ಕೋವಿಡ್‌ ಚಿಕಿತ್ಸೆಗೆ ಖಾಸಗಿ ವೈದ್ಯರ ಅಪಸ್ವರ

ಆಸ್ಪತ್ರೆಗಳಿಗೆ ಇತರೆ ರೋಗಿಗಳು ಬರಲ್ಲ ಎಂಬ ಆತಂಕ ಒಂದೇ ಕ್ಲಿನಿಕ್‌ ಮೀಸಲಿಡಲು ಆಗ್ರಹ

Team Udayavani, Jun 29, 2020, 1:31 PM IST

29-June-12

ಬೀದರ: ಗಡಿನಾಡು ಬೀದರನಲ್ಲಿ ರಕ್ಕಸ ಕೋವಿಡ್ ದಿನ ಕಳೆದಂತೆ ತನ್ನ ಕಬಂದಬಾಹು ಚಾಚುತ್ತಿದ್ದು, ಸಾವಿನ ರಣಕೇಕೆ ಹಾಕುತ್ತಿದೆ. ಈ ಆತಂಕದ ನಡುವೆ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌-19ಗೆ ಚಿಕಿತ್ಸೆ ನೀಡಬೇಕೆಂಬ ಸರ್ಕಾರದ ಆದೇಶ ಜನರಲ್ಲಿ ನೆಮ್ಮದಿ ತರಿಸಿದ್ದರೆ, ಖಾಸಗಿ ಕ್ಲಿನಿಕ್‌ಗಳಿಗೆ ಭೀತಿ ಶುರುವಾಗಿದೆ.

ರಾಜ್ಯದಲ್ಲಿ ಕೋವಿಡ್ ಆರ್ಭಟ ಹೆಚ್ಚಳ ಹಿನ್ನಲೆಯಲ್ಲಿ ಸರ್ಕಾರ ಆಯುಷ್ಮಾನ್‌ ಭಾರತ್‌ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ 483 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಅದರಲ್ಲಿ ಬೀದರ ನಗರದ 13 ಮತ್ತು ಬಸವಕಲ್ಯಾಣದ 1 ಕ್ಲಿನಿಕ್‌ ಸೇರಿ ಜಿಲ್ಲೆಯಲ್ಲಿ ಒಟ್ಟು 14 ಆಸ್ಪತ್ರೆಗಳನ್ನು ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಗುರುತಿಸಲಾಗಿದೆ.

ಕೋವಿಡ್‌-19 ವಿಪತ್ತಿನ ವೇಳೆ ರೋಗಿಗಳಿಗೆ ಚಿಕಿತ್ಸೆ ನೀಡುವುದು ನಮ್ಮ ಕರ್ತವ್ಯ. ಆದರೆ, ಸೋಂಕಿತರು ಚಿಕಿತ್ಸೆಗೆ ಬಂದರೆ ನಮ್ಮ ಕ್ಲಿನಿಕ್‌ ಗಳ ಗತಿ ಏನು ಎಂದು ಖಾಸಗಿ ಆಸ್ಪತ್ರೆಗಳ ವಲಯದಲ್ಲಿ ಅಪಸ್ವರ ಕೇಳಿ ಬರುತ್ತಿವೆ. ಬೀದರ ಜಿಲ್ಲೆಯಲ್ಲಿ ಪಾಸಿಟಿವ್‌ ಸಂಖ್ಯೆ 500ರ ಗಡಿ ದಾಟಿದ್ದರೂ ಗುಣಮುಖರಾದವರ ಸಂಖ್ಯೆ ಶೇ.80ರಷ್ಟು ಇರುವುದು ನೆಮ್ಮದಿಯ ಬೆಳವಣಿಗೆ. ಆದರೆ, ಸೋಂಕಿಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿ ಬೆಂಗಳೂರು ಬಳಿಕ ರಾಜ್ಯದಲ್ಲಿ 2ನೇ ಸ್ಥಾನದಲ್ಲಿರುವುದು ತೀವ್ರ ಆಘಾತವನ್ನುಂಟು ಮಾಡಿದೆ. 300 ಹಾಸಿಗೆಯ ಹಳೆ ಬ್ರಿಮ್ಸ್‌ ಕಟ್ಟಡವನ್ನು ಕೋವಿಡ್‌-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದು, ಸೋಂಕಿತರು ಹೆಚ್ಚಾದರೆ ಖಾಸಗಿ ಕ್ಲಿನಿಕ್‌ಗಳನ್ನು ಬಳಸಿಕೊಳ್ಳುವ ಸರ್ಕಾರದ ನಿರ್ಧಾರದಿಂದ ಆತಂಕಗೊಂಡಿದ್ದಾರೆ.

ಏಕೆ ಅಪಸ್ವರ?:
ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆ ನೀಡುವ ವಿಷಯದಲ್ಲಿ ಪೂರ್ವಾಪರ ಯೋಚಿಸದೆ ಕ್ಲಿನಿಕ್‌ಗಳನ್ನು ಆಯ್ಕೆ ಮಾಡಿದೆ. ಮುಖ್ಯವಾಗಿ ಜಿಲ್ಲೆಯಲ್ಲಿ 4 ಕಣ್ಣಿನ ಆಸ್ಪತ್ರೆಗಳನ್ನು ಪಟ್ಟಿಯಲ್ಲಿ ಸೇರಿಸಿದೆ. ಕೆಲವೊಂದು ಸಿಂಗಲ್‌ ಸ್ಪೆಷಾಲಿಟಿಯ ಸಾಮಾನ್ಯ ಆಸ್ಪತ್ರೆಗಳಿದ್ದು, ಅಲ್ಲಿ ಅಗತ್ಯ ಸಿಬ್ಬಂದಿ, ಚಿಕಿತ್ಸಾ ಸಲಕರಣೆಗಳ ಕೊರತೆ ಇದೆ. ಪೂರ್ವ ವ್ಯವಸ್ಥೆಗಳಿಲ್ಲದಂಥ ಕ್ಲಿನಿಕ್‌ಗಳಲ್ಲಿ ಕೋವಿಡ್  ಮಹಾಮಾರಿಗೆ ಚಿಕಿತ್ಸೆ ನೀಡುವುದು ಕಷ್ಟಕರ ಎಂಬ ಅಪಸ್ವರ ಕೇಳಿಬರುತ್ತಿದೆ.

ಇನ್ನು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಅತಿ ಸೂಕ್ಷ್ಮವಾಗಿರುವುದರಿಮದ ಎಚ್ಚರಿಕೆ ಬಹು ಮುಖ್ಯವಾಗಿದೆ. ಸಿಂಗಲ್‌ ಕಟ್ಟಡಗಳನ್ನು ಹೊಂದಿರುವ ಖಾಸಗಿ ಕ್ಲಿನಿಕ್‌ಗಳಿಗೆ ಇದು ದೊಡ್ಡ ಸವಾಲಾಗಲಿದೆ. ಮುಖ್ಯವಾಗಿ ಒಬ್ಬನೇ ಕೋವಿಡ್ ಸೋಂಕಿತ ಆಸ್ಪತ್ರೆಗೆ ದಾಖಲಾದರೂ ಬೇರೆ ಯಾವ ರೋಗಿಗಳು ಸಹ ನಮ್ಮ ಆಸ್ಪತ್ರೆಗಳತ್ತ ಮುಖ ಮಾಡುವುದಿಲ್ಲ. ಇಂಥ ಸಂದರ್ಭದಲ್ಲಿ ಕೋವಿಡ್‌ ರೋಗಿಗಳನ್ನಷ್ಟೇ ಗಮನಿಸಿ ಆಸ್ಪತ್ರೆ ನಡೆಸುವುದಾದರೂ ಹೇಗೆ ಎಂಬುದು ಖಾಸಗಿ ಆಸ್ಪತ್ರೆಗಳವರ ಅಳಲಾಗಿದೆ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.