ಡಿಕೆಶಿ ಪದಗ್ರಹಣ ಯಶಸ್ಸಿಗೆ ಶ್ರಮಿಸಿ

Team Udayavani, Jun 28, 2020, 5:26 AM IST

dkshi-shranisi

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪದಗ್ರಹಣ ಸಮಾರಂಭ ಜು.2ರಂದು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಮನವಿ ಮಾಡಿದರು. ಶನಿವಾರ  ಜಿಲ್ಲಾ ಕಾಂಗ್ರೆಸ್‌ ಕಚೇರಿ ಯಲ್ಲಿ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಿಗ್ನಲ್‌ ಸಿಗುವುದಿಲ್ಲವೆಂದು ಯಾರೂ ನೆಪ ಹೇಳುವುದು ಬೇಡ. ಗ್ರಾಪಂ ಮುಖ್ಯ ಕೇಂದ್ರದಲ್ಲೇ ಸಭೆ ನಡೆಸಬೇಕೆಂದು ಯಾರೂ ಹೇಳಿಲ್ಲ.

ಗ್ರಾಪಂ ವ್ಯಾಪ್ತಿಯ ಸಂಪರ್ಕ ಸಿಗುವ ಕಡೆ ಎಲ್ಲಾದರೂ ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ನೀಡಿದರು. ಜಿಲ್ಲೆಯ ಯಾವುದೇ ಗ್ರಾಪಂನಲ್ಲೂ ಕಾರ್ಯಕ್ರಮ ನಡೆ ದಿಲ್ಲವೆಂಬ ದೂರು ಕೇಳಿಬರಬಾರದು. ಏಕೆಂದರೆ, ಇದು  ಸುಮ್ಮನೆ ನಡೆಸುತ್ತಿರುವ ಕಾರ್ಯಕ್ರಮವಲ್ಲ. ಇದು ನೇರ ಪ್ರಸಾರ ದ ಕಾರ್ಯಕ್ರಮ. ಜನರು ಇದನ್ನು ನೋಡಬೇಕು. ಕೆಪಿಸಿಸಿಯವರೂ ಎಲ್ಲೆಡೆ ಕಾರ್ಯಕ್ರಮ ನಡೆಯುತ್ತಿರುವುದನ್ನು ವೀಕ್ಷಿಸಲು ಅವಕಾಶ ಸಿಗಬೇಕು. ಕಾರ್ಯಕ್ರಮ  ಯಶಸ್ವಿಯಾಗಿ ನಡೆದಿರುವುದು ದಾಖಲಾಗಬೇಕು. ಇದೆಲ್ಲರೂ ಡಿಜಿಟಲ್‌ ರೂಪದಲ್ಲಿರುವುದರಿಂದ ಎಲ್ಲರೂ ಶ್ರಮ ವಹಿಸುವಂತೆ ತಿಳಿಸಿದರು.

ಜನರನ್ನು ಸೇರಿಸುವುದು ಅನಿವಾರ್ಯ: ಎರಡು-ಮೂರು ದಿನ ಮುಂಚಿತವಾಗಿ ತಯಾರಿ  ನಡೆಸಿ ಕೇಬಲ್‌ ಆಪರೇಟರ್‌ಗಳನ್ನು ಸಂಪರ್ಕಿಸಿ ಸಂಪರ್ಕ ಪಡೆದುಕೊಳ್ಳ ಬೇಕು. ಕಾರ್ಯಕ್ರಮ ನಡೆಯುವ ಸ್ಥಳ ಗುರುತಿಸಿ ಎಲ್‌ಇಡಿ ಟೀವಿ ಅಳವಡಿಸಲು, ಜನರು ಸೇರುವಂತೆ ವ್ಯವಸ್ಥೆ ಮಾಡುವುದು ಅನಿವಾರ್ಯ. ಇದರಿಂದ ಮುಂದೆ ರಾಜಕಾರಣ ಹಾಗೂ ಸಂಘಟ ನೆಗೆ ಅನುಕೂಲವಾಗಲಿದೆ ಎಂದರು.

ಕೆಲಸ ಮಾಡುವವರಿಗೆ ಆದ್ಯತೆ: ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲವೆಂಬ ಬಗ್ಗೆ ಅನೇಕರು ಪಕ್ಷ ಸಂಘಟನೆ, ಕಾರ್ಯಕ್ರಮದ ಆಯೋಜನೆಯಲ್ಲಿ ನಿರುತ್ಸಾಹ ತೋರುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರ ಮನೆ ಬಾಗಿಲಿಗೆ  ಅಧಿಕಾರ ಹುಡುಕಿಕೊಂಡು ಬರಲಿದೆ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಕೆಪಿಸಿಸಿ ವೀಕ್ಷಕ ಸಂಪಂಗಿ, ಯುವ ಮುಖಂಡ ರವಿಕುಮಾರ್‌ ಗಣಿಗ, ಮಾಜಿ ಶಾಸಕ ಎಚ್‌.ಬಿ. ರಾಮು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.  ಗಂಗಾಧರ್‌, ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ದ್ರಪ್ಪ, ಯುವ ಘಟಕದ ಅಧ್ಯಕ್ಷ ಲೋಕೇಶ್‌, ಹರೀಶ್‌ಬಾಬು, ಶಾರದಾ ಗೌಡ, ಶುಭದಾಯಿನಿ, ಸಿ.ಎಂ.ದ್ಯಾವಪ್ಪ, ಉಮ್ಮಡಹಳ್ಳಿ ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.