ಬಿತ್ತನೆ ಬೀಜ-ರಸಗೊಬ್ಬರ ಕೊರತೆ ಆಗದಿರಲಿ

Team Udayavani, Jun 11, 2020, 7:33 AM IST

ಬಿತ್ತನೆ ಬೀಜ-ರಸಗೊಬ್ಬರ ಕೊರತೆ ಆಗದಿರಲಿ

ಬೀದರ: ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ  ನಡೆಸಿ ಅವರು ಮಾತನಾಡಿದರು. ಎಫ್‌ಎಸ್‌ಎಲ್‌ ವರದಿ ಸೇರಿದಂತೆ ಇನ್ನಿತರ ಮಾಹಿತಿಯೊಂದಿಗೆ ಬಾಕಿ ಉಳಿದ 6 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಪರಿಹಾರ ಕಲ್ಪಿಸಲು ತೀವ್ರ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಈವರೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಹೆಲ್ತ್‌ ಕಾರ್ಡ್‌, ವಿಧವಾ ವೇತನ ಸೇರಿ ಅಗತ್ಯ ಸೌಕರ್ಯ ಒದಗಿಸಬೇಕು ಎಂದು ಕೃಷಿ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮುಂಗಾರಿನಲ್ಲೇ ಹೆಚ್ಚು ಮಳೆ ಬೀಳುತ್ತದೆ. ಈಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ರೈತರು ಬಿತ್ತನೆಗೆ ಭೂಮಿ ತಯಾರಿ ಮಾಡಿಕೊಂಡಿದ್ದು, ಹೆಸರು, ಉದ್ದು ಬಿತ್ತನೆ ನಡೆಯುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಗಡಿ ಗ್ರಾಮಗಳಿಗೆ ಸೌಕರ್ಯ ತಲುಪಲಿ: ಗಡಿ ಜಿಲ್ಲೆ ಬೀದರನಲ್ಲಿ ಚೊಂಡಿಮುಖೇಡ ನಂತಹ ಗಡಿಭಾಗದ ಎಲ್ಲ ಹಳ್ಳಿಗಳಿಗೆ ಸೌಕರ್ಯ ತಲುಪಿಸಬೇಕು. ನಮ್ಮೂರಿಗೆ ಯಾರೂ ಬರುತ್ತಿಲ್ಲ ಎಂಬ ನೋವು ಗ್ರಾಮಸ್ಥರಲ್ಲಿ ಬಾರದ ಹಾಗೆ ಕೆಲಸ ನಿರ್ವಹಿಸಬೇಕು ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

ಪಶುಪಾಲನಾ ಇಲಾಖೆ ಉಪನಿರ್ದೇಶಕಡಾ| ಗೋವಿಂದ ಬಿ.ಎಚ್‌. ಮಾತನಾಡಿ, ಜಿಲ್ಲೆಯಲ್ಲಿ ಮೇವು ಸಂಗ್ರಹವಿದೆ. ಎಲ್ಲ ತಾಲೂಕುಗಳಲ್ಲಿ ಮೇವು ಮಾರಾಟ ಕೇಂದ್ರ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.ಮಳೆಯಾಗಲಿ, ಆಗದಿರಲಿ ಈ ಕೇಂದ್ರಗಳು ಸರಿಯಾಗಿ ನಿರ್ವಹಣೆಯಾಗಬೇಕು. ಖುದ್ದು ಭೇಟಿ ನೀಡಿ ಕಾರ್ಯವೈಖರಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕುಡಿವ ನೀರಿನ ತೊಂದರೆಯಿದೆ ಎಂದು ಹಳ್ಳಿಗಳಿಗೆ ಬರೀ ಟ್ಯಾಂಕರ್‌ ಮೂಲಕ ನೀರು ಪೂರೈಸಿದರೆ ಸರ್ಕಾರದ ಹಣ ಅನವಶ್ಯಕ ಪೋಲಾಗುತ್ತದೆ. ಆದ್ದರಿಂದ ಆಯಾ ಹಳ್ಳಿಗಳಲ್ಲಿನ ಕೆರೆ, ಬಾವಿಗಳ ಹೂಳೆತ್ತುವ ಕೆಲಸವಾಗಬೇಕು. ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಯೋಜಿಸಬೇಕು ಎಲ್ಲ ತಹಶೀಲ್ದಾರ್‌ ಮತ್ತು ಗ್ರಾಮೀಣ ಕುಡಿವ ನೀರು ಇಲಾಖೆ ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಭಂವರಸಿಂಗ್‌ ಮೀನಾ, ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.