ರಾಮನಗರ: ಕೋವಿಡ್‌ 19ಗೆ ಮೊದಲ ಬಲಿ

Team Udayavani, Jun 16, 2020, 6:56 AM IST

ramanagar-death

ರಾಮನಗರ: ನರೆಹೊರೆ ಜಿಲ್ಲೆಗಳಲ್ಲಿ ಕೋವಿಡ್‌-19 ಸೋಂಕು ಕೇಕೆಹಾಕುತ್ತಿದ್ದರೂ ಗ್ರೀನ್‌ ಜೋನ್‌ನಲ್ಲಿದ್ದ ರಾಮನಗರ ಜಿಲ್ಲೆಯಲ್ಲಿ ಇದೀಗ 19 ಸೋಂಕಿತರು ಪತ್ತೆಯಾಗಿರುವ ಆತಂಕದ ನಡುವೆ ಬಿಡದಿಯ ತರಕಾರಿ ವ್ಯಾಪಾರಿಯೊಬ್ಬರು ಕೋವಿಡ್‌-19 ಸೋಂಕಿಗೆ ಬಲಿಯಾಗಿರುವ ಪ್ರಕರಣ ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಈ ನಡುವೆ ಸಂತಸದ ಸಂಗತಿಯೆಂದರೆ ಮಾಗಡಿಯ ಮಗುವು ಕೋವಿಡ್‌ 19 ಸೋಂಕಿ ನಿಂದ  ಚೇತರಿಸಿಕೊಂಡಿದ್ದು, ಸಕ್ರಿಯ 22 ಪ್ರಕರಣಗಳಿವೆ. ತಾಲೂಕಿನ ಬಿಡದಿಯಲ್ಲಿ ತರಕಾರಿ ವ್ಯಾಪಾರಿ ಮಾಡುತ್ತಿದ್ದ 45 ವರ್ಷ ವಯಸ್ಸಿನ ವ್ಯಕ್ತಿ ಎದೆ ನೋವಿನ ಕಾರಣ  ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ  ನಂತರ ಆ ವ್ಯಕ್ತಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಿಡದಿಯ ಪ್ರಮುಖ ರಸ್ತೆಯೊಂದರ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ಶನಿವಾರ ಎದೆನೋವು ಕಾಣಿಸಿ ಕೊಂಡಿತ್ತು. ಸ್ಥಳೀಯ ಆಸ್ಪತ್ರೆಯ  ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆಂದು ಹೋದಾಗ ಅನುಮಾನ ಬಂದ ವೈದ್ಯರು ಬೌರಿಂಗ್‌ ಆಸ್ಪತ್ರೆಗೆ ಕಳುಹಿಸಿ ದ್ದರು. ಅಲ್ಲಿನ ವೈದ್ಯರು ಇವರನ್ನು ದಾಖಲಿಸಿಕೊಂಡು ಗಂಟಲು ದ್ರವವನ್ನು  ಪರೀಕ್ಷೆಗೆ ಕಳುಹಿಸಿ, ಎದೆ ನೋವಿಗೆ ಚಿಕಿತ್ಸೆ ಆರಂಭಿಸಿದ್ದರು.

ಆದರೆ ಇವರು ಚಿಕಿತ್ಸೆ ಫ‌ಲಕಾರಿ ಯಾಗದ ಭಾನುವಾರ ಮಧ್ಯಾಹ್ನ ಮೃತಪಟ್ಟಿ ದ್ದಾರೆ. ಸಂಜೆ ವೇಳೆಗೆ ಕೋವಿಡ್‌ 19 ಫ‌ಲಿತಾಂಶ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ.  ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪ ತ್ರೆಯ ವೈದ್ಯರು ಮೃತದೇಹವನ್ನು ವಾರಸುದಾರರಿಗೆ ನೀಡಲು ನಿರಾಕರಿಸಿ ದ್ದಾರೆ. ಬೆಂಗಳೂರಿನ ಮೈಸೂರು ಸರ್ಕಲ್‌ ಬಳಿ ಇರುವ ಸ್ಮಶಾನದಲ್ಲಿ ವೈಜ್ಞಾನಿಕ ಕ್ರಮಗಳ ನ್ನು ಕೈಗೊಂಡು ಅಂತ್ಯ ಸಂಸ್ಕಾರ  ನೆರೆವೇರಿಸಲು ಕುಟುಂಬಸ್ಥರು ಸಹ ಒಪ್ಪಿಕೊಂಡಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಿರಿಯ ಪುತ್ರನಿಗೆ ಜ್ವರ ಕಾಣಿಸಿಕೊಂಡಿದೆ ಎಂದು ಗೊತ್ತಾಗಿದೆ. ಪತ್ನಿ ಮತ್ತು ಹಿರಿಯ ಮಗ ಆರೋಗ್ಯವಾಗಿದ್ದಾರೆ. ಮೃತ ವ್ಯಕ್ತಿಯ  ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಹೋಮ್‌ ಕ್ವಾರಂಟೈನ್‌ ಮಾಡುವುದಾಗಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.