ಪ್ರಗತಿ ಸಾಧಿಸದ ಅಧಿಕಾರಿಗಳೇ ನೇರ ಹೊಣೆ

Team Udayavani, Jul 1, 2020, 7:24 AM IST

pragati-nera

ತುಮಕೂರು: ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸುವ ದಿಶಾ ಸಭೆಗೆ ಗೈರಾದ ಅಧಿಕಾರಿಗಳಿಗೆ ತಕ್ಷಣ ನೋಟಿಸ್‌ ನೀಡಿ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ಗೆ ಸಂಸದ ಜಿ.ಎಸ್‌. ಬಸವರಾಜ್‌ ಖಡಕ್‌ ಸೂಚನೆ  ನೀಡಿದರು. ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಸಂಸದರು, ಅತ್ಯಂತ ಪ್ರಮುಖ ವಾದ ಸಭೆಯಲ್ಲಿ ಅಧಿಕಾರಿಗಳು ಈ ಸಭೆಗೆ ಬಂದು ತಮ್ಮ ಇಲಾಖೆಯ ಪ್ರಗತಿಯ ಮಾಹಿತಿ ನೀಡಬೇಕು. ಗೈರು  ಹಾಜರಾದ ಅಧಿಕಾರಿಗಳಿಗೆ ಜಿಲ್ಲೆಗೆ ಮಂಜೂರಾಗಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಸಾಧಿಸದಿದ್ದಲ್ಲಿ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ನಿರೀಕ್ಷಿತ ಗುರಿ ಸಾಧಿಸಿಲ್ಲ: ಕೇಂದ್ರದಿಂದ ಹಣ ಬಿಡುಗಡೆಯಾಗಿದ್ದರೂ ಕೆಲವು ಇಲಾಖೆ ಗಳು ನಿರೀಕ್ಷಿತ ಗುರಿ ಸಾಧಿಸಿಲ್ಲ. ಕೇಂದ್ರದಿಂದ ಅನುದಾನ ಮಂಜೂರಾಗಿದ್ದರೂ ರಾಜ್ಯ ಸರ್ಕಾರದ ಇಲಾಖೆಗಳೇ ಅನುಷ್ಠಾನಕ್ಕೆ ತರಬೇಕಾಗಿರುವುದರಿಂದ ಇಲಾಖಾಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಪ್ರಗತಿ ಸಾಧಿಸಬೇಕು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಇಲಾಖೆಗಳು ತಾವು ಅನುಷ್ಠಾನ ಮಾಡುವ ಯೋಜನೆಗಳ ಮಾಹಿತಿಯನ್ನು ಕಡ್ಡಾಯವಾಗಿ  ಭೌಗೋಳಿಕ ಮಾಹಿತಿ ವ್ಯವಸ್ಥೆ ಪೋರ್ಟಲ್‌ಗೆ ಅಪ್‌ಲೋಡ್‌ ಮಾಡಬೇ ಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಪ್‌ಲೋಡ್‌ ಮಾಡಿ: ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕೈಗೊಂಡಿರುವ ಯೋಜನೆ ಗಳು, ಪ್ರಸ್ತುತ ಪ್ರಗತಿಯಲ್ಲಿರುವ ಯೋಜನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಸಂಪೂರ್ಣ ಅಂಕಿ- ಅಂಶಗಳನ್ನು ತುಮಕೂರು ಜಿಐಎಸ್‌ ಪೋರ್ಟಲ್‌ನಲ್ಲಿ 1 ತಿಂಗಳೊಳಗಾಗಿ ಅಪ್‌ ಲೋಡ್‌ ಮಾಡಬೇಕು. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಲು ಅನುವಾಗುತ್ತದೆ ಎಂದರು.

ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಹಾಗೂ ಬಾಡಿಗೆ ಕಟ್ಟಡ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಗಳಿಗೆ ಸ್ವಂತ ನಿವೇಶನ ಗುರುತಿಸಲು ಗ್ರಾಪಂಗೆ ಸೂಚನೆ  ನೀಡಬೇಕು. ಅಂಗನವಾಡಿ ಕಟ್ಟಡಗಳಲ್ಲಿ ಕಡ್ಡಾಯವಾಗಿ ನೀರು, ವಿದ್ಯುತ್‌ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕಾಮಗಾರಿ ಶೀಘ್ರ ಮುಗಿಸಿ: ತುಮಕೂರು – ದಾವಣಗೆರೆ, ತುಮಕೂರು – ರಾಯ ದುರ್ಗ, ತುಮಕೂರು – ಅರಸೀಕೆರೆ ದ್ವಿಪಥ ರೈಲ್ವೆ ಯೋಜನೆ, ಸಿದ್ಧಗಂಗಾ ಮಠದ ಬಳಿ ರೈಲ್ವೆ ಮೇಲ್ಸೇತುವೆ, ಮತ್ತಿತರ ರೈಲ್ವೆ ಇಲಾಖೆ ಯೋಜನೆಗಳನ್ನು  ತ್ವರಿತವಾಗಿ ಪೂರ್ಣ ಗೊಳಿಸಬೇಕೆಂದರು.

ರೈತರಿಗೆ ವಿಮಾ ಸೌಲಭ್ಯ: ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ರೈತರ ನೋಂದಣಿಗಾಗಿ ಅಧಿಸೂಚನೆ  ಹೊರಡಿಸಲಾಗಿದ್ದು, ಕಳೆದ 2019-20ನೇ ಸಾಲಿನಲ್ಲಿ 40,181 ರೈತರಿಗೆ ಒಟ್ಟಾರೆ 42.36 ಕೋಟಿ ರೂ.ಗಳ ವಿಮಾ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಮಾತನಾಡಿ, ಮೊಬೈಲ್‌ ಮಣ್ಣು  ಪರೀಕ್ಷಾ ಪ್ರಯೋಗಾಲಯವನ್ನು ಒದಗಿಸುವ ಪ್ರಸ್ತಾವನೆ ಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸಲಹೆ ನೀಡಿದರು. ಮೊಬೈಲ್‌ ಮಣ್ಣು ಪರೀಕ್ಷಾ ಪ್ರಯೋಗಾಲಯದಿಂದ ರೈತರ ಜಮೀನಿಗೆ ಭೇಟಿ ನೀಡಿ ಸ್ಥಳದಲ್ಲಿಯೇ ಮಣ್ಣು ಪರೀಕ್ಷೆ  ಮಾಡಬಹುದಾಗಿದೆ ಎಂದು ತಿಳಿಸಿದರು. ಡಾ.ಕೇಶವರಾಜ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ವಂಸಿಕೃಷ್ಣ, ಜಿಪಂ ಅಧ್ಯಕ್ಷೆ ಲತಾ, ಮೇಯರ್‌ ಫ‌ರೀದಾ ಬೇಗಂ ಇದ್ದರು.

ಕೇಂದ್ರದ ಅಟಲ್‌ ಭೂಜಲ್‌ ಯೋಜನೆಗೆ ಜಿಲ್ಲೆಯ 6 ತಾಲೂಕುಗಳು ಆಯ್ಕೆಯಾಗಿದ್ದು, ಉಳಿದ 4 ತಾಲೂಕುಗಳಲ್ಲಿ ಜಲಾಮೃತ ಯೋಜನೆಯನ್ನು ಅನುಷ್ಠಾನಗೊಳಿಸ ಬೇಕು. ಈ ಯೋಜನೆಗಳ ಅನುಷ್ಠಾನ ಕ್ಕಾಗಿ ನೋಡಲ್‌  ಏಜೆನ್ಸಿಯಾಗಿ ಸಣ್ಣ ನೀರಾವರಿ ಇಲಾಖೆಯನ್ನು ನೇಮಕ ಮಾಡಲಾಗಿದೆ. 
-ಜಿ.ಎಸ್‌.ಬಸವರಾಜ್‌, ಸಂಸದ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.