ಆರೋಗ್ಯ ಕ್ಷೇತ್ರಕ್ಕೆ ಶ್ರೀರಾಮುಲು ಸೇವೆ ಅನುಪಮ


Team Udayavani, Jul 2, 2020, 3:00 AM IST

ಆರೋಗ್ಯ ಕ್ಷೇತ್ರಕ್ಕೆ ಶ್ರೀರಾಮುಲು ಸೇವೆ ಅನುಪಮ

ಆರೋಗ್ಯ ಸಚಿವ ಬಿ. ಶ್ರೀರಾಮುಲು ಅಂದಾಕ್ಷಣ ಥಟ್ಟನೆ ನೆನಪಾಗುವುದು 108 ಆಂಬ್ಯುಲೆನ್ಸ್‌.

ಹೌದು, ಒಂದು ಕಾಲದಲ್ಲಿ ಹಳ್ಳಿಗೆ ಆಂಬ್ಯುಲೆನ್ಸ್‌ ಬಂದರೆ ಆ ಊರಿನ ಶ್ರೀಮಂತರ ಮನೆಯಲ್ಲಿ ಅನಾರೋಗ್ಯವಿದೆ ಎಂದರ್ಥ.

ಬಡವರಿಗೆ ಕಾಯಿಲೆಯಾದರೆ ಆಸ್ಪತ್ರೆಗೆ ಹೋಗಲು ಎತ್ತಿನ ಗಾಡಿ ಕಟ್ಟಬೇಕಿತ್ತು. ಇನ್ನೂ ತುರ್ತು ಎಂದರೆ ಆ ಊರಿನಲ್ಲಿದ್ದ ಟ್ರ್ಯಾಕ್ಟರೇ ಆಂಬ್ಯುಲೆನ್ಸ್‌ ಆಗುತ್ತಿತ್ತು.

ಆದರೆ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮೊದಲ ಸಲ ಅಧಿಕಾರ ಹಿಡಿದಾಗ ಆರೋಗ್ಯ ಸಚಿವರಾಗಿ ಚುಕ್ಕಾಣಿ  ಹಿಡಿದಿದ್ದು ಬಿ. ಶ್ರೀರಾಮುಲು. ಈ ಅವಧಿಯಲ್ಲಿ 108 ಆಂಬ್ಯುಲೆನ್ಸ್‌ ಯೋಜನೆ ಜಾರಿಗೆ ತಂದಿದ್ದು, ಆರೋಗ್ಯ ಕ್ಷೇತ್ರದ ಕ್ರಾಂತಿಕಾರಕ ಬದಲಾವಣೆ ಎನ್ನಬಹುದು.

ಅಪಘಾತ, ಹೆರಿಗೆ ಸೇರಿದಂತೆ ಎಂಥದ್ದೇ ತುರ್ತು ಸಂದರ್ಭದಲ್ಲಿ 108 ಸಂಖ್ಯೆಗೆ ಡಯಲ್‌ ಮಾಡಿದರೆ 15 ರಿಂದ 30 ನಿಮಿಷಗಳಲ್ಲಿ ಆಂಬ್ಯುಲೆನ್ಸ್‌ ಬಂದು ನಿಲ್ಲುತ್ತದೆ. ಇದರಿಂದ  ಲಕ್ಷಾಂತರ ಪ್ರಾಣಗಳು ಉಳಿದಿವೆ ಎಂದರೆ ತಪ್ಪಾಗಲಾರದು.

ಜಿಲ್ಲಾಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡಿದ ಮೊದಲ ಸಚಿವ: ಈಗ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಯೋಗಾಯೋಗ ಎಂಬಂತೆ ಅದೇ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದಾರೆ. ಜನರ ಸಂಕಟಗಳನ್ನು ಅರಿತಿರುವ ಹಿನ್ನೆಲೆಯಲ್ಲಿ ತನ್ನ ಇಲಾಖೆಯಿಂದ ಜನಸಾಮಾನ್ಯರಿಗೆ ಏನು ಮಾಡಬಹುದೆನ್ನುವುದರ ಸ್ಪಷ್ಟತೆ ಇದೆ. ಈ ಕಾರಣಕ್ಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲ ದಿನಗಳಲ್ಲೇ ರಾಜ್ಯದ 10 ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

ವಾಸ್ತವ್ಯದ ಕಾರಣಕ್ಕೆ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ಆರಂಭವಾಗಿವೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಜತೆಗೆ ಬರುವವರಿಗೆ ಉಳಿಯಲು ತಾವಿಲ್ಲದ ಕಾರಣ ಬಹುತೇಕರು ಆಸ್ಪತ್ರೆಯ ಆವರಣ, ಕಾರಿಡಾರ್‌ಗಳಲ್ಲಿ ಮಲಗುತ್ತಿದ್ದರು.

ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ಅಧಿಕಾರಿಗಳ ಎತೆ ಸಮಾಲೋಚನೆ ನಡೆಸಿ, ಎಲ್ಲಾ ಜಿಲ್ಲಾ ಆಸ್ಪತ್ರೆಗಳ ಆವರಣದಲ್ಲಿ ರೋಗಿಗಳ ಸಹಾಯಕರು ಉಳಿಯಲು ಡಾಮೆಂಟರಿ ನಿರ್ಮಿಸುವ ಉದ್ದೇಶ ಹೊಂದಿದ್ದಾರೆ. ಡಾರ್ಮೆಂಟರಿ ನಿರ್ಮಿಸುವುದರಿಂದ ರಾತ್ರಿ ಸುರಕ್ಷಿತವಾಗಿ ಮಲಗಲು, ಶೌಚ, ಸ್ನಾನ, ಊಟೋಪಚಾರ ಕೂಡಾ ಆಗಲಿದೆ. ಇದೂ ಕೂಡಾ 108 ಆಂಬ್ಯುಲೆನ್ಸ್‌ ಯೋಜನೆಯಂತೆ ಜನೋಪಯೋಗಿ ಆಗುವುದರಲ್ಲಿ ಎರಡು ಮಾತಿಲ್ಲ.

ಮೂರು ತಿಂಗಳಲ್ಲಿ 12 ಸಾವಿರ ಕಿ.ಮೀ ಪ್ರವಾಸ

ಅಧಿಕಾರದ ಚುಕ್ಕಾಣಿ ಹಿಡಿದು ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಬೇಕು ಎನ್ನುವ ಹೊತ್ತಿಗೆ ಇಡೀ ಜಗತ್ತಿಗೆ ಕೋವಿಡ್ 19 ಮಹಾಮಾರಿ ಬಂದಪ್ಪಳಿಸಿದೆ. ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೋವಿಡ್ 19 ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ ಬಗ್ಗೆ ಖುದ್ದು ಪ್ರಧಾನಿಯೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ 19 ವೈರಸ್‌ ಆತಂಕದ ಕಾರಣಕ್ಕೆ ಎಲ್ಲರೂ ಮನೆಯಲ್ಲೇ ಉಳಿದರೆ ಆರೋಗ್ಯ ಸಚಿವ ಬಿ.ಶ್ರೀರಾಮುಲು  ಮಾತ್ರ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಓಡಾಡಿದರು. ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಪರಿಸ್ಥಿತಿ ನಿಭಾಯಿಸುವುದು ಹೇಗೆ? ಆಗಿರುವ ಸಿದ್ಧತೆಗಳೇನು? ಆಗಬೇಕಾದ್ದೇನು? ಹೀಗೆ ಎಲ್ಲವನ್ನೂ ಅವಲೋಕಿಸಿದರು.

ಈ ಮೂರು ತಿಂಗಳ ಅವಧಿಯಲ್ಲಿ ಅವರ ಓಡಾಟ ಬರೋಬ್ಬರಿ 12 ಸಾವಿರ ಕಿ.ಮೀ. ಕೋವಿಡ್ 19 ಸಂದರ್ಭ ಸಮರ್ಥವಾಗಿ ನಿಭಾಯಿಸುವ ಜತೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರಯೋಗಾಲಯ ತೆರೆಯುವ ಮೂಲಕ ಫಲಿತಾಂಶ ವೇಗವಾಗಿ ಸಿಗುವಂತೆ ಮಾಡಿದ್ದಾರೆ. ಜತೆಗೆ ಸ್ಯಾನಿಟೈಸರ್‌, ಮಾಸ್ಕ್ ಆಹಾರದ ಕಿಟ್‌ಗಳ ವಿತರಣೆಯಲ್ಲೂ ಸಚಿವರ ಕಾರ್ಯವೈಖರಿ ಪ್ರಶಂಸನೀಯ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಮಾಡಿದ ಆರೋಗ್ಯ ಸಚಿವ ಶ್ರೀ ರಾಮುಲು.

ವೈದ್ಯಕೀಯ ಪರಿಕರ ವಿತರಿಸುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.