ಸುರಕ್ಷಾ ಕ್ರಮದೊಂದಿಗೆ ಆಂಗ್ಲ ಭಾಷಾ ಪರೀಕ್ಷೆ


Team Udayavani, Jun 17, 2020, 8:35 AM IST

ಸುರಕ್ಷಾ ಕ್ರಮದೊಂದಿಗೆ ಆಂಗ್ಲ ಭಾಷಾ ಪರೀಕ್ಷೆ

ದಾವಣಗೆರೆ: ಕೋವಿಡ್ ವೈರಸ್‌ ದಾಳಿ ಹಿನ್ನೆಲೆ, ಲಾಕ್‌ಡೌನ್‌ನಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಜೂ. 18 ರಂದು ನಡೆಯಲಿದ್ದು, ಜಿಲ್ಲೆಯ 16,081 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಮಾ. 4 ರಿಂದ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಮಾ. 23 ರಂದು ನಿಗದಿಯಾಗಿದ್ದ ಇಂಗ್ಲಿಷ್‌ ವಿಷಯ ಪರೀಕ್ಷೆಗೆ ಒಂದು ದಿನದ ಮುನ್ನ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂಜಿನಿಯರಿಂಗ್‌, ವೈದ್ಯಕೀಯ, ಪಶು ವೈದ್ಯಕೀಯ ಒಳಗೊಂಡಂತೆ ಇತರೆ ವೃತ್ತಿಪರ ಕೋರ್ಸ್‌ಗೆ ಸೇರುವ ಗುರಿ ಹೊಂದಿರುವ ವಿದ್ಯಾರ್ಥಿಗಳು ಆಂಗ್ಲ ಭಾಷೆಯ ಪರೀಕ್ಷೆ ಬರೆಯದೆ ಪರೀಕ್ಷೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಈಗ ಪರೀಕ್ಷೆಗೆ ಕಾಲ ಕೂಡಿ ಬಂದಿದೆ.

ಲಾಕ್‌ಡೌನ್‌ ತೆರವಿನ ನಂತರ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಹೆಚ್ಚಳದ   ನಡುವೆಯೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದೆ. ಕೋವಿಡ್‌-19 ನಿಯಂತ್ರಣದ ನಿಟ್ಟಿನಲ್ಲಿ ವಿದ್ಯಾರ್ಥಿìಗಳ ಕ್ಷೇಮಕ್ಕಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾಡಳಿತ ಸಹಕಾರದಿಂದ ಸ್ವತ್ಛತೆ ಮತ್ತು ಸ್ಯಾನಿಟೇಷನ್‌ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದಿರಿಸಲು 1 ಮೀಟರ್‌ ಅಂತರದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದು ಎಂಬ ಉದ್ದೇಶದಿಂದ ಎಲ್ಲಾ ಗ್ರಾಮೀಣ ಪ್ರದೇಶಗಳಿಂದ ಸಾರಿಗೆ ವ್ಯವಸ್ಥೆಯನ್ನು 14 ಮಾರ್ಗವಾಗಿ ಕಲ್ಪಿಸಲಾಗಿದೆ. ದಾವಣಗೆರೆ ತಾಲೂಕಿನಲ್ಲಿ ಒಟ್ಟಾರೆ 9,375, ಹರಿಹರದಲ್ಲಿ 1,797, ಜಗಳೂರಿನಲ್ಲಿ 1,286, ಹೊನ್ನಾಳಿಯಲ್ಲಿ 1,620, ಚನ್ನಗಿರಿಯಲ್ಲಿ 1,932 ವಿದ್ಯಾರ್ಥಿಗಳು ಆಂಗ್ಲ ಭಾಷಾ ಪರೀಕ್ಷೆ ಬರೆಯಲಿದ್ದಾರೆ.

ದಾವಣಗೆರೆ ನಗರದಲ್ಲಿ 16, ತಾಲೂಕಿನ ಆನಗೋಡು ಗ್ರಾಮದಲ್ಲಿ ಒಂದು ಪರೀಕ್ಷಾ ಕೇಂದ್ರ ಒಳಗೊಂಡಂತೆ ಒಟ್ಟು 17 ಕೇಂದ್ರಗಳಿವೆ. ಜಿಲ್ಲೆಯಲ್ಲಿ ಮೊದಲು 31 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ 5 ವಿಷಯಗಳ ಪರೀಕ್ಷೆ ನಡೆಸಲಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕಾದ ಹಿನ್ನೆಲೆಯಲ್ಲಿ 15 ಬ್ಲಾಕ್‌ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಕೊರೊನಾ, ಲಾಕ್‌ಡೌನ್‌ ಮುನ್ನ 31 ಪರೀಕ್ಷಾ ಕೇಂದ್ರಗಳಲ್ಲಿ 794 ಕೊಠಡಿ ನಿಗದಿಪಡಿಸಲಾಗಿತ್ತು. ಈಗ ಹೆಚ್ಚುವರಿಯಾಗಿ 145 ಕೊಠಡಿ ನಿಗದಿ ಮಾಡಲಾಗಿದೆ. ಒಟ್ಟಾರೆ 939 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ತಮ್ಮ ಮೂಲ ಜಿಲ್ಲೆ, ಸ್ಥಳಗಳಲ್ಲಿ ಪರೀಕ್ಷೆ ಬರೆಯುವುದಾಗಿ 384 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆ ಎಲ್ಲರೂ ಮತ್ತೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಕೋವಿಡ್ ವೈರಸ್‌ ಹರಡುವಿಕೆ ಹಿನ್ನೆಲೆಯಲ್ಲಿ, ಕೈಗೊಂಡಿರುವ ಅಗತ್ಯ ಸುರಕ್ಷಾ ಕ್ರಮಗಳ ನಡುವೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳು ಆಂಗ್ಲ ಭಾಷಾ ವಿಷಯದ ಪರೀಕ್ಷೆಗೆ ಸಜ್ಜಾಗಿದ್ದಾರೆ. ಜಿಲ್ಲಾಡಳಿತ, ಪಿಯು ಶಿಕ್ಷಣ ಮಂಡಳಿ ಯಾವುದೇ ಭಯಕ್ಕೆ ಆಸ್ಪದ ಇಲ್ಲದೆ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.

 

-ರಾ. ರವಿಬಾಬು

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.