ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಸರ್ಕಾರ ಚಿಂತನೆ

Team Udayavani, Jul 2, 2020, 5:14 AM IST

sakkare-chintane

ಮದ್ದೂರು: ಸಕ್ಕರೆ ಕಾರ್ಖಾನೆಯನ್ನು ಒ ಅಂಡ್‌ ಎಂ ವ್ಯವಸ್ಥೆಯಲ್ಲಿ ಪ್ರಾರಂಭಿಸಲು ಸರ್ಕಾರ ಚಿಂತನೆ ಮಾಡಿದೆ. ಈ ಸಂಬಂಧ ಜಿಲ್ಲೆಯ ಶಾಸಕರು, ಪ್ರಗತಿಪರ ಸಂಘಟನೆಗಳ ಜತೆಯಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು,  ಶೀಘ್ರವಾಗಿ ಕಾರ್ಖಾನೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಕಬ್ಬು  ಬೆಳೆಗಾರರು ಯಾವುದೇ ಆತಂಕಪಡಬಾರದು. ಕಟಾವಿಗೆ ಬಂದಿರುವ ಕಬ್ಬನ್ನು ಬೇರೆ ಕಾರ್ಖಾನೆಗೆ ಸರಬರಾಜು ಮಾಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ರೈತರಿಗೆ ತೊಂದರೆಯಾಗದಂತೆ ಶೀಘ್ರವಾಗಿ ಭತ್ತ ಖರೀದಿ ಕೇಂದ್ರ  ತೆರೆಯಲಾಗುವುದು. ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳ ಜತೆಯಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋವಿಡ್‌ 19 ತಡೆಗೆ ಅಗತ್ಯ ಕ್ರಮ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರಿಗೆ ವೆಂಟಿಲೇಟರ್‌ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಲಾಗಿದೆ. ಕೋವಿಡ್‌ 19 ತಡೆಗೆ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದೇವೆ. ಮುಂಬೈ, ಚೆನ್ನೈ ಹಾಗೂ ಹೊರ  ಜಿಲ್ಲೆಗಳಿಗೆ ಹೋಗಿ ಬರುತ್ತಿರುವ ವ್ಯಕ್ತಿಗಳಿಂದ ಜಿಲ್ಲೆಯಲ್ಲಿ ಕೋವಿಡ್‌ 19 ಹರಡುತ್ತಿದೆ. ಯಾರು ಬೇರೆ ಜಿಲ್ಲೆ ಅಥವಾ ರಾಜ್ಯಗಳಿಗೆ ಪ್ರಯಾಣ ಮಾಡುವ ವ್ಯಕ್ತಿಗಳು ಸ್ವಲ್ಪ ದಿನ ಸ್ಥಳದಲ್ಲೇ ಉಳಿದುಕೊಳ್ಳುವುದು ಉತ್ತಮ ಎಂದರು.

ಸಿಎಂ ಕಾರ್ಯಕ್ಕೆ ಮೆಚ್ಚುಗೆ: ಕೋವಿಡ್‌ 19 ನಿಯಂತ್ರಣದಲ್ಲಿ ಸಿಎಂ ಬಿ.ಎಸ್‌ .ಯಡಿಯೂರಪ್ಪ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕು ತಡೆಗೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿರು ವುದನ್ನು ವಿರೋಧ ಪಕ್ಷದ ನಾಯಕರೇ ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ: ರಾಜ್ಯದಲ್ಲಿ ಕೋವಿಡ್‌ 19 ಸೇನಾನಿಗಳಾಗಿ ಕೆಲಸ ನಿರ್ವಹಿಸುತ್ತಿರುವ 42680 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.  ಬಿಜೆಪಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಆಶಾ ಕಾರ್ಯಕರ್ತೆತರ ವೇತನ ಹೆಚ್ಚಳಕ್ಕೆ ಸರ್ಕಾರದ ಚಿಂತನೆ ನಡೆಸಿದೆ. ಶೇ.98ರಷ್ಟು ರೈತರಿಗೆ ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಸೌಲಭ್ಯ  ನೀಡಲಾಗಿದೆ. ಆದರೆ, ಸಮರ್ಪಕವಾದ ದಾಖಲೆ ನೀಡದ ಪರಿಣಾಮ ಕೆಲ ರೈತರಿಗೆ ಸಾಲ ನೀಡಲು ವಿಳಂಬವಾಗುತ್ತಿದೆ.

ಅರ್ಹ ಫ‌ಲಾನುಭವಿಗಳು ಸಮರ್ಪಕವಾದ ದಾಖಲೆ ನೀಡಿ ಸಾಲ ಪಡೆಯಬೇಕು ಎಂದು ತಿಳಿಸಿದರು. ಮನ್‌ಮುಲ್‌ ನಿರ್ದೇಶಕ ಎಸ್‌.ಪಿ.ಸ್ವಾಮಿ, ಎಪಿಎಂಸಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಉಪಾಧ್ಯಕ್ಷ ಎಚ್‌.ಪಿ.ಸ್ವಾಮಿ, ನಿರ್ದೇಶಕರಾದ ಸುನಿಲ್‌ಕುಮಾರ್‌, ಬುಲೆಟ್‌ ಬಸವರಾಜು, ಮುಖಂಡರಾದ ಚಾಮನಹಳ್ಳಿ ಸ್ವಾಮಿ, ಮಧುಕುಮಾರ್‌,  ತಹಶೀಲ್ದಾರ್‌ ವಿಜಯಕುಮಾರ್‌ ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.