ಟೋಟಲ್‌ ಸ್ಟೇಷನ್‌ ಸರ್ವೆ ಅವ್ಯವಹಾರದಲ್ಲಿ ಅಧಿಕಾರಿ?

Team Udayavani, Jul 2, 2020, 5:44 AM IST

total-sation

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳ ವಿಸ್ತೀರ್ಣ ಪತ್ತೆಗೆ ನಡೆಸಲಾದ ಟೋಟಲ್‌ ಸ್ಟೇಷನ್‌ ಸರ್ವೆ ಆಧರಿಸಿ ವ್ಯತ್ಯಾಸ ವಿಸ್ತೀರ್ಣ ತೆರಿಗೆ ನಿಗದಿ ಮಾಡುವುದರಲ್ಲಿ ಆಗಿರುವ ಅವ್ಯವಹಾರದಲ್ಲಿ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರ ಸಹೋದರರ ಹೆಸರು (ಅವರೂ ಅಧಿಕಾರಿ) ಕೇಳಿಬರುತ್ತಿದ್ದು, ಇದರಿಂದಲೇ ವರದಿ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಟೋಟಲ್‌ ಸ್ಟೇಷನ್‌ ಸರ್ವೆ ವರದಿಗೆ ಸಂಬಂಧಿಸಿದಂತೆ ಜೂನ್‌ 12 ಮತ್ತು  30ರಂದು ಎರಡು ಬಾರಿ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ಕೌನ್ಸಿಲ್‌ ಸಭೆಯಲ್ಲಿ ಟೋಟಲ್‌ ಸ್ಟೇಷನ್‌ ಸರ್ವೆಯ ಬಗ್ಗೆ ವರದಿ ಮಂಡನೆ ಮಾಡಿದ್ದರು. “ಈ ಅವ್ಯವಹಾರದ ಹಿಂದೆ ಕಂದಾಯ ವಿಭಾಗದ ಹಿರಿಯ ಅಧಿಕಾರಿಯ ಸಹೋದರರೊಬ್ಬರು ಬಿಬಿಎಂಪಿಯ ವಲಯ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿದ್ದು, ಅವರೂ ಇದರಲ್ಲಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ವರದಿ ನೀಡುವುದಕ್ಕೆ ವಿಳಂಬವಾಗುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ಪಾಲಿಕೆ ಸದಸ್ಯರೊಬ್ಬರು ಹೇಳಿದರು.

ಇದಕ್ಕೆ ಪುಷ್ಟಿ ನೀಡುವಂತೆ ಎರಡೆರಡು ಬಾರಿ ವರದಿ ಮಂಡನೆಯಾದರೂ, ಇದರಲ್ಲಿ ಪೂರ್ಣ ಮಾಹಿತಿ ನೀಡದೆ ಇರುವುದು ಅನುಮಾನಕ್ಕೆ ಕಾರಣವಾಗಿದೆ. ಬಿಬಿಎಂಪಿಗೆ ಟೋಟಲ್‌ ಸ್ಟೇಷನ್‌ ಸರ್ವೆ ಒಟ್ಟು  321 ಕೋಟಿ ರೂ. ನಷ್ಟ ಉಂಟಾಗಿದೆ. ಆದರೆ, ಜೂನ್‌ 12ಕ್ಕೆ ಮಂಡನೆಯಾದ ವರದಿಯಲ್ಲಿ ಅಂದಾಜು 41.47 ಕೋಟಿ ರೂ. ಎಂದು ಉಲ್ಲೇಖ ಮಾಡಲಾಗಿತ್ತು. ಒಟ್ಟು ಮೊತ್ತ ಉಲ್ಲೇಖ ಮಾಡಿರಲಿಲ್ಲ. ಅದೇ ರೀತಿ, ಜೂನ್‌ 30ಕ್ಕೆ ಮಂಡನೆ  ಮಾಡಿದ ವರದಿಯಲ್ಲಿ 2017-18ನೇ ಸಾಲಿನವರಗೆ ಮಾತ್ರ ವರದಿಯನ್ನು ಪರಿಶೀಲನೆ ಮಾಡಲಾಗಿದ್ದು, ಇದರಲ್ಲಿ 251 ಕೋಟಿ ರೂ. ನಷ್ಟ ಉಂಟಾಗಿದೆ. ಉಳಿದ ವರದಿಯನ್ನು ಮುಂದಿನ ಕೌನ್ಸಿಲ್‌ ಸಭೆಯಲ್ಲಿ ಮಂಡನೆ ಮಾಡುವುದಾಗಿ  ಆಯುಕ್ತರು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?: ನಗರದಲ್ಲಿ ಆಸ್ತಿ ತೆರಿಗೆ ಮಾಲಿಕರು ಸ್ವಯಂಘೋಷಿತ ಆಸ್ತಿ ತೆರಿಗೆ ವ್ಯವಸ್ಥೆ (ಎಸ್‌ಎಎಸ್‌) ಅಡಿ ತಪ್ಪು ಮಾಹಿತಿ ನೀಡಿರುವುದನ್ನು ಪತ್ತೆಹಚ್ಚುವ ಉದ್ದೇಶದಿಂದ ಬಿಬಿಎಂಪಿ ಟೋಟಲ್‌ ಸ್ಟೇಷನ್‌ ಸರ್ವೆ  (ಟಿಎಸ್‌ಎಸ್‌) ಯೋಜನೆಯನ್ನು ಪರಿಚಯಿಸಿತ್ತು. ಆದರೆ, ಇದರಲ್ಲಿಯೂ ಅವ್ಯವಹಾರ ನಡೆದಿದ್ದು, ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವುದ ರಿಂದ ಪಾಲಿಕೆಗೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆ ಎಂದು ವಿರೋಧ ಪಕ್ಷದ ಮಾಜಿ  ನಾಯಕ ಪದ್ಮನಾಭರೆಡ್ಡಿ ಅವರು ಆರೋಪಿಸಿದ್ದರು. ಈ ಸಂಬಂಧ ಬಿಬಿಎಂಪಿ ಆಯುಕ್ತರು ಪ್ರತ್ಯೇಕ ಉಪ ಸಮಿತಿ ರಚಿಸಿದ್ದರು.

ನಗರದಲ್ಲಿನ ಕಟ್ಟಡಗಳ ಟೋಟಲ್‌ ಸ್ಟೇಷನ್‌ ಸರ್ವೆ ನಡೆದ ನಂತರದ ಎಸ್‌ಎಎಸ್‌ ಹಾಗೂ ಟಿಎಸ್‌ ಎಸ್‌ನಲ್ಲಿನ ವ್ಯತ್ಯಾಸದ ಆಧಾರದ ಮೇಲೆ ಆಸ್ತಿ ತೆರಿಗೆ  ಪರಿಷ್ಕರಿಸಿ, ವಿಶೇಷ ಸೂಚನಾ ಪತ್ರ ನೀಡಲಾಗುತ್ತಿದೆ. ಆದರೆ, ಈ ರೀತಿ ಮರುಪರಿಶೀಲನೆ ಮಾಡುವ ಹಂತದಲ್ಲಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು 2019ರ  ಅಕ್ಟೋಬರ್‌ನಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ, ಈ ಸಂಬಂಧ ಆತಂರಿಕ ತನಿಖೆ ನಡೆದಿದ್ದು, ಅವ್ಯವಹಾರದ ಬಗ್ಗೆ ಹಂತ ಹಂತವಾಗಿ ವರದಿ ಮಂಡನೆಯಾಗುತ್ತಿದೆ.

ಟೋಟಲ್‌ ಸ್ಟೇಷನ್‌ ಸರ್ವೆ ವರದಿ ಸಂಬಂಧ ಇದೇ ಶನಿವಾರ ಮೇಯರ್‌ ಎಂ. ಗೌತಮ್‌ಕುಮಾರ್‌ ಹಾಗೂ ವಿರೋಧ ಪಕ್ಷದ ಮಾಜಿ ನಾಯಕ ಪದ್ಮನಾಭ ರೆಡ್ಡಿ ಅವರೊಂದಿಗೆ ಚರ್ಚೆ ಮಾಡಲಾಗುವುದು. ಸಂಪೂರ್ಣ ವರದಿಯನ್ನು  ಮುಂದಿನ ಕೌನ್ಸಿಲ್‌ ಸಭೆಯಲ್ಲಿ ಮಂಡನೆ ಮಾಡಲಾಗುವುದು. 
-ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.