ದೇಗುಲ, ಹೋಟೆಲ್‌ ಆರಂಭಕ್ಕೆ ಸಿದ್ಧತೆ

Team Udayavani, Jun 7, 2020, 5:21 AM IST

opening hotel

ಮೈಸೂರು: ಎರಡು ತಿಂಗಳಿಗೂ ಹೆಚ್ಚು ಕಾಲ ಲಾಕ್‌ಡೌನ್‌ನಿಂದಾಗಿ ಬಂದ್‌ ಆಗಿದ್ದ ದೇಗುಲ, ಪ್ರಾರ್ಥನ ಮಂದಿರ, ಮಾಲ್‌, ಹೋಟೆಲ್‌ ತೆರೆಯಲು ಸಕಲ ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದ ರಿಂದ ಕಳೆದ 70 ದಿನಗಳಿಂದ ವ್ಯಾಪಾರ-ವಹಿವಾಟು ಇಲ್ಲದೆ ಮಾಲೀಕರು ಕಂಗೆಟ್ಟಿದ್ದರು. ಜಿಲ್ಲೆಯಲ್ಲಿ ಜೂ.8ರಿಂದ ದೇವ ಸ್ಥಾನ ಸೇರಿ ಇನ್ನಿತರ ಮಾಲ್‌, ರೆಸ್ಟೋರೆಂಟ್‌ ತೆರೆಯಲು ಅವ ಕಾಶ ಸಿಕ್ಕಿರುವ ಪರಿಣಾಮ, ಮಾಲೀಕರು ಸಿಬ್ಬಂದಿ ಜತೆ  ಸೇರಿ  ಹೋಟೆಲ್‌, ರೆಸ್ಟೋರೆಂಟ್‌, ಲಾಡ್ಜ್ಗಳನ್ನ ಶುಚಿಗೊಳಿಸುವಕಾರ್ಯದಲ್ಲಿ ತೊಡಗಿದ್ದಾರೆ.

ದೇಗಲಗಳಲ್ಲೂ ಸಿದ್ಧತೆ: ಜಿಲ್ಲೆಯ ಚಾಮುಂಡೇಶ್ವರಿ ದೇಗುಲ, ನಂಜನಗೂಡು ಶ್ರೀಕಂಠೇಶ್ವರ ದೇಗುಲ ಸೇರಿದಂತೆ ಹಲವು ದೇಗುಲಗಳಿಗೆ ದರ್ಶನಕ್ಕೆ ಬರುವ ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮುಜರಾಯಿ ಇಲಾಖೆ ಸಿದ್ಧತೆ  ಮಾಡುತ್ತಿದೆ. ಜೂ.8ರಿಂದ ಚಾಮುಂಡೇಶ್ವರಿ ದೇವಾಲಯ ಆರಂಭ ಆಗುವುದರಿಂದ ಭಕ್ತಾದಿಗಳು ಮಾಸ್ಕ್ ಧರಿಸ ಬೇಕೆಂಬ ನಿಯಮ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಬಾಕ್ಸ್‌ ವ್ಯವಸ್ಥೆ ಮಾಡಲಾಗಿದೆ.  ಪ್ರವೇಶ  ದ್ವಾರದಲ್ಲಿ ಭಕ್ತರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ ದೇಹದ ಉಷ್ಣಾಂಶ ಮಾಪನ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್‌.ಯತಿರಾಜ್‌  ಸಂಪತ್‌ಕುಮಾರ್‌ ತಿಳಿಸಿದ್ದಾರೆ.

ಮಾಲೀಕರಲ್ಲಿ ಸಂತಸದ ಜತೆ ಆತಂಕ: ಜೂ.8ರಂದು ಹೋಟೆಲ್‌, ರೆಸ್ಟೋರೆಂಟ್‌, ಲಾಡ್ಜ್ಗಳನ್ನು ತೆರೆಯಬಹುದೆಂದು ಸರ್ಕಾರ ಹೇಳಿರುವ ಕಾರಣ, ಮೈಸೂರಿನಲ್ಲಿ ಹೋಟೆಲ್‌ ಉದ್ಯಮ ಪುನಾರಂಭಿಸಲು ಮಾಲೀಕರು ಉತ್ಸುಕತೆಯಿಂದ  ತಯಾರಿ ಮಾಡಿಕೊಳ್ಳುತ್ತಿದ್ದರೂ ಕೊರೋನಾ ಆತಂಕ ಆವರಿಸಿದೆ. ನೆರೆಯ ರಾಜ್ಯ, ಜಿಲ್ಲೆಗಳಲ್ಲಿ ಕರೋನಾ ರಣಕೇಕೆ ಹೆಚ್ಚಾಗಿರುವ ಜತೆಗೆ ನಿರೀಕ್ಷಿತ ಪ್ರಮಾಣ ದಲ್ಲಿ ಪ್ರವಾಸ ಮಾಡದೆ ಇರುವುದರಿಂದ ನಷ್ಟವಾಗುತ್ತದೆ ಎನ್ನುವ ಭಯ  ಶುರುವಾಗಿದೆ.

ಮೈಸೂರಿನ ಎಲ್ಲಾ ಪಂಚತಾರಾ ಹೋಟೆಲ್‌ಗ‌ಳಲ್ಲಿ ಕೊಠಡಿ, ಲಾಂಜ್‌, ರಿಸೆಪ್ಷನ್‌ ಕೌಂಟರ್‌, ರೆಸ್ಟೋರೆಂಟ್‌ಗಳನ್ನು ಸ್ವತ್ಛ ಗೊಳಿಸಿ, ಸ್ಯಾನಿಟೈಜೇಷನ್‌ ಮಾಡಲಾಗುತ್ತಿದೆ. ಬರುವ ಗ್ರಾಹಕ ರಿಗೆ ಥರ್ಮಲ್‌ ಸ್ಕ್ರೀನಿಂಗ್‌  ಮಾಡುವುದು, ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡುವ ಸಲುವಾಗಿ ಹೋಟೆಲ್‌ ಮಾಲೀಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಗರದ ಚರ್ಚ್‌, ಮಸೀದಿಗಳಿಗೆ ಬರುವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಬಾಕ್ಸ್‌ ಮಾರ್ಕ್‌  ಮಾಡಲಾಗಿದ್ದು, ಸ್ಯಾನಿಟೈಸರ್‌ ವ್ಯಸ್ಥೆ ಕಲ್ಪಿಸಲಾಗಿದೆ.

ದೇವರ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್‌ ಬಳಸಬೇಕು. ಎರಡು ತಿಂಗಳಿಂದಲೂ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನವಿಲ್ಲ ಬರೀ ಪೂಜೆ ನಡೆಯುತ್ತಿತ್ತು. ಸೋಮವಾರ ದೇವಾಲಯ ತೆರೆದರೂ ವಯಸ್ಸಾದವರು  ಹಾಗೂ ಮಕ್ಕಳಿಗೆ ಪ್ರವೇಶವಿಲ್ಲ. ಸರ್ಕಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
-ಶಶಿಶೇಖರ್‌ ದೀಕ್ಷಿತ್‌, ಪ್ರಧಾನ ಅರ್ಚಕ, ಚಾಮುಂಡಿ ದೇವಾಲಯ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.