2018ರ ಹಳೆ ಪಠ್ಯಕ್ರಮ ಪ್ರಶ್ನೆಪತ್ರಿಕೆ ನೀಡಿದ್ದಕ್ಕೆ ವಿದ್ಯಾರ್ಥಿಗಳು- ಪಾಲಕರ ಪ್ರತಿಭಟನೆ

Team Udayavani, Jun 28, 2020, 12:14 PM IST

28-June-06

ಸಿಂಧನೂರು: ಶ್ರೀ ಕೃಷ್ಣ ದೇವರಾಯ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪ್ರತಿಭಟಿಸಿದರು

ಸಿಂಧನೂರು: ನಗರದ ಶ್ರೀ ಕೃಷ್ಣ ದೇವರಾಯ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಆಂಗ್ಲ ಮಾಧ್ಯಮದ 20 ವಿದ್ಯಾರ್ಥಿಗಳಿಗೆ 2018ರ ಹಳೆ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡಿರುವ ಘಟನೆ ನಡೆದಿದೆ. ಒಟ್ಟು 419 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 20 ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಹಳೆ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡಿದ್ದರಿಂದ ಕೇವಲ ಶೇ.40ರಷ್ಟು ಮಾತ್ರ ಉತ್ತರ ಬಿಡಿಸಿದ್ದಾರೆ.

ಇನ್ನುಳಿದ ಶೇ.60ಪ್ರಶ್ನೆಗಳಿಗೆ ಉತ್ತರ ತಿಳಿಯದೆ ಗೊಂದಲಕ್ಕೆ ಕಾರಣವಾಗಿದೆ. ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳು ಪ್ರತಿಭಟಿಸಿ, ತಮ್ಮ ಶಿಕ್ಷಕರು ಹಾಗೂ ಪೋಷಕರಿಗೆ ಕರೆಸಿ ವಿಷಯ ತಿಳಿಸಿದರು. ಆಗ ಪೋಷಕರು ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಲು ಬಂದ ವಾಹನ ಬಿಡದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರು.

ಕೊಠಡಿ ನಂಬರ್‌ 1, 2 ಹಾಗೂ ಮೂರರಲ್ಲಿ ಬರೆಯುತ್ತಿದ್ದ 20 ವಿದ್ಯಾರ್ಥಿಗಳು ಹಳೆ ಪ್ರಶ್ನೆ ಪತ್ರಿಕೆ ನೀಡಿರುವ ಬಗ್ಗೆ ನಿಯೋಜಿತ ಶಿಕ್ಷಕರಿಗೆ ತಿಳಿಸಿದರು. ಎಲ್ಲಾ ಒಂದೇ ಇದೆ.ಬರೆಯಬೇಕು ಎಂದು ಅವರು ಹೇಳಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ ಪಠ್ಯದಲ್ಲಿ ಇಲ್ಲದ ಕೆಲವು ಪ್ರಶ್ನೆಗಳು ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಬರೆಯಲು ಆಗಲಿಲ್ಲ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಂಧನೂರು ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳಿದ್ದು ಯಾವ ಪರೀಕ್ಷಾ ಕೇಂದ್ರಗಳಲ್ಲಿಯೂ ಗೊಂದಲವಾಗಿಲ್ಲ. ಆದರೆ ಶ್ರೀ ಕೃಷ್ಣ ದೇವರಾಯ ವಿದ್ಯಾಸಂಸ್ಥೆಯಲ್ಲಿ ಮಾತ್ರ ಈ ಗೊಂದಲ ಕಂಡುಬಂದಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ. ಮರು ಪರೀಕ್ಷೆ ನಡೆಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಆಂಗ್ಲ ಮಾಧ್ಯಮದ 20 ವಿದ್ಯಾರ್ಥಿಗಳಿಗೆ ಹಳೆ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ವಿತರಣೆ ಆಗಿದೆ. ಈ ಗೊಂದಲದ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಮರು ಪರೀಕ್ಷೆ ಕುರಿತು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ನಿರ್ಣಯಿಸಲಿದೆ.
ಅಮರಪ್ಪಭೋವಿ,
ಬಿಇಒ ಸಿಂಧನೂರು

ಹಳೆಯ ಪ್ರಶ್ನೆ ಪತ್ರಿಕೆ ಕೊಟ್ಟು ಅಧಿಕಾರಿಗಳು ಗೊಂದಲ ಸೃಷ್ಟಿಸಿದ್ದಾರೆ. ಇದರಿಂದ ನಮ್ಮ ಮಕ್ಕಳಿಗೆ ತೊಂದರೆಯಾಗಿದೆ. ಕೂಡಲೇ ಮರು ಪರೀಕ್ಷೆ ನಡೆಸಲು ಒತ್ತಾಯಿಸುತ್ತೇವೆ.
ಶರಣಪ್ಪ ವಿರೂಪಾಪುರ,
ಪಾಲಕ

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.