ನಿರ್ಬಂಧ ತೆರವು ಮುಳ್ಳಾಯಿತೇ? ಮೇ 18ರ ಬಳಿಕ ಸೋಂಕು ಹೆಚ್ಚಳ

Team Udayavani, Jun 13, 2020, 8:12 AM IST

Nirbandha-teravau

ಆಗ್ರಾದ ಆಸ್ಪತ್ರೆಯಲ್ಲಿ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವ 97 ವರ್ಷದ ವೃದ್ಧರೊಬ್ಬರು ವಿಜಯದ ಸಂಕೇತ ತೋರಿಸುತ್ತಿರುವುದು.

ಹೊಸದಿಲ್ಲಿ: ದೇಶದಲ್ಲಿ ಕಳೆದೆರಡು ವಾರಗಳಿಂದ ಕೋವಿಡ್ ಸೋಂಕಿನ ವ್ಯಾಪಿಸುವಿಕೆಯ ತೀವ್ರತೆಯನ್ನು ನೋಡಿದರೆ ದೇಶವ್ಯಾಪಿ ನಿರ್ಬಂಧ ತೆರವುಗೊಳಿಸಿದ್ದೇ ಮುಳುವಾಯಿತೇ ಎಂಬ ಪ್ರಶ್ನೆ ಕಾಡುತ್ತದೆ. ರಾಜ್ಯ ಸರಕಾರಗಳ ಅಧಿಕಾರಿಗಳೊಂದಿಗೆ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ನಡೆಸಿದ ಮಾತುಕತೆಯ ವಿವರಗಳನ್ನು ನೋಡಿದರೆ ಈ ಪ್ರಶ್ನೆಗೆ ಹೌದು ಎಂಬ ಉತ್ತರ ಸಿಗುತ್ತದೆ.

ಮೇ 18ರಿಂದ ಲಾಕ್‌ ಡೌನ್‌ ಬಹುತೇಕ ಸಡಿಲಗೊಂಡ ಬಳಿಕ ದೇಶದ ಹಲವು ಜಿಲ್ಲೆಗಳಲ್ಲಿ ಸೋಂಕು ತಾಂಡವವಾಡಲು ಆರಂಭಿಸಿದೆ. ಮಹಾರಾಷ್ಟ್ರ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಲ, ಜಮ್ಮು-ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳಲ್ಲಿನ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಾ ಸಾಗಿದೆ. ದೇಶದ ಒಟ್ಟಾರೆ 736 ಜಿಲ್ಲೆಗಳ ಪೈಕಿ, 14 ಜಿಲ್ಲೆಗಳಲ್ಲೇ ಶೇ.60ರಷ್ಟು ಪ್ರಕರಣಗಳು ವರದಿಯಾಗಿವೆ. ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದು, ಈ ಪೈಕಿ ಶೇ.50ರಷ್ಟು ಪ್ರಕರಣಗಳು ಮೇ 18ರ ಬಳಿಕವೇ ದೃಢಪಟ್ಟಿರುವಂಥದ್ದು.

ಉಡುಪಿ, ಯಾದಗಿರಿ ಆತಂಕ: ಮೇ 18ರ ಬಳಿಕ ಪತ್ತೆಯಾದ 400ಕ್ಕೂ ಹೆಚ್ಚು ಪ್ರಕರಣಗಳ ಪೈಕಿ ಶೇ.90ರಷ್ಟು ಸೋಂಕಿತರು ಉಡುಪಿ, ಯಾದಗಿರಿ, ಗುರುಗ್ರಾಮ ಮತ್ತು ಕೊಲ್ಹಾಪುರದಲ್ಲೇ ಪತ್ತೆಯಾಗಿದ್ದಾರೆ. ಇದು ನಿಜಕ್ಕೂ ಆತಂಕದ ಸಂಗತಿ ಎಂದಿದ್ದಾರೆ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ. ರಾಜ್ಯದ 3

ಜಿಲ್ಲೆಗಳಿಗೆ ಹಾಸಿಗೆ ಕೊರತೆ: ಈ ಎಲ್ಲ ಅಂಕಿಅಂಶಗಳನ್ನು ಪರಿಗಣಿಸಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಜುಲೈ ತಿಂಗಳ ಮೊದಲ ವಾರದಲ್ಲಿ ಆಸ್ಪತ್ರೆಯ ಹಾಸಿಗೆಗಳ ಕೊರತೆ ಎದುರಿಸಲಿರುವ 50 ಜಿಲ್ಲೆಗಳನ್ನು ಪಟ್ಟಿ ಮಾಡಿದೆ. ಈ ಪೈಕಿ 17 ಜಿಲ್ಲೆಗಳು ಹಾಸಿಗೆಗಳ ತೀವ್ರ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಗೌಬಾ ತಿಳಿಸಿದ್ದಾರೆ. ಅವೆಂದರೆ, ಕರ್ನಾಟಕದ ಉಡುಪಿ, ರಾಯಚೂರು ಮತ್ತು ಯಾದಗಿರಿ, ಮಹಾರಾಷ್ಟ್ರದ ಮುಂಬಯಿ, ಥಾಣೆ, ಪಾಲ್ಗರ್‌, ಜಲಗಾಂವ್‌ ಮತ್ತು ರಾಯಗಡ, ಜಮ್ಮು-ಕಾಶ್ಮೀರದ ಕುಲ್ಗಾಂ ಮತ್ತು ಕುಪ್ವಾರಾ, ರಾಜಸ್ಥಾನದ ಭರತುರ, ಉತ್ತರಪ್ರದೇಶದ ಗೌತಮಬುದ್ಧ ನಗರ್‌ ಹಾಗೂ ತಮಿಳುನಾಡಿನ ಚೆನ್ನೈ, ಚೆಂಗಳ್‌ ಪಟ್ಟು, ತಿರುವಳ್ಳೂರು ಮತ್ತು ತೂತುಕುಡಿ.

5 ರಾಜ್ಯಗಳಲ್ಲಿ ಶೇ.82ರಷ್ಟು ಸಾವು: ದೇಶಾದ್ಯಂತ ಲಾಕ್‌ ಡೌನ್‌ ತೆರವುಗೊಳಿಸಿದ ಬಳಿಕ ಸೋಂಕಿತರ ಸಾವಿನ ಪ್ರಮಾಣವು ಶೇ.2.9ಕ್ಕಿಳಿದರೂ, ಸುಮಾರು 69 ಜಿಲ್ಲೆಗಳಲ್ಲಿ ಇದು ಶೇ.5ಕ್ಕೇರಿರುವುದು ಆತಂಕದ ಸಂಗತಿ ಎಂದು ಗೌಬಾ ಹೇಳಿದ್ದಾರೆ. ಈ ವಿಚಾರದಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಹೋಲಿಸಿದರೆ ಭಾರತದ ಸ್ಥಿತಿಯು ಉತ್ತಮವಾಗಿದ್ದರೂ, ನಿರ್ಬಧ ತೆರವಾದ ಬಳಿಕ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಸೋಂಕು ಹಾಗೂ ಸಾವುಗಳು ಸ್ವಲ್ಪಮಟ್ಟಿಗೆ ಗಾಬರಿ ಮೂಡಿಸಿದೆ ಎಂದು ಅವರು ಹೇಳಿದ್ದಾರೆ. ಮೇ 18ರಂದು 1 ಲಕ್ಷವಾಗಿದ್ದ ಸೋಂಕಿತರ ಸಂಖ್ಯೆ ಈಗ 3 ಲಕ್ಷಕ್ಕೆ ತಲುಪಿದೆ. 3 ಸಾವಿರವಿದ್ದ ಸಾವಿನ ಸಂಖ್ಯೆ ಈಗ 8 ಸಾವಿರ ದಾಟಿದೆ. ಒಟ್ಟಾರೆ ಸಾವಿನಲ್ಲಿ ಶೇ.82ರಷ್ಟು ಸಾವುಗಳು ಮಹಾರಾಷ್ಟ್ರ, ದೆಹಲಿ, ಗುಜರಾತ್‌, ಪಶ್ಚಿಮ ಬಂಗಾಳ, ಮಧ್ಯ ಪ್ರದೇದಲ್ಲೇ ಸಂಭವಿಸಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಹಾಟ್‌ ಸ್ಪಾಟ್‌ಗಳ ಮೇಲೆ ಗಮನವಿಡಿ
ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿಗಳೊಂದಿಗೆ ಶುಕ್ರವಾರ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ್ದು, ಹೊಸದಾಗಿ ಉದಯಿಸುತ್ತಿರುವ ಕೊರೊನಾ ಹಾಟ್‌ಸ್ಪಾಟ್‌ಗಳ ಮೇಲೆ ವಿಶೇಷ ಗಮನ ಇಡುವಂತೆ ಸೂಚಿಸಿದ್ದಾರೆ. ಜತೆಗೆ, ಸೋಂಕಿನ ವ್ಯಾಪಿಸುವಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳುವಂತೆಯೂ ತಿಳಿಸಿದ್ದಾರೆ. ಕಂಟೈನ್ಮೆಂಟ್‌ ವಲಯಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಿ, ಆಸ್ಪತ್ರೆಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಿ, ಜನರಲ್ಲಿ ಜಾಗೃತಿ ಮೂಡಿಸಿ ಎಂದೂ ಸೂಚಿಸಿದ್ದಾರೆ.

ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣ
ದೇಶಕ್ಕೆ ಕೊರೊನಾ ಪ್ರವೇಶಿಸಿದ ಬಳಿಕ ಇದೇ ಮೊದಲ ಬಾರಿಗೆ ದೈನಂದಿನ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಕೊರೊನಾ ಹಾಟ್‌ ಸ್ಪಾಟ್‌ ದೇಶಗಳ ಪಟ್ಟಿಯಲ್ಲಿ ಭಾರತವು 4ನೇ ಸ್ಥಾನಕ್ಕೆ ತಲುಪಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಗುರುವಾರ ಬೆಳಗ್ಗೆ 8ರಿಂದ ಶುಕ್ರವಾರ ಬೆಳಗ್ಗೆ 8ರವರೆಗಿನ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 10,956 ಮಂದಿಗೆ ಸೋಂಕು ದೃಢಪಟ್ಟಿದ್ದು, 396 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದೇ ವೇಳೆ, ಸ್ವಲ್ಪಮಟ್ಟಿಗಿನ ಸಮಾಧಾನದ ಸಂಗತಿಯೆಂದರೆ, ಸತತ 3ನೇ ದಿನವೂ ದೇಶದಲ್ಲಿ ಗುಣಮುಖರಾದವರ ಸಂಖ್ಯೆಯು ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು ಮೀರಿದೆ. ಈವರೆಗೆ 1.47 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿ, ಈ ಪ್ರಮಾಣ ಶೇ.49.47ಕ್ಕೇರಿದೆ.

ದ್ವಿಗುಣಾವಧಿಯಲ್ಲಿ ಸುಧಾರಣೆ
ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿದ್ದರೂ, ದೇಶಾದ್ಯಂತ ಸೋಂಕು ದ್ವಿಗುಣಗೊಳ್ಳುವ ಅವಧಿಯಲ್ಲಿ ಸುಧಾರಣೆಯಾಗಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ. ಕೆಲವು ವಾರಗಳ ಹಿಂದೆ ಪ್ರತಿ 15.4 ದಿನಗಳಿಗೊಮ್ಮೆ ಸೋಂಕಿನ ಸಂಖ್ಯೆ ದುಪ್ಪಟ್ಟಾಗುತ್ತಿತ್ತು. ಆದರೆ ಈಗ ಇದು 17.4 ದಿನಗಳಿಗೇರಿದೆ. ಮಾ.25ರಂದು ದೇಶವ್ಯಾಪಿ ನಿರ್ಬಂಧ ಘೋಷಿಸಿದಂದು ಸೋಂಕಿನ ದ್ವಿಗುಣಾವಧಿ 3.4 ದಿನಗಳಾಗಿದ್ದವು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.