ಕತಾರ್‌ನಿಂದ ನಗರಕ್ಕೆ ಬಂದ ಹಕ್ಕಿ ಪಿಕ್ಕಿ ಕುಟುಂಬ

Team Udayavani, Jun 16, 2020, 5:52 AM IST

katar-hakki

ಬೆಂಗಳೂರು: ಕೋವಿಡ್‌ 19 ಲಾಕ್‌ಡೌನ್‌ನಿಂದ ಕತಾರ್‌ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ವಿಶೇಷ ಖಾಸಗಿ ವಿಮಾನದ ಮೂಲಕ ಸೋಮವಾರ ಬೆಂಗಳೂರಿಗೆ ಬಂದಿಳಿದರು. ವಿಶೇಷವಾಗಿ ಕತಾರ್‌ನಲ್ಲಿ ಸಿಲುಕಿಕೊಂಡಿದ್ದ ಆರು ಜನ  ಹಕ್ಕಿ ಪಿಕ್ಕಿ ಸಮುದಾಯದವರೂ ಈ ವಿಮಾನದಲ್ಲಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಕೇಂದ್ರ ಸರ್ಕಾರದ ವಂದೇ ಭಾರತ ಮಿಷನ್‌ ಅಡಿಯಲ್ಲಿ ಇದುವರೆಗೂ ಕತಾರ್‌ನಿಂದ ರಾಜ್ಯಕ್ಕೆ ಒಂದೇ ವಿಮಾನ ದೊರೆತಿದ್ದರಿಂದ ಅಲ್ಲಿ ಸಂಕಷ್ಟದಲ್ಲಿ  ಸಿಲುಕಿದ್ದವರನ್ನು ರಾಜ್ಯಕ್ಕೆ ವಾಪಸ್‌ ಕಳುಹಿಸಲು ಕತಾರ್‌ ನಲ್ಲಿರುವ ಕನ್ನಡ ಸಂಘ ಹಾಗೂ ಭಾರತೀಯ ಸಮುದಾಯ ಹಿತೈಸಿ ಸಮಿತಿ (ಐಸಿಬಿಎಫ್) ಜಂಟಿಯಾಗಿ ಕಷ್ಟದಲ್ಲಿ ಸಿಲುಕಿದ್ದ ಕನ್ನಡಿಗರನ್ನು ವಿಶೇಷ ಖಾಸಗಿ ವಿಮಾನದಲ್ಲಿ  ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದಾರೆ.

ಸೋಮವಾರ ಬೆಳಗ್ಗೆ ಕತಾರ್‌ನ ಹಮದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಬೆಂಗಳೂರಿಗೆ ಮಧ್ಯಾಹ್ನ ಬಂದು ತಲುಪಿದೆ. ಕತಾರ್‌ನ ಐಸಿಬಿಎಫ್ ಉಪಾಧ್ಯಕ್ಷ  ಮಹೇಶ್‌ ಗೌಡ, ಜಂಟಿ ಕಾರ್ಯದರ್ಶಿ ಸುಬ್ರಮಣ್ಯ ಹೆಬ್ಟಾಗಿಲು, ಕತಾರ್‌ ಕನ್ನಡ ಸಂಘದ ಅಧ್ಯಕ್ಷ ನಾಗೇಶ್‌ ರಾವ್‌, ಕೇಂದ್ರ ಸರ್ಕಾರ ಹಾಗೂ ಕತಾರ್‌ನಲ್ಲಿರುವ ಭಾರತೀಯ ರಾಯ ಭಾರಿ ಕಚೇರಿ ಹಾಗೂ ರಾಜ್ಯ ಸರ್ಕಾರದೊಂದಿಗೆ  ನಿರಂತರ ಸಂಪರ್ಕ ನಡೆಸಿ, ಗೋ ಏರ್‌ ಸಂಸ್ಥೆಯ ವಿಮಾನ ಬಾಡಿಗೆ ಪಡೆದು 180 ಜನ ಕನ್ನಡಿಗರನ್ನು ರಾಜ್ಯಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕತಾರ್‌ನಿಂದ ಬೆಂಗಳೂರಿಗೆ ಆಗಮಿಸಿದ ಮೇಲೆ ರಾಜ್ಯ ಸರ್ಕಾರದ  ಕೋವಿಡ್‌ 19 ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದಾಗಿ ಎಲ್ಲ ಪ್ರಯಾ  ಣಿಕರಿಂದ ಅಧಿಕೃತ ಒಪ್ಪಿಗೆ ಪಡೆದು ಕೊಂಡು ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ. ವಿಶೇಷ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯ  ಹೆಚ್ಚುವರಿ ಮುಖ್ಯ ಕಾರ್ ದರ್ಶಿ ರವಿಕುಮಾರ್‌ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಕತಾರ್‌ ಕನ್ನಡ ಸಂಘದ ಪದಾಧಿಕಾರಿಗಳು ಧನ್ಯವಾದ ಅರ್ಪಿಸಿದ್ದಾರೆ.

ತವರಿಗೆ ಮರಳಿದ ಪರಿವಾರ: ಆಯುರ್ವೇದ ಮೇಳದಲ್ಲಿ ಪಾಲ್ಗೊಳ್ಳಲು ಕತಾರ್‌ಗೆ ತೆರಳಿ ಕೋವಿಡ್‌ 19 ಲಾಕ್‌ಡೌನ್‌ನಿಂದ ಕತಾರ್‌ನಲ್ಲಿ ಸಿಲುಕಿಕೊಂಡಿದ್ದ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆರು ಜನ ಹಕ್ಕಿ ಪಿಕ್ಕಿ ಸಮುದಾಯದ  ಜನರು ತವರಿಗೆ ಮರಳಿದ್ದಾರೆ. ಕತಾರ್‌ ಕನ್ನಡ ಸಂಘ ಹಾಗೂ ಭಾರತೀಯ ಸಮುದಾಯ ಹಿತೈಸಿ ಸಮಿತಿ ಭಾರತೀಯ ರಾಯಭಾರಿ ಕಚೇರಿ ಸಹಕಾರದೊಂದಿಗೆ ಅವರಿಗೆ ಅಗತ್ಯವಿರುವ ಟಿಕೆಟ್‌ ವೆಚ್ಚ ಭರಿಸಿ ಅವರನ್ನು ಮರಳಿ ಊರು ಸೇರಲು  ಸಹಕಾರ ನೀಡಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.