ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ


Team Udayavani, Jun 16, 2020, 6:37 AM IST

tmk kamakshi

ತುಮಕೂರು: ಜೂ.25ರಿಂದ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆ ಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳಬೇಕೆಂದು ಕೆಪಿಸಿಸಿ ವಕ್ತಾರ ಮುರಳೀಧರ  ಹಾಲಪ್ಪ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್‌.ಕಾಮಾಕ್ಷಿ ಅವರಿಗೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಸೋಮವಾರ ಕಾಂಗ್ರೆಸ್‌ ಮುಖಂಡರು ಹಾಗೂ ವಿದ್ಯಾರ್ಥಿಗಳ ಪೋಷಕರೊಂದಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದ  ಅವರು, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರ ಗಳನ್ನು ತೆರೆಯಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳ ಪೋಷಕರಿಗೆ ಒಂದು ರೀತಿಯಭಯದ  ವಾತಾವರಣವಿದೆ ಎಂದರು.

ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಪರೀಕ್ಷೆ ಬರೆ ಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಗಳಿಗೆ ಆಗಮಿಸಿದಾಗ ಕೇಂದ್ರದ ಸ್ವತ್ಛತೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್‌  ಕೊಡುವ ವ್ಯವಸ್ಥೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳ ಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳ ಮನವಿ: ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಗೆ ನಮ್ಮನ್ನು ಹಾಕಲಾಗಿದೆ. ನಮಗೆ ಬಸ್‌ ಸೌಲಭ್ಯದ ಸಮಸ್ಯೆ ಇದೆ, ಆದ್ದರಿಂದ ನಮ್ಮ ಊರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ  ಎಂದು ಕೆಲವುವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದಾರೆ ಈ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಖಾಸಗಿ ಶಾಲೆಗಳಿಗೆ ಹಣ ಬಿಡುಗಡೆ: ಮನವಿ ಸ್ವೀಕರಿಸಿ ಎಂ.ಆರ್‌.ಕಾಮಾಕ್ಷಿ ಮಾತನಾಡಿ, ಜಿಲ್ಲೆಯ 256 ಖಾಸಗಿ ಶಾಲೆಗಳಿಗೆ 2019- 2020ನೇ ಸಾಲಿನ ಆರ್‌ಟಿಇ ಹಣ ಮೊದಲ ಕಂತು 5.86 ಕೋಟಿ ರೂ. ಬಿಡುಗೆಯಾಗಿದ್ದು, ಇನ್ನು 10  ದಿನದೊಳಗೆ ಆರ್‌ಟಿಇ ಅಡಿ ವಿದ್ಯಾರ್ಥಿಗಳನ್ನು ದಾಖಲಿಸಿ ಕೊಂಡಿರುವ ಎಲ್ಲಾ ಖಾಸಗಿ ಶಾಲೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

85 ಪರೀಕ್ಷಾ ಕೇಂದ್ರ: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತಾಧಿಕಾರಿ ರಂಗದಾಸಪ್ಪ ಮಾತನಾಡಿ, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 23783 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ 13534 ಸೇರಿ 37317 ವಿದ್ಯಾರ್ಥಿ ಗಳು ಪರೀಕ್ಷೆ  ಬರೆಯಲಿದ್ದಾರೆ. ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 85 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 59 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

3 ವಿಶೇಷ ಕೊಠಡಿ: ಜೂ.18 ರಂದು ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ತಕ್ಷಣ ಮುಖ್ಯ ಮೇಲ್ವಿಚಾರಕರನ್ನು ಪರೀಕ್ಷಾ ಕೇಂದ್ರ ಗಳಿಗೆ ಕಳುಹಿಸಿ ಸಿದತೆ ಬಗ್ಗೆ ಪರಿಶೀಲನೆ ನಡೆ ಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶ  ದ್ವಾರಗಳಲ್ಲಿ ಸಿ.ಸಿ. ಕ್ಯಾಮೆರಾ ಅಳ ವಡಿಸಲಾಗುವುದು. ಈಗಿರುವ ಪರೀಕ್ಷಾ ಕೇಂದ್ರ ಗಳಲ್ಲಿ ಯಾವುದೇ ಕಂಟೈನ್ಮೆಂಟ್‌ ಝೋನ್‌ ಇಲ್ಲ, ಅಗತ್ಯವಿದ್ದರೆ 3 ವಿಶೇಷ ಕೊಠಡಿಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದರು.

ಸಿದ್ಧಗಂಗಾ  ಮಠದಲ್ಲಿ 1200 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿ, ಮಾಸ್ಕ್ ವಿತರಿಸಿ ಸ್ಯಾನಿಟೈಸರ್‌ ಹಾಕಿ ಪರೀಕ್ಷಾ ಕೇಂದ್ರ ಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ  ಎಂದರು. ಜಿಪಂ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ರೇವಣಸಿದಯ್ಯ, ಜಿ.ಎಸ್‌. ಸೋಮಣ್ಣ ಇತರರು ಇದ್ದರು.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.