ಸಿದ್ದಾಪುರ ಗ್ರಾಮ ಪಂಚಾಯತಿಯಿಂದ ಕಲುಷಿತ ನೀರು ಸರಬರಾಜು: ಯುವ ಕಾಂಗ್ರೆಸ್‌ನಿಂದ ಮುತ್ತಿಗೆ

Team Udayavani, Jun 8, 2020, 12:59 PM IST

ಸಿದ್ದಾಪುರ ಗ್ರಾಮ ಪಂಚಾಯತಿನಿಂದ ಕಲುಷಿತ ನೀರು ಸರಬರಾಜು: ಯುವ ಕಾಂಗ್ರೆಸ್‌ನಿಂದ ಮುತ್ತಿಗೆ

ಸಿದ್ದಾಪುರ: ಸಿದ್ದಾಪುರ ಗ್ರಾ.ಪಂ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ನೀಡುವ ಬದಲು ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್‌ ಮೂಲಕ ತುಂಬಿಸಿ ಸರಬರಾಜು ಮಾಡುವ ಬಗ್ಗೆ ವಂಡ್ಸೆ ಬ್ಲಾಕ್‌ ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ಕುಡಿಯುವ ನೀರು ಬಳಕೆದಾರರು ಪಂಚಾಯತ್‌ಗೆ ಮುತ್ತಿಗೆ ಹಾಕಿದ ಘಟನೆಯು ಸೋಮವಾರ ನಡೆಯಿತು.

ಕಲುಷಿತ ನೀರನ್ನು ಗ್ರಾಮಸ್ಥರಿಗೆ ಕೊಡುತ್ತಿರುವ ಗುತ್ತಿಗೆದಾರ ಹಾಗೂ ಅದರ ನಿರ್ವಹಣೆ ಮಾಡುತ್ತಿರುವ ಗ್ರಾ.ಪಂ. ಸದಸ್ಯ ಶೇಖರ ಕುಲಾಲ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಟೆಂಡರ್‌ನ್ನು ರದ್ದು ಮಾಡುವುದರ ಜತೆಯಲ್ಲಿ ಬಿಲ್‌ನ್ನು ತಡೆಹಿಡಿಯಬೇಕು. ಈ ರೀತಿಯಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುತ್ತಿದ್ದರೂ, ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು. ಗುತ್ತಿಗೆದಾರರಿಂದ ಟ್ಯಾಂಕರ್‌ ಚಾಲಕನಿಗೆ ಜೀವ ಬೆದರಿಕೆ ಬರುತ್ತಿರುವುದರಿಂದ ಚಾಲಕನಿಗೆ ರಕ್ಷಣೆ ಕೊಡಬೇಕು ಎಂದು ಹೇಳಿದರು. ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಾಯತ್‌ ಎದುರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಇರುವ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಪಡೆದ ಗುತ್ತಿಗೆದಾರರು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಬದಲಿಗೆ ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್‌ ಮೂಲಕ ಸರಬರಾಜು ಮಾಡುತ್ತಿದ್ದರು. ಇದನ್ನು ಖಂಡಿಸಿದ ನೀರು ಬಳಕೆದಾರರು ತಮ್ಮ ಮೊಬೈಲ್‌ ಮೂಲಕ ಕಾರೆಬೈಲು ಬಳಿ ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್‌ ಮೂಲಕ ತುಂಬಿಸುತ್ತಿರುವ ಚಿತ್ರವನ್ನು ಸೆರೆಹಿಡಿದರು. ಜತೆಯಲ್ಲಿ ವೀಡಿಯೋ ಮಾಡಿದ್ದರು. ಗುತ್ತಿಗೆದಾರರು ಕಲುಷಿತ ನೀರನ್ನು ಜನರಿಗೆ ಕೊಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಾರಾಹಿ ಕಾಲುವೆಯ ಕಲುಷಿತ ನೀರನ್ನು ಗ್ರಾಮಸ್ಥರಿಗೆ ಕುಡಿಯಲು ನೀಡಿರುವ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಬಿಲ್‌ನ್ನು ತಡೆಹಿಡಿಯುವಂತೆ ಸಂಬಂಧಪಟ್ಟ ಮೇಲಿನ ಅಧಿಕಾರಿಗಳಿಗೆ ಪತ್ರ ಬರೆಯುತ್ತೇವೆ ಎಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್‌ ಅವರು ಹೇಳಿದರು. ಕುಡಿಯುವ ನೀರಿನ ಬಳಕೆದಾರರ ದೂರಿನ ಮನವಿಯನ್ನು ಸ್ವೀಕರಿಸಿ, ಸಂಬಂಧಪಟ್ಟವರಿಗೆ ಕಳುಹಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ ಪೂಜಾರಿ, ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ತಾ.ಪಂ. ಸದಸ್ಯ ಎಸ್‌.ಕೆ. ವಾಸುದೇವ ಪೈ, ಗ್ರಾ.ಪಂ. ಸದಸ್ಯರಾದ ಮಂಜುನಾಥ ಕುಲಾಲ, ಕೆ. ಸತೀಶಕುಮಾರ ಸೆಟ್ಟಿ ಕಡ್ರಿ, ಮಾಜಿ ಸದಸ್ಯ ಎಚ್‌. ಸುಧಾಕರ ಶೆಟ್ಟಿ, ಕೆಪಿಸಿಸಿ ಸೋಷಿಯಲ್‌ ಮೀಡಿಯಾ ಉಡುಪಿ ಜಿಲ್ಲಾ ಸಂಚಾಲಕ ದಿನೇಶ ನಾಯ್ಕ ಹಳ್ಳಿಹೊಳೆ, ಬೈಂದೂರು ವಿಧಾನ ಪರಿಷತ್‌ನ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸುದರ್ಶನ ಶೆಟ್ಟಿ ಬಾಳೆಬೇರು, ಜಯಕರ್ನಾಟಕ ಸಿದ್ದಾಪುರ ಘಟಕದ ಅಧ್ಯಕ್ಷ ರಾಘವೇಂದ್ರ ಕೊಠಾರಿ, ಕೃಷ್ಣ ಪೂಜಾರಿ, ಪ್ರಕಾಶ ಶೆಟ್ಟಿ ಹರ್ಕೆಬಾಳು, ಶಶಿಧರ ಜನ್ಸಾಲೆ, ರಾಘು ಜನ್ಸಾಲೆ, ರಮೇಶ ಜನ್ಸಾಲೆ, ಟ್ಯಾಂಕರ್‌ ಚಾಲಕ ಪುಂಡಲಿಕ ಮತ್ತು ಕುಡಿಯುವ ನೀರಿನ ಬಳಕೆದಾರರು ಭಾಗವಹಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.