ಕೋವಿಡ್ ಹೆಚ್ಚಾದ್ರೆ ಎದುರಿಸಲು ಸಿದ್ಧ

Team Udayavani, Jun 16, 2020, 4:35 PM IST

ಕೋವಿಡ್ ಹೆಚ್ಚಾದ್ರೆ ಎದುರಿಸಲು ಸಿದ್ಧ

ಹಾವೇರಿ: ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದರೂ ಎಲ್ಲ ಸವಾಲುಗಳನ್ನು ಎದುರಿಸಲು ಎಲ್ಲ ರೀತಿಯಿಂದಲೂ ಸಮರ್ಥವಾಗಿದ್ದೇವೆ. ಜಿಲ್ಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲ ವೈದ್ಯಕೀಯ ವ್ಯವಸ್ಥೆಗಳು ಮಾಡಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಜಿಲ್ಲಾಸ್ಪತ್ರೆಯಲ್ಲಿ ನೂತನ ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯ ಪ್ರಯೋಗಾಲಯ (ವಿ.ಆರ್‌.ಡಿ.ಎಲ್‌.) ಹಾಗೂ ಐ.ಸಿ.ಯು. ವಾರ್ಡ್‌ ಉದ್ಘಾಟಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 16 ವೆಂಟಿಲೇಟರ್‌ ಐ.ಸಿ.ಯು. ವ್ಯವಸ್ಥೆ ಮಾಡಲಾಗಿದೆ. ಹೊಸದಾಗಿ ಐದು ವೆಂಟಿಲೇಟರ್‌ ಬೇಡಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿಶೇಷವಾಗಿ ಕೋವಿಡ್‌ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಯಲ್ಲಿ 50 ಬೆಡ್‌ ಹಾಗೂ ಸವಣೂರಲ್ಲಿ 30 ಬೆಡ್‌ ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ 10ರಿಂದ 15 ಬೆಡ್‌ ಗಳ ಸೇರ್ಪಡೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದರು.

ಇಂದು ಉದ್ಘಾಟನೆಗೊಂಡ ವಿ.ಆರ್‌.ಡಿ. ಲ್ಯಾಬ್‌ ಕೋವಿಡ್‌ ಸೋಂಕಿಗೆ ಮಾತ್ರವಲ್ಲದೆ ಇತರೆ ಸೋಂಕುಗಳ ತಪಾಸಣೆಗೂ ಅನುಕೂಲವಾಗಿದೆ. ವೈರಲ್‌ ಇನ್‌ಫೆಕ್ಸ್‌, ಡೆಂಘೀ, ವೆಲಿಸಾ ಹಾಗೂ ಎಚ್‌.ವಿ.ಸೋಂಕು ತಪಾಸಣೆಗೆ ಅನುಕೂಲವಾಗಲಿದೆ. ವಿ.ಆರ್‌.ಡಿ. ಲ್ಯಾಬ್‌ನಲ್ಲಿ ಒಂದು ಶಿಫ್ಟ್‌ನಲ್ಲಿ 100ರಂತೆ ದಿನವೊಂದಕ್ಕೆ 300 ಮಾದರಿಗಳನ್ನು ಪರೀಕ್ಷೆ ಮಾಡಬಹುದು. ಆರಂಭದಲ್ಲಿ 50 ರಿಂದ 60 ಮಾದರಿಗಳನ್ನು ಪರೀಕ್ಷೆ ನಡೆಸಲಾಗುವುದು. ಮೈಕ್ರೋಬಯೋಲೆಜಿಸ್ಟ್‌, ಪ್ರಯೋಗಾಲಯ ತಂತ್ರಜ್ಞರ ಅನುಭವ ಮತ್ತು ಸಾಮರ್ಥ್ಯಕ್ಕನುಸಾರವಾಗಿ ಪರೀಕ್ಷೆಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂದರು.

ಕೋವಿಡ್‌ ಸೋಂಕು ದೃಢಪಡಿಸಿಕೊಳ್ಳಲು ಗಂಟಲು ದ್ರವ ಹಾಗೂ ರಕ್ತಮಾದರಿ ಪರೀಕ್ಷೆಗೆಗಾಗಿ ಹಾವೇರಿಯಲ್ಲಿ ಲ್ಯಾಬ್‌ ಇಲ್ಲದೆ ಇಷ್ಟುದಿನ ಬೇರೆ ಬೇರೆ ಜಿಲ್ಲೆಗೆ ಕಳುಹಿಸಬೇಕಾಗಿತ್ತು. ಇನ್ನುಮುಂದೆ ಜಿಲ್ಲಾ ಆಸ್ಪತ್ರೆಯಲ್ಲೇ ಮಾದರಿಗಳ ಪರೀಕ್ಷೆ ನಡೆಯಲಿದೆ. ಕೋವಿಡ್‌ ಅಲ್ಲದೆ ಇತರ ವೈರಾಣು ಪರೀಕ್ಷೆಗಳು ಇಲ್ಲಿಯೇ ನಡೆಸಬಹುದಾಗಿದೆ. ಮೊದಲ ದಿನವಾದ ಇಂದು ಪ್ರಾಯೋಗಿಕವಾಗಿ ಐದು ಕೇಸ್‌ಗಳ ಪರೀಕ್ಷೆ ನಡೆಸಿ ನಿಮಾನ್ಸ್‌ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಸಂಸದ ಶಿವಕುಮಾರ ಉದಾಸಿ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು, ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಂದ್ರ ದೊಡ್ಮನಿ, ಪ್ರಭಾರಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಪಿ.ಎಸ್‌. ಹಾವನೂರ, ಡಾ| ಸುರೇಶ ಪೂಜಾರ ಇತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Letter to Son: ಪ್ರೀತಿಯ ಕಂದನಿಗೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.