ಘನ ತ್ಯಾಜ್ಯ ವಿಲೇವಾರಿಗೆ ಸಹಕರಿಸಿ: ಮುನಿಯಪ್ಪ

Team Udayavani, Jun 20, 2020, 6:34 AM IST

ghana-tyajya

ಶಿಡ್ಲಘಟ್ಟ: ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಸರ್ಕಾರ ಅನೇಕ ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಪ್ರಮುಖವಾಗಿ ನಗರ ಪ್ರದೇಶದ ಮಾದರಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಲು ಗ್ರಾಮಸ್ಥರು  ಸಹಕರಿಸಬೇಕೆಂದು ಶಾಸಕ ವಿ.ಮುನಿಯಪ್ಪ ಹೇಳಿದರು. ತಾಲೂಕಿನ ದಿಬ್ಬೂರಹಳ್ಳಿ-ತಿಮ್ಮನಾಯಕನಹಳ್ಳಿ ಹಾಗೂ ತಲ ಕಾಯಲಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ತ್ಯಾಜ್ಯ ಸಂಗ್ರಹಿಸಲು ಡಸ್ಟ್‌ಬಿನ್‌ಗಳನ್ನು ವಿತರಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮಸ್ಥರು ತಮ್ಮ ಮನೆಯ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿಡಲು ಕಾಳಜಿ ವಹಿಸಬೇಕು. ಮನೆಯಲ್ಲಿ  ಒಣ-ಹಸಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಗ್ರಾಪಂ ವಾಹನದಲ್ಲಿ ಹಾಕುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಬೇಕೆಂದು ಮನವಿ ಮಾಡಿದರು.

ಜಾಗೃತಿ ಮೂಡಿಸಿ: ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಲು ಹಿಂದಿನ ಯುಪಿಎ ಸರ್ಕಾರ ರಾಷ್ಟ್ರೀಯ ಸ್ವಚ್ಛತಾ ಅಭಿಯಾನ ಯೋಜನೆ ಆರಂಭಿಸಿತು. ಇದೀಗ ಅದೇ ಮಾದರಿಯ ಸ್ವಚ್ಛಭಾರತ ಮಿಷನ್‌ ಯೋಜನೆಯನ್ನು  ಜಾರಿಗೊಳಿಸಲಾಗಿದೆ ಎಂದರು. ತಾಪಂ ಇಒ ಬಿ.ಶಿವಕುಮಾರ್‌ ಮಾತನಾಡಿ, ನಗರ ಪ್ರದೇಶದ ಮಾದರಿ ಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಲು ಮತ್ತು ತ್ಯಾಜ್ಯ ವಿಲೇವಾರಿ ಮಾಡಲು ಮೂರು ಗ್ರಾಪಂಗಳಿಗೆ ಒಂದು ಘಟಕ  ಆರಂಭಿಸಿ ಪ್ರತಿಯೊಂದು ಪಂಚಾಯಿತಿಗೆ ಕಸ ವಿಲೇವಾರಿಗೆ ಟಿಪ್ಪರ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಪ್ರತಿ ಕುಟುಂಬಕ್ಕೆ 2 ಬಕೆಟ್‌ ವಿತರಿಸ ಲಾಗಿದೆ ಎಂದರು.

ಈ ಸಂದರ್ಭದಲ್ಲಿ ದಿಬ್ಬೂರಹಳ್ಳಿ ಗ್ರಾಪಂ ಅಧ್ಯಕ್ಷ ಸುಬ್ಬಣ್ಣ, ಉಪಾಧ್ಯಕ್ಷೆ  ಮಮತಾ, ಸದಸ್ಯ ಪ್ರಸನ್ನ, ಮುಖಂಡ ಡಿ.ಎಸ್‌. ಎನ್‌.ರಾಜು, ಗೋಪಾಲಕೃಷ್ಣ(ಗೋಪಿ), ತಲಕಾಯಲಬೆಟ್ಟ ಗ್ರಾಪಂ ಅಧ್ಯಕ್ಷ ಶ್ರೀನಿ ವಾಸರೆಡ್ಡಿ, ಪಿಡಿಒ ಗೌಸ್‌ಪೀರ್‌,ತಿಮ್ಮನಾಯಕನಹಳ್ಳಿ ಗ್ರಾಪಂ ಅಧ್ಯಕ್ಷೆ ಭವ್ಯ, ಉಪಾಧ್ಯಕ್ಷೆ ಕಮಲಮ್ಮ  ದ್ಯಾವಪ್ಪ, ಆನಂದ್‌, ಅರುಣ್‌ಕುಮಾರ್‌, ಜಿಪಂ ಮಾಜಿ ಸದಸ್ಯ ಎನ್‌.ಮುನಿಯಪ್ಪ, ಶ್ರೀನಿವಾಸರೆಡ್ಡಿ, ಅಶ್ವತ್ಥರೆಡ್ಡಿ, ಪಿಡಿಒ ನಾಗರಾಜಯ್ಯ, ಜಿಪಂ ಮಾಜಿ ಅಧ್ಯಕ್ಷ ವಿ.ಸುಬ್ರಹ್ಮಣಿ, ಭೂ ಅಭಿವೃದ್ಧಿ ಬ್ಯಾಂಕ್‌ನ ನಿರ್ದೇಶಕ ರವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.