗ್‌ ಲ್ಯಾಬ್‌ ಆರಂಭಿಸಬೇಕೆಂಬ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ನಗರದ ಹೆರಿಗೆ ಆಸ್ಪತ್ರೆ ಕಟ್ಟಡದಲ್ಲಿ 1.48 ಕೋಟಿ ರೂ. ವೆಚ್ಚದಲ್ಲಿ ಲ್ಯಾಬ್‌ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕೋವಿಡ್ ಸೋಂಕು ಪ್ರಕರಣ ದೇಶದ್ಯಾಂತ ದಿನೇ ದಿನೇ ಹೆಚ್ಚುತ್ತಿದೆ. ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದ ನಂತರ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 16 ಸೋಂಕು ಪ್ರಕರಣಗಳು ಕಂಡು ಬಂದಿದ್ದು 8 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿನ ಶಂಕಿತ ಪ್ರಕರಣಗಳ ರಕ್ತದ ಮಾದರಿ ಹಾಗೂ ಗಂಟಲದ್ರವ ಪರೀಕ್ಷೆಗೆ ನೆರೆಯ ಶಿವಮೊಗ್ಗ ಹಾಗೂ ಹಾಸನ ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿತ್ತು. ಪರೀಕ್ಷ ವರದಿ ಬರಲು ಕಾಲಾವಕಾಶ ತೆಗೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಟೆಸ್ಟಿಂಗ್‌ ಲ್ಯಾಬ್‌ ನಿರ್ಮಾಣ ಮಾಡಬೇಕೆಂದು ಬಹುದಿನಗಳ ಕೂಗು ಜಿಲ್ಲೆಯ ಜನರದಾಗಿತ್ತು. ಕೊಡಗಿನಂತ ಸೆಣ್ಣ ಜಿಲ್ಲೆಯಲ್ಲಿ ಪ್ರಯೋಗಾಲಯ ತೆರೆಯಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದರೂ ಟೆಸ್ಟಿಂಗ್‌ ಲ್ಯಾಬ್‌ ನಿರ್ಮಾಣವಾಗಿಲ್ಲ ಶೀಘ್ರದಲ್ಲೇ ಲ್ಯಾಬ್‌ ತೆರೆಯುವಂತೆ ಸಾರ್ವಜನಿಕ ವಲಯದಲ್ಲಿ ಒತ್ತಡವು ಬಂದಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮೇ ಅಂತ್ಯದೊಳಗೆ ಅಥವಾ ಜೂನ್‌ ತಿಂಗಳಲ್ಲಿ ಲ್ಯಾಬ್‌ ತೆರೆಯುವುದಾಗಿ ಭರವಸೆಯನ್ನು ನೀಡಿದ್ದರು. ಅದರಂತೆ ಜೂನ್‌ ಅಂತ್ಯದೊಳಗೆ ಜಿಲ್ಲೆಯಲ್ಲಿ ಲ್ಯಾಬ್‌ ಕಾರ್ಯಾರಂಭ ಮಾಡಲಿದೆ. ಕಳೆದ ಮೂರು ದಿನಗಳಿಂದ ನಗರದ ಹೆರಿಗೆ ಆಸ್ಪತ್ರೆ ಕಟ್ಟಡದಲ್ಲಿ ಲ್ಯಾಬ್‌ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಿರ್ಮಿತಿ ಕೇಂದ್ರಕ್ಕೆ ಗುತ್ತಿಗೆ ನೀಡಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆಯಾಗಿರುವ 1.48 ಕೋಟಿ. ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು ಈಗಾಗಲೇ 25ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ಸಿವಿಲ್‌ ಕಾಮಗಾರಿ ಚಾಲನೆ ನೀಡಲಾಗಿದೆ. 1.6 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ವಿದೇಶದಿಂದ ಖರೀದಿಗೆ ಬಳಕೆ ಮಾಡಲಾಗುತ್ತಿದೆ.

ಲ್ಯಾಬ್‌ ನಿರ್ಮಾಣ ಎರಡು ಹಂತದಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ ಮೂಲ ಸೌಲಭ್ಯ ಎರಡನೇ ಹಂತದಲ್ಲಿ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳ ಖರೀದಿ ನಡೆಯಲಿದೆ. ಜೂನ್‌ ಅಂತ್ಯದಲ್ಲಿ ಲ್ಯಾಬ್‌ ನಿರ್ಮಾಣಕ್ಕೆ ಪ್ರಯತ್ನಿಸುವುದಾಗಿ ಜಿಲ್ಲಾ ಸರ್ಜನ್‌ ಡಾ| ಸಿ. ಮೋಹನ್‌ ಕುಮಾರ್‌ ತಿಳಿಸಿದ್ದಾರೆ.

ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಲ್ಯಾಬ್‌ ನಿರ್ಮಿಸಲಾಗುತ್ತಿದ್ದು, ವಿದೇಶದಿಂದ ಉಪಕರಣ ಖರೀದಿಸಲು ನಿರ್ಧರಿಸಲಾಗಿದೆ. ದಿನಕ್ಕೆ 500ರಿಂದ 600 ಶಂಕಿತರ ರಕ್ತದ ಮಾದರಿ ಹಾಗೂ ಗಂಟಲದ್ರವ ಪರೀಕ್ಷೆ ನಡೆಸುವ ಸಾರ್ಮಥ್ಯ ಹೊಂದಿರಲಿದೆ. ಪರೀಕ್ಷ ವರದಿಗಳು ಅಂದೇ ನೀಡಲು ಸಾಧ್ಯವಾಗಲಿದೆ.?
ಡಾ| ಸಿ. ಮೋಹನ್‌ಕುಮಾರ್‌,
ಜಿಲ್ಲಾ ಸರ್ಜನ್

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.