ಕೋವಿಡ್ ಗೆದ್ದು ಪರೀಕ್ಷೆ ನಡೆಸೋಣ

ಎಕ್ಸಾಂ ವಾರಿಯರ್ಸ್‌ ಆಗಿ ಕಾರ್ಯ ನಿರ್ವಹಿಸೋಣ  ಅಧಿಕಾರಿಗಳು-ಶಿಕ್ಷಕರು ಗಂಭೀರವಾಗಿ ವರ್ತಿಸಿ

Team Udayavani, Jun 8, 2020, 10:51 AM IST

08-June-02

ಕಲಬುರಗಿ: ಕೋವಿಡ್ ನೊಂದಿಗೆ ಇನ್ಮುಂದೆ ನಾವು ಜೀವನ ಸಾಗಿಸುವ ಅನಿರ್ವಾಯತೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಇಂಗ್ಲಿಷ್‌ ಪರೀಕ್ಷೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಕೋವಿಡ್ ಕಾಲದಲ್ಲಿ ನಾವೆಲ್ಲ ಎಕ್ಸಾಂ ವಾರಿಯರ್ಸ್‌ ಆಗಿ ಕೆಲಸ ಮಾಡೋಣ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರವಿವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಗಳ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ತಜ್ಞರು ಮತ್ತು ರಾಜಕೀಯ ನಾಯಕರ ಸಲಹೆ, ಕೇಂದ್ರ ಗೃಹ ಸಚಿವಾಲಯದ ಎಸ್‌ಒಪಿ ಮಾರ್ಗಸೂಚಿಯಂತೆ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ರಾಜ್ಯಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಸುವ ಸಂಬಂಧ ಈಗಾಗಲೇ ರಾಜ್ಯದ 25 ಶೈಕ್ಷಣಿಕ ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದೇನೆ. ಎಲ್ಲೆಡೆ ಪರೀಕ್ಷೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೋವಿಡ್ ನಡುವೆ ಪರೀಕ್ಷೆ ನಡೆಸಲು ಬರೀ ಸವಾಲಾಗಿ ಸ್ವೀಕರಿಸುವುದಲ್ಲ, ಇಂತಹ ಕ್ಲಿಷ್ಟಕರ ಸಮಯದಲ್ಲಿಯೂ ಸೇವೆಗೆ ಸಿಕ್ಕ ಅವಕಾಶ ಎಂದು ಅಧಿಕಾರಿಗಳು ಭಾವಿಸಬೇಕೆಂದರು.

ಪರೀಕ್ಷೆಗೆ ದಿನಾಂಕ ನಿಗದಿ ಮಾಡುವ ಮುನ್ನ ಹಲವು ಅಂಶಗಳು ಚರ್ಚೆಗೆ ಬಂದವು. ಪೂರ್ವಭಾವಿಯಾಗಿ ನಡೆಸಿದ ಪರೀಕ್ಷೆಗಳ ಫಲಿತಾಂಶದ ಆಧಾರದಲ್ಲೇ ಉತ್ತೀರ್ಣ ಮಾಡಬೇಕು. 1ರಿಂದ 9ನೇ ತರಗತಿಯಂತೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಹಾಗೆ ಉತ್ತೀರ್ಣ ಮಾಡಬೇಕೆನ್ನುವ ವಿಷಯ ಚರ್ಚೆಗೆ ಬಂತು. ನಾನೇ ಖುದ್ದಾಗಿ ಹಲವು ವಿದ್ಯಾರ್ಥಿಗಳೊಂದಿಗೆ ಮಾತನಾಡಿದಾಗ, ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಯಾವಾಗ ನಡೆಸುತ್ತೀರಿ ಎಂದೇ ಕೇಳಿದರು. ಪರೀಕ್ಷೆ ನಡೆಸದೇ ಪಾಸ್‌ ಮಾಡಿದರೆ ಓದಿದವರು, ಓದದವರು ಎಲ್ಲರೂ ಒಂದೇ ಆಗಿಬಿಡುತ್ತಾರೆ.

ಹೀಗಾಗಿ ಪರೀಕ್ಷೆ ರದ್ದು ಮಾಡುವುದು ಸರಿಯಲ್ಲ ಎಂದು ಕೆಲವರು ಹೇಳಿದರು. ಮತ್ತೆ ಕೆಲವರು, ಪರೀಕ್ಷೆ ಮಾಡದೆ ಹಾಗೆ ಪಾಸ್‌ ಮಾಡಿದರೆ ಭವಿಷ್ಯದುದ್ದಕ್ಕೂ “ಇದು ಕೋವಿಡ್ ಬ್ಯಾಚ್‌’ ಎನ್ನುವ ಹಣೆಪಟ್ಟಿ ಬೀಳುತ್ತದೆ ಎಂದು ಹೇಳಿಕೊಂಡರು ಎಂದು ವಿವರಿಸಿದರು. ಇವೆಲ್ಲ ಅಂಶಗಳನ್ನು ಮನಗಂಡು ಇಂತಹ ಸವಾಲಿನ ನಡುವೆಯೂ ಪರೀಕ್ಷೆಗೆ ನಡೆಸಲಾಗುತ್ತಿದೆ. ನಾವು ಕೋವಿಡ್ ಅನ್ನೂ ಗೆಲ್ಲಬೇಕು. ಪರೀಕ್ಷೆಯನ್ನು ನಡೆಸಬೇಕು. ಇದಕ್ಕಾಗಿ ಮಕ್ಕಳ ಸುರಕ್ಷತೆ ಪ್ರಥಮ ಆದ್ಯತೆ ಆಗಬೇಕು. ಅಲ್ಲದೇ ಪರೀಕ್ಷೆ ಬರೆಯುವ ಮಕ್ಕಳ ಆತ್ಮ ವಿಶ್ವಾಸವನ್ನು ಹೆಚ್ಚಿಸಬೇಕಿದೆ. ಇದಕ್ಕೆ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸಾಮಾಜಿಕ ಅಂತರಕ್ಕೆ ಹೆಚ್ಚಿನ ಗಮನ ಹರಿಸಬೇಕೆಂದು ಸಲಹೆ ನೀಡಿದರು. ಪರೀಕ್ಷೆ ಪ್ರಶ್ನೆ ಪತ್ರಿಕೆ ಬಿಡಿಸುವ ಸೇರಿದಂತೆ ಪರೀಕ್ಷಾ ವಿಷಯಕ್ಕೆ ಸಂಬಂಧಿಸಿದಂತೆ ಜೂ. 10ರಿಂದ 20ರ ವರೆಗೆ ಚಂದನ ವಾಹಿನಿ ಮುಖಾಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್‌ ಮನನ ಪಾಠ ನಡೆಯಲಿದೆ ಎಂದರು.

ಗಾಂಭಿರ್ಯತೆ ಇರಲಿ: ಕೋವಿಡ್ ಸಂಕಷ್ಟದ ಸಮಯದಲ್ಲಿ ನಡೆಯುತ್ತಿರುವುದುರಿಂದ ಅಧಿಕಾರಿಗಳು ಮತ್ತು ಶಿಕ್ಷಕರಲ್ಲಿ ಪರೀಕ್ಷೆ ಗಾಂಭೀರ್ಯತೆ ಇರಲೇಬೇಕು. ಪರೀಕ್ಷೆ ವೇಳೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಹಾಲ್‌ ಟಿಕೆಟ್‌ ಸಮಸ್ಯೆಯಿಂದ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗದಂತೆ ಹಾಗೂ ಯಾವುದೇ ಅವಘಡಕ್ಕೆ ಆಸ್ಪದ ನೀಡದೇ ಪರೀಕ್ಷೆ ಸುಲಲಿತವಾಗಿ ನಡೆಯುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳ “ಬ್ರೇಕಿಂಗ್‌ ನ್ಯೂಸ್‌’ಗೆ ಆಹಾರವಾಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಕಲಬುರಗಿ ಡಿಡಿಪಿಐ ಶಾಂತಗೌಡ ಪಾಟೀಲ, ಯಾದಗಿರಿ ಡಿಡಿಪಿಐ ಶ್ರೀನಿವಾಸರೆಡ್ಡಿ, ಬೀದರ ಡಿಡಿಪಿಐ ಚಂದ್ರಶೇಖರ ಪರೀಕ್ಷಾ ಪೂರ್ವ ಕೈಗೊಂಡ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು. ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಡಾ| ಅವಿನಾಶ ಜಾಧವ, ಎಂಎಲ್‌ಸಿ ಬಿ.ಜಿ. ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳೀನ್‌ ಅತುಲ್‌, ಜಿಲ್ಲಾ ಪಂಚಾಯತಿ ಸಿಇಒ ಡಾ| ಪಿ. ರಾಜಾ, ಯಾದಗಿರಿ ಜಿ.ಪಂ ಸಿಇಒ. ಶಿಲ್ಪಾ ಶರ್ಮಾ ಸೇರಿದಂತೆ ಯಾದಗಿರಿ, ಕಲಬುರಗಿ ಮತ್ತು ಬೀದರ ಜಿಲ್ಲೆಗಳ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.