ಮೈಸೂರಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

Team Udayavani, Jun 29, 2020, 6:28 AM IST

mys-male

ಮೈಸೂರು: ಮೈಸೂರಿನಲ್ಲಿ ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ 2 ಅಡಿಯಷ್ಟು ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು. ಮುಂಗಾರು ಮಳೆ ಚುರುಕುಗೊಂಡಿದ್ದು, ಭಾನುವಾರ ನಗರದ  ಹಲವೆಡೆ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿರು ಬಿಸಿಲೇ ಇತ್ತಾದರೂ, ಮಧ್ಯಾಹ್ನ 3.45 ಗಂಟೆಯಾಗುತ್ತಿದ್ದಂತೆ ಸುತ್ತಲೂ ಕಾರ್ಮೋಡ ಕವಿಯಿತು. ಬಳಿಕ ಕೊಂಚ  ಗಾಳಿ ಶುರುವಾಯಿತು. ಅದರ ಜತೆಯಲ್ಲೇ ಮಳೆಯೂ ಆರಂಭ ವಾಗಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿಯಿತು. ಕೆಲ ನಿಮಿಷ ವಿರಾಮ ನೀಡಿದ್ದ ಮಳೆ ಮತ್ತೆ ಗುಡುಗು, ಮಿಂಚಿನೊಂದಿಗೆ ಆಗಮಿಸಿ ಮತ್ತಷ್ಟು ಹೊತ್ತು  ಧಾರಾಕಾರವಾಗಿ ಸುರಿಯಿತು.

ತಗ್ಗು ಪ್ರದೇಶಕ್ಕೆ ನೀರು: ಜೋರು ಮಳೆ ಸುರಿದ ಕಾರಣ ತಗ್ಗು ಪ್ರದೇಶಕ್ಕೆ ನೀರು ಹರಿಯಿತು. ಇದರಿಂದ ಅನೇಕ ರಸ್ತೆಗಳು, ಮೋರಿ, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗ‌ಳಲ್ಲಿ ನೀರು ಉಕ್ಕಿ ಹರಿಯಿತು. ನಗರದ ಪ್ರಮುಖ ರಸ್ತೆಗಳಲ್ಲಿ 2  ಅಡಿ  ಯಷ್ಟು ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು. ರಸ್ತೆಯಲ್ಲಿ ಹೆಚ್ಚು ನೀರು ಹರಿದ ಪರಿಣಾಮ ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು. ದ್ವಿಚಕ್ರ ವಾಹನ ಸವಾರರು ಅಂಗಡಿ ಮುಂಗಟ್ಟುಗಳ ಮುಂದೆ  ಆಶ್ರಯ ಪಡೆದರು.

ವಾಹನ ಸಂಚಾರಕ್ಕೆ ಅಡ್ಡಿ: ಬಲ್ಲಾಳ್‌ ವೃತ್ತ, ನಂಜಗೂಡು-ಮೈಸೂರು ರಸ್ತೆ, ಚಾಮರಾಜ ಜೋಡಿ ರಸ್ತೆ, ಕೆ.ಆರ್‌. ವೃತ್ತ, ಅಶೋಕ ರಸ್ತೆ ದೊಡ್ಡ ಗಡಿಯಾರ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ  ತೊಡಕಾಗಿದೆ. ಈ ವೇಳೆ ಕೆಲ ದ್ವಿಚಕ್ರ ವಾಹನ ಸವಾರರು ಆಯತಪ್ಪಿ ಬಿದ್ದ ಘಟನೆಗಳು ನಡೆದವು. ಕೆ.ಆರ್‌. ವೃತ್ತ, ಚಾಮರಾಜ ವೃತ್ತ, ದೊಡ್ಡಗಡಿಯಾರ ಸುತ್ತಮುತ್ತ ಮಳೆ ನೀರು ರಸ್ತೆ ಮಧ್ಯೆ ನಿಂತಿದ್ದರಿಂದ ವಾಹನ ಸಂಚಾರಕ್ಕೆ ಕೆಳ  ಕಾಲ ಅಡಚಣೆಯಾಯಿತು. ಇಲ್ಲಿಯ ರಸ್ತೆಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳು ಕೆಲ ಸಮಯ ಮುಳುಗಡೆಯಾದವು.

ಚರಂಡಿ ಉಕ್ಕಿ ಹರಿದ ಪರಿಣಾಮ ಎಲೆತೋಟ, ಕನಕಗಿರಿ ರಸ್ತ ಗಳಲ್ಲಿ ಸಂಚರಿಸಲು ವಾಹನ ಸವಾರರು ಪರದಾಡಿದರು. ಉಯಗಿರಿ, ಮಂಡಿಮೊಹಲ್ಲಾ, ವಿಜಯನಗರ, ರಾಮಕೃಷ್ಣ  ನಗರ, ಶಾರದಾದೇವಿನಗರ, ಜೆ.ಪಿ.ನಗರ, ವಿದ್ಯಾರಣ್ಯ ಪುರಂ, ರಾಮಸ್ವಾಮಿ ವೃತ್ತ, ಲಕ್ಷ್ಮೀಪುರಂ, ಟಿ.ಕೆ.ಬಡಾವಣೆಯಲ್ಲಿ, ಬೋಗಾದಿಯಲ್ಲಿ, ನಿರ್ಮಿತಿ ಕೇಂದ್ರ ರಸ್ತೆ, ಕುವೆಂಪು   ನಗರ, ಹುಣಸೂರು ರಸ್ತೆ, ಜಯನಗರ, ಕಾಳಿದಾಸ ರಸ್ತೆ, ಚಾಮರಾಜಪುರಂ ರೈಲ್ವೆ ನಿಲ್ದಾಣ, ಸಾರ್ವಜನಿಕರ ಹಾಸ್ಟೆಲ್‌ ರಸ್ತೆಗಳಲ್ಲಿ ನೀರು ಉಕ್ಕಿ ಹರಿಯಿತು. ಇನ್ನೂ ಕೆಲವೆಡೆ ಮರಗಳ  ಕೊಂಬೆಗಳು ಮುರಿದು ಬಿದ್ದವಾದರೂ, ಯಾವುದೇ ಅನಾಹುತ ಸಂಬಭವಿಸಿಲ್ಲ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.