Video Viral : ಮಾಸ್ಕ್ ಧರಿಸದೇ ಬಸ್ ಏರಿದ ಪ್ರಯಾಣಿಕರನ್ನು ಕೆಳಗಿಳಿಸಿದ ನಿರ್ವಾಹಕ
Team Udayavani, Jul 1, 2020, 6:27 PM IST
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬಸ್ಸುಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವಿಕೆಯನ್ನು ಸರಕಾರ ಹಾಗೂ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ ಬಹುತೇಕರು ಈ ನಿಯಮಗಳನ್ನು ನಿರ್ಲಕ್ಷಿಸುವ ಮೂಲಕ ತಮಗೂ ಹಾಗೂ ಇತರರಿಗೂ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇದಕ್ಕೊಂದು ನಿದರ್ಶನವೆಂಬಂತೆ ಕುಂದಾಪುರದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಮಾಸ್ಕ್ ಧರಿಸದೇ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಸ್ಸಿನ ಸಿಬ್ಬಂದಿ ಕೆಳಗಿಸಿದ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.