ಮನೆ ಕಡೆ ಬರಬೇಡಿ; ಕಾಲ್‌ ಮಾಡಿ.!

Team Udayavani, Jul 2, 2020, 5:37 AM IST

hasige bed

ಬೆಂಗಳೂರು: ನಗರದಲ್ಲಿ ಕೋವಿಡ್‌ 19 ಸೋಂಕು ಆತಂಕ ತೀವ್ರವಾಗುತ್ತಿರುವ ಬೆನ್ನಲ್ಲೇ ಪಾಲಿಕೆ ಸದಸ್ಯರು ತಮ್ಮ ಬೆಂಬಲಿಗರು ಹಾಗೂ ಸಾರ್ವಜನಿಕರಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಕೇಳಿಬರುತ್ತಿದೆ. ಈಗಾಗಲೇ ಮೂವರು  ಸದಸ್ಯರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದು ಉಳಿದ ಸದಸ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಸದ್ದಿಲ್ಲದೆ ಸಾರ್ವಜನಿಕರಿಂದ ಹಾಗೂ ಖುದ್ದು ಅವರ ಬೆಂಬಲಿಗರಿಂದ ಅಂತರ ಕಾಯ್ದುಕೊಳ್ಳಿತ್ತಿದ್ದಾರೆ. ತಮ್ಮ ವಾರ್ಡ್‌ನ  ನಿವಾಸಿಗಳಿಗೆ “ನಿವಾಸದ ಬಳಿ ಆಗಮಿಸಬೇಡಿ. ಸಮಸ್ಯೆಗಳಿದ್ದರೆ, ನಾವು ಕೂಡಲೇ ಸ್ಪಂದಿಸುತ್ತೇವೆ ನಮಗೆ ಜಸ್ಟ್‌ ಕರೆ ಮಾಡಿ. ಪರಿಹರಿಸುತ್ತೇವೆ.

ನೀವು ಮನೆಯ ಹತ್ತಿರ ಆಗಮಿಸುವುದರಿಂದ ನಿಮ್ಮ ಮತ್ತು ನಮ್ಮ ಆರೋಗ್ಯಕ್ಕೂ ತೊಂದರೆ ಉಂಟಾಗಬಹುದು. ಹೀಗಾಗಿ, ನೇರ ಭೇಟಿಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ’ ಎಂದು ಮನವಿ ಮಾಡುತ್ತಿರುವುದು ವರದಿಯಾಗುತ್ತಿದೆ. ಅಂದಹಾಗೆ, ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್‌ ಪಾಷಾ, ಸಿದ್ಧಾಪುರ ವಾರ್ಡ್‌  ಸದಸ್ಯ ಎ. ಮುಜಾಹಿದ್‌ ಪಾಷಾ ಹಾಗೂ ಜಗಜೀವನ್‌ರಾಮ್‌ನಗರ ವಾರ್ಡ್‌ ಪಾಲಿಕೆ ಸದಸ್ಯೆ ಸೀಮಾ ಅಪ್ತಾಫ್ ಖಾನ್‌ ಅವರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಇಮ್ರಾನ್‌ ಪಾಷಾ ಗುಣಮುಖರಾಗಿದ್ದಾರೆ.

ಬೆಡ್‌ ಸಿಗದೇ ಇಬ್ಬರು ಮೃತ: ಸಕಾಲದಲ್ಲಿ ಹಾಸಿಗೆಗಳು ಸಿಗದೆ, ಆ್ಯಂಬುಲೆನ್ಸ್‌ ಬಾರದೆ ಇಬ್ಬರು ಸೋಂಕಿತರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಚೋಳರ ಪಾಳ್ಯದ 43 ವರ್ಷದ ವ್ಯಕ್ತಿ ಹಾಗೂ ಮಾಗಡಿ ರಸ್ತೆಯ ಟೋಲ್‌ ಗೇಟ್‌  ಬಳಿಯ 52 ವರ್ಷದ ಸೋಂಕಿತರು ಆಸ್ಪತ್ರೆಗಳಲ್ಲಿ ಬೆಡ್‌ ಗಳು ಸಿಗದೆ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಮಾಗಡಿ ರಸ್ತೆಯ ಟೋಲ್‌ಗೇಟ್‌ ಬಳಿಯ 52 ವರ್ಷದ ವ್ಯಕ್ತಿ 5 ದಿನಗಳಿಂದ ಕೆಮ್ಮು ಶೀತಜ್ವರದಿಂದ ಬಳಲುತ್ತಿದ್ದು,  ವಿಜಯ ನಗರದ ಮಾರುತಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು.

ನಂತರ ಗುರುವಾರ ರಾತ್ರಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದಾರೆ. ಭಾನು ವಾರ ಸೋಂಕು ದೃಢಪಟ್ಟಿದ್ದು, ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯು ವುದಾಗಿ ಬಿಬಿಎಂಪಿ ಆರೋಗ್ಯ  ಅಧಿಕಾರಿಗಳು ತಿಳಿಸಿ, ಮೂರು ದಿನಗಳಾದರೂ ಬಂದಿಲ್ಲ. ಸೋಮ ವಾರ ಬಿಬಿ ಎಂಪಿ ಸಿಬ್ಬಂದಿಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ.ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆ ವಾಹನದಲ್ಲಿ ತೆರಳಿದ್ದಾರೆ. ಮಂಗಳವಾರ ರಾತ್ರಿ 11ರಿಂದ ಬೆಳಗ್ಗೆ  6ರವರೆಗೆ 9 ಆಸ್ಪತ್ರೆಗಳನ್ನು ತಿರುಗಿದ್ದಾರೆ.

ಯಾರೂ ಚಿಕಿತ್ಸೆ ನೀಡಿಲ್ಲ. ಪರಿಣಾಮ ಸೋಂಕಿತರು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ವಿಕ್ಟೋ ರಿಯಾ ಆಸ್ಪತ್ರೆಯಲ್ಲಿ ಮಾಹಿತಿ ನೀಡುತ್ತಿಲ್ಲ ಎಂದು ಕುಟುಂಬ ಸ್ಥರು ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಅದೇ ರೀತಿ, ಚೋಳರಪಾಳ್ಯದ ವ್ಯಕ್ತಿಯೊಬ್ಬರಿಗೆ ಸೋಂಕು ಬಂದಿದ್ದು, ವಿಕ್ಟೋರಿಯಾ, ಕಿಮ್ಸ್‌, ಕೆ.ಸಿ. ಜನರಲ್‌ ಸೇರಿದಂತೆ ಖಾಸಗಿ ಆಸ್ಪತ್ರೆಗೆ ಅಲೆದಾಡಿದರೂ, ಬೆಡ್‌ ಸಿಕ್ಕಿಲ್ಲ. ಕೊನೆಗೆ ಮನೆ ಯಲ್ಲಿಯೇ ಪ್ರತ್ಯೇಕ  ಕೊಠಡಿಯಲ್ಲಿ ಇರಿಸಿದ್ದರು.

ಬುಧವಾರ ಬೆಳಗ್ಗೆ ನೋಡಿದಾಗ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತದೇಹವನ್ನು ವಿಕ್ಟೋರಿಯಾಗೆ ಕೊಂಡೊಯ್ಯಲಾಗಿದೆ. ಬೆಡ್‌ಗಳ ಕೊರತೆಯಿಂದ ಮಂಗಳವಾರ ಸೋಂಕಿತರೊಬ್ಬರು ಆ್ಯಂಬುಲೆನ್ಸ್‌ನಲ್ಲಿಯೇ ಇಡೀ ರಾತ್ರಿ ಕಳೆದಿದ್ದಾರೆ. ಸೋಂಕಿತರಿಗೆ ವೆಂಟಿಲೇಟರ್‌ ಅಗತ್ಯವಿದ್ದು, ಮಂಗಳವಾರ ಸಂಜೆ 6ರಿಂದ 11ರವರೆಗೆ ಆ್ಯಂಬುಲೆನ್ಸ್‌ನಲ್ಲಿಯೇ ಉಳಿಯುವಂತಾಯಿತು. ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ  ಕರೆದೊಯ್ದರು.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.