ಸಕಲ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಯೋಧ ಸಂದೇಶ್‌ ಶೆಟ್ಟಿ ಅಂತಿಮ ದರ್ಶನ

Team Udayavani, Jun 19, 2020, 5:00 AM IST

ಸಕಲ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಉಪ್ಪಿನಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಭಾರತೀಯ ಭೂ ಸೇನೆಯ ಯೋಧ ಸಂದೇಶ್‌ ಶೆಟ್ಟಿ ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಿಗೆ ತರಲಾಗಿದ್ದು, ಸೇನಾ ಗೌರವ, ಭಾರೀ ಸಂಖ್ಯೆಯಲ್ಲಿ ಜನ ಅಂತಿಮ ದರ್ಶನ ಮಾಡಿದ ಬಳಿಕ ಅವರ ಮನೆ ಬಾರ್ಯದ ಅಲಿಂಗಿರದಲ್ಲಿ ರಾತ್ರಿ 11ರ ಸುಮಾರಿಗೆ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು.

ಬೆಳ್ತಂಗಡಿ ತಾ|ನ ಬಾರ್ಯದ ಅಲಿಂಗಿರ ನಿವಾಸಿ ಸಂದೇಶ್‌ ಶೆಟ್ಟಿಯವರು ಭಾರತೀಯ ಭೂ ಸೇನಾ ಸಿಗ್ನಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಥುರಾದ ಕ್ವಾರಂಟೈನ್‌ ಕೇಂದ್ರದಲ್ಲಿದ್ದ ಅವರು ಜೂ. 13ರಂದು ಹೃದಯಾಘಾತದಿಂದ ನಿಧನ ಹೊಂದಿದ್ದರು. ಅಲ್ಲಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಗಳು ನಡೆದು, ಕೊರೊನಾ ನೆಗೆಟಿವ್‌ ವರದಿ ಬಂದ ಬಳಿಕ ಜೂ. 17ರಂದು ಪಾರ್ಥಿವ ಶರೀರವನ್ನು ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿತ್ತು. ಅಲ್ಲಿಂದ ರಸ್ತೆ ಮಾರ್ಗವಾಗಿ ಆ್ಯಂಬುಲೆನ್ಸ್‌ನಲ್ಲಿ ಹುಟ್ಟೂರಿಗೆ ತರಲಾಯಿತು.

ಪುಷ್ಪಾರ್ಚನೆ
ಯೋಧನ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ದಾರಿಯುದ್ದಕ್ಕೂ ಜನರು ಅಂತಿಮ ದರ್ಶನಗೈದು ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಅವರು ಕಲಿತ ಬಾರ್ಯ ಗ್ರಾಮದ ಪೆರಿಯೊಟ್ಟು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿ ಇವರಿಗೆ ಸುಬೇದಾರ್‌ ಬಿಜು ನೇತೃತ್ವದ ಯೋಧರ ತಂಡ ಸೇನಾ ಗೌರವ ಸಲ್ಲಿಸಿತು. ಬಳಿಕ ಕ್ಷೇತ್ರದ ಶಾಸಕರಾದ ಹರೀಶ್‌ ಪೂಂಜ, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಡಿವೈಎಸ್ಪಿ ದಿನಕರ ಶೆಟ್ಟಿ, ಉಪ್ಪಿನಂಗಡಿ ಠಾಣಾ ಪೊಲೀಸ್‌ ಉಪನಿರೀಕ್ಷಕ ಈರಯ್ಯ, ಪಂ. ಅಧ್ಯಕ್ಷ ಪ್ರಶಾಂತ್‌ ಪೈ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯ ಧರ್ಣಪ್ಪ, ಎಪಿಎಂಸಿ ಸದಸ್ಯ ಜಯಾನಂದ ಕಲ್ಲಾಪು, ಪದು¾ಂಜ ಸಿ ಎ ಬ್ಯಾಂಕ್‌ ಅಧ್ಯಕ್ಷ ರಕ್ಷಿತ್‌ ಶೆಟ್ಟಿ, ಪ್ರಮುಖರಾದ ಜಯವಿಕ್ರಮ ಕಲ್ಲಾಪು, ಗುಣಾಕರ ಅಗ್ನಾಡಿ, ಮನೋಹರ್‌ ಶೆಟ್ಟಿ ಬಾರ್ಯ, ರವಿ ಶಿಲ್ಪಾ ಮತ್ತಿತರ ಜನಪ್ರತಿನಿಧಿಗಳು, ಸ್ಥಳೀಯ ಸಂಘ-ಸಂಸ್ಥೆಗಳ ಮುಖಂಡರು ಸಹಿತ ನೂರಾರು ಜನ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು. “ಭಾರತ್‌ ಮಾತಾ ಕೀ ಜೈ’, “ಅಮರ್‌ ರಹೇ… ಅಮರ್‌ ರಹೇ… ಸಂದೇಶ್‌ ಶೆಟ್ಟಿ ಅಮರ್‌ ರಹೇ…’ ಮತ್ತಿತರ ದೇಶ ಭಕ್ತಿ ಬಿಂಬಿತ ಘೋಷಣೆಗಳು ಈ ಸಂದರ್ಭ ಮುಗಿಲು ಮುಟ್ಟಿತ್ತು.

ಬಾರ್ಯದ ಅಲಿಂಗಿರದಲ್ಲಿರುವ ಅವರ ಮನೆಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಕುಟುಂಬ ವರ್ಗದವರಿಗೆ ಬಿಟ್ಟು ಕೊಡಲಾಯಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳು ಮುಗಿದ ಬಳಿಕ ರಾತ್ರಿ ಸುಮಾರು 11ರ ಸುಮಾರಿಗೆ ಅವರ ಕುಟುಂಬಸ್ಥರು ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

ಸಾಮಾಜಿಕ ಅಂತರ
ಮೃತ ಯೋಧನ ಅಂತಿಮ ದರ್ಶನಕ್ಕೆ ನೆರೆದ ಜನರಲ್ಲಿ ಕೋವಿಡ್‌-19 ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಾಲೂಕು ದಂಡಾಧಿಕಾರಿಯವರು ತಮ್ಮ ವಾಹನಕ್ಕೆ ಅಳವಡಿಸಿದ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಿದರು.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.